ಕನ್ನಡಪ್ರಭ ವಾರ್ತೆ ಬೆಂಗಳೂರು
‘ಇವಿ ಪವರ್ ಪ್ಲಸ್’ ಬಸ್ ಸೇವೆ ಆರಂಭಿಸಿದ್ದಕ್ಕಾಗಿ ವಿದ್ಯುತ್ ವಾಹನಗಳ ಕೈಗಾರಿಕಾ ನಾಯಕತ್ವ ಪ್ರಶಸ್ತಿ, ಅತ್ಯುತ್ತಮ ಬ್ರ್ಯಾಂಡಿಂಗ್ ಮತ್ತು ಮಾರ್ಕೆಟಿಂಗ್ ಉಪಕ್ರಮಕ್ಕೆ ಜಾಗತಿಕ ಬ್ರ್ಯಾಂಡ್ ಉತ್ಕೃಷ್ಟತೆ ಪ್ರಶಸ್ತಿ, ಅತ್ಯುತ್ತಮ ವಿನೂತನ ಉಪಕ್ರಮ ಸಂಸ್ಥೆ ವಿಭಾಗದ ವರ್ಷದ ವ್ಯಾವಹಾರಿಕ ನಾಯಕತ್ವ ಪ್ರಶಸ್ತಿ, ಕಾರ್ಮಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಸಂಸ್ಥೆ ವಿಭಾಗದ ಜಾಗತಿಕ ಮಾನವ ಸಂಪನ್ಮೂಲ ಉತ್ಕೃಷ್ಟತೆ ಪ್ರಶಸ್ತಿ ಹಾಗೂ ಜಾಗತಿಕ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಜಾಗತಿಕ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ನಿಗಮಕ್ಕೆ ಲಭಿಸಿದೆ. ಅದೇ ರೀತಿ, ಮಾರ್ಕೆಟಿಂಗ್ ಮತ್ತು ಪ್ರಚಾರ ವಿಭಾಗದಲ್ಲಿ ಉತ್ತಮ ಸೇವೆ ಸಲ್ಲಿಸಿದಕ್ಕಾಗಿ ಡಾ.ಟಿ.ಎಸ್.ಲತಾ ಅವರಿಗೆ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ ನೀಡಲಾಗಿದೆ.
ಮುಂಬೈನಲ್ಲಿ ಶನಿವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಮೆರಿಕ ಮೂಲದ ನೀನಾ ಇ ಉಡರ್ಡ್ ಅಸೋಸಿಯೇಟ್ಸ್‌ನ ಅಧ್ಯಕ್ಷೆ ನೀನಾ ಇ. ಉಡರ್ಡ್ ಹಾಗೂ ದುಬೈನ ಓಝೋನ್ ಗ್ರೂಪ್‌ನ ಮಾಲೀಕರಾದ ಡಾ. ಓವಿಲಿಯಾ ಫೆರ್ನಾಂಡಿಸ್ ಅವರು ಡಾ. ಟಿ.ಎಸ್. ಲತಾ ಹಾಗೂ ವಿಭಾಗೀಯ ತಾಂತ್ರಿಕ ಎಂಜಿನಿಯರ್ ಎಚ್.ಎಸ್. ಸತೀಶ್, ವಿಭಾಗೀಯ ತಾಂತ್ರಿಕ ಶಿಲ್ಪಿ ಸಿ.ಸೌಮ್ಯಾ, ಸಹಾಯಕ ಆಡಳಿತಾಧಿಕಾರಿ ಎಸ್.ಶಿಭಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.