ಕ್ರೀಡೆಯಲ್ಲಿ ಭಾಗಿಯಾಗಿ ಆರೋಗ್ಯ ಕಾಪಾಡಿಕೊಳ್ಳಿ

KannadaprabhaNewsNetwork |  
Published : Dec 01, 2025, 01:00 AM IST
7 | Kannada Prabha

ಸಾರಾಂಶ

ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಹಳ್ಳಿ ಸೊಗಡಿನ ಹಗ್ಗ- ಜಗ್ಗಾಟ ಸ್ಪರ್ಧೆಯಲ್ಲಿ ಇಷ್ಟೊಂದು ಜನರು ಭಾಗವಹಿಸಿದ್ದು ನಿಜಕ್ಕೂ ಖುಷಿ ತಂದಿದೆ

ಕನ್ನಡಪ್ರಭ ವಾರ್ತೆ ಮೈಸೂರು

ಎಲ್ಲರೂ ಕ್ರೀಡೆಯಲ್ಲಿ ಭಾಗಿಯಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಂಸದ ಯದುವೀರ್‌ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದರು.

ಮೈಸೂರಿನ ವಿವಿ ಓವಲ್‌ ಮೈದಾನದಲ್ಲಿ ಸಂಸದರ ಕ್ರೀಡಾ ಮಹೋತ್ಸವದ ಫಿಟ್‌ಯುವ ಫಾರ್‌ವಿಕಸಿತ್‌ಭಾರತದ ಯೋಜನೆಯಲ್ಲಿ ಭಾನುವಾರ ಆಯೋಜಿಸಿದ್ದ ಹಗ್ಗ- ಜಗ್ಗಾಟ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿಗಳ ಆಶಯದಂತೆ ನಿರಂತರವಾಗಿ ಕ್ರೀಡಾ ಸ್ಪರ್ಧೆ ಆಯೋಜಿಸುತ್ತಿದ್ದು, ಇಂದು ನಡೆದ ಹಗ್ಗ- ಜಗ್ಗಾಟ ಕ್ರೀಡೆ ಭಾರಿ ಯಶಸ್ಸು ಕಂಡಿದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಹಳ್ಳಿ ಸೊಗಡಿನ ಹಗ್ಗ- ಜಗ್ಗಾಟ ಸ್ಪರ್ಧೆಯಲ್ಲಿ ಇಷ್ಟೊಂದು ಜನರು ಭಾಗವಹಿಸಿದ್ದು ನಿಜಕ್ಕೂ ಖುಷಿ ತಂದಿದೆ ಎಂದರು.

ಶಾಸಕ ಟಿ.ಎಸ್. ಶ್ರೀವತ್ಸ, ಮಾಜಿ‌ಶಾಸಕ ಎಲ್. ನಾಗೇಂದ್ರ, ಮುಖಂಡರಾದ ನಿಖಿಲೇಶ್, ಕೇಬಲ್ ಮಹೇಶ್, ದಿನೇಶ್ ಗೌಡ, ರಾಕೇಶ್ ಭಟ್, ರವಿ, ಗೋಪಾಲ್ ಅರಸು ಮೊದಲಾದವರು ಇದ್ದರು. ಬಹುಮಾನ ವಿಜೇತರು

ಈ ಪಂದ್ಯಾವಳಿಯಲ್ಲಿ 35 ಹೆಚ್ಚು ತಂಡಗಳು ಹಾಗೂ 300 ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು. ಪುರುಷರ ವಿಭಾಗ- 560 ಕೆ.ಜಿ.ಗಿಂತ ಕಡಿಮೆ ವಿಭಾಗದಲ್ಲಿ ಮೈಸೂರು ಪ್ಯಾಂಥರ್ಸ್ ಪ್ರಥಮ, ಯದುವೀರ್ ಬ್ರಿಗೇಡ್ ದ್ವಿತೀಯ ಸ್ಥಾನ ಪಡೆಯಿತು. 640 ಕೆ.ಜಿ.ಗಿಂತ ಕಡಿಮೆ ವಿಭಾಗದಲ್ಲಿ ಫೈರ್ ಫೈಟರ್ಸ್ ಪ್ರಥಮ, ಮೈಸೂರು ಸಿಟಿ ಪೊಲೀಸ್ ತಂಡ 2ನೇ ಸ್ಥಾನ ಗಳಿಸಿದೆ. 720 ಕೆ.ಜಿ.ಗಿಂತ ಕಡಿಮೆ ತೂಕದ ವಿಭಾಗದಲ್ಲಿ ಮೈಸೂರು ಟೈಗರ್ ಪ್ರಥಮ, ಸಿಎಫ್ಒ ಝೋನ್ ಮೈಸೂರು ಫೈರ್ ಎರಡನೇ ಸ್ಥಾನ ಗಿಟ್ಟಿಸಿಕೊಂಡಿದೆ.

ಮಹಿಳೆಯರ ವಿಭಾಗ- 600 ಕೆ.ಜಿ.ಗಿಂತ ಕಡಿಮೆ ವಿಭಾಗದಲ್ಲಿ ಮಾರಮ್ಮ ಕೊಡಗು ತಂಡ, ಮೈಸೂರು ಬಿಜೆಪಿ ಮಹಿಳಾ ಮೋರ್ಚಾ ಕ್ರಮವಾಗಿ ಮೊದಲೆರಡು ಸ್ಥಾನ ಪಡೆಯಿತು. 540 ಕೆ.ಜಿ ಕಡಿಮೆ ತೂಕದ ವಿಭಾಗದಲ್ಲಿ ಕೂರ್ಗ್ ವಿಂಗ್ಸ್ ಪ್ರಥಮ ಹಾಗೂ ರೈನ್ ಬೋ ವಾರಿಯರ್ಸ್ ತಂಡ 2ನೇ ಸ್ಥಾನ ಪಡೆಯಿತು. ಪ್ರತಿ ವಿಭಾಗದಲ್ಲಿ ವಿಜೇತ ತಂಡಗಳಿಗೆ ಟ್ರೋಫಿ, ಪದಕ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತೀಯರ ಕರೆತರಲು ವಿಶೇಷ ವಿಮಾನ ಮಾಡಿ: ಮೋದಿಗೆ ಸಿಎಂ ಸಿದ್ದು ಪತ್ರ
100ಕ್ಕೂ ಕನ್ನಡಿಗರ ಹೊತ್ತು ಬಂತು ಮೊದಲ ವಿಮಾನ