ಪಂಚ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ: ಚಿದಾನಂದಪ್ಪ

KannadaprabhaNewsNetwork |  
Published : Sep 10, 2025, 01:03 AM IST
ಕುರುಗೋಡು ತಾಲೂಕು ಸೋಮಸಮುದ್ರ ಗ್ರಾಮದಲ್ಲಿ ಜರುಗಿದ ಪಂಚ ಗ್ಯಾರಂಟಿ ಯೋಜನೆಗಳ ಸಂವಾದ ಕಾರ್ಯಕ್ರಮಕ್ಕೆ ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಚಾಲನೆ ನೀಡಿದರು.  | Kannada Prabha

ಸಾರಾಂಶ

ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ದೇಶದಲ್ಲಿಯೇ ಮಾದರಿ ಯೋಜನೆಗಳಾಗಿವೆ.

ಸೋಮಸಮುದ್ರ: ಗ್ಯಾರಂಟಿ ನಡೆ ಗ್ರಾಮ ಪಂಚಾಯತಿ ಕಡೆ

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ

ಕನ್ನಡಪ್ರಭ ವಾರ್ತೆ ಬಳ್ಳಾರಿ

ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ದೇಶದಲ್ಲಿಯೇ ಮಾದರಿ ಯೋಜನೆಗಳಾಗಿವೆ ಎಂದು ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಹೇಳಿದರು.

ಗ್ಯಾರಂಟಿ ನಡೆ ಗ್ರಾಮ ಪಂಚಾಯಿತಿ ಕಡೆ ಕಾರ್ಯಕ್ರಮದಡಿ ಕುರುಗೋಡು ತಾಲೂಕು ಸೋಮಸಮುದ್ರ ಗ್ರಾಮದ ಗ್ರಾಪಂನಲ್ಲಿ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಯೋಜನೆಗಳ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜನಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ತಲುಪಿಸಬೇಕು ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳ ಮಹಾದಾಸೆಯಾಗಿದ್ದು, ಅವರ ಆದೇಶದಂತೆ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್.ಎಂ. ರೇವಣ್ಣ ಮತ್ತು ಉಪಾಧ್ಯಕ್ಷ ಮೆಹರೋಜ್ ಖಾನ್ ಅವರ ನಿರ್ದೇಶನ ಮೂಲಕ ಗ್ರಾಪಂ ಮಟ್ಟದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವಲ್ಲಿ ಆಗುವ ಲೋಪದೋಷಗಳ ಕುರಿತು ಚರ್ಚಿಸಲು ಗ್ಯಾರಂಟಿ ನಡೆ ಗ್ರಾಮ ಪಂಚಾಯತಿ ಕಡೆ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳಿಗೆ ಸಾಕಷ್ಟು ಅನುದಾನ ಖರ್ಚು ಮಾಡಿದ್ದರೂ ಅಭಿವೃದ್ಧಿ ಯೋಜನೆಗಳಿಗೆ ಹಣದ ಕೊರತೆ ಆಗದಂತೆ ಸರ್ಕಾರ ಕ್ರಮ ಕೈಗೊಂಡಿದೆ. ಇಂತಹ ಜನಪ್ರಿಯ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿವೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮ ಮಾಡಿ ಗ್ಯಾರಂಟಿ ಯೋಜನೆಗಳ ಕುರಿತಾಗಿ ಅಲ್ಲಿಯ ಜನರ ದೂರು ಸ್ವೀಕರಿಸಿ, ಸ್ಥಳದಲ್ಲಿಯೇ ಸೂಕ್ತ ಪರಿಹಾರ ನೀಡಲು ಸರ್ಕಾರ ಮುತುವರ್ಜಿ ವಹಿಸಿದೆ. ಈ ಯೋಜನೆಗಳಡಿ ಕೇವಲ ಮಹಿಳೆಯರಷ್ಟೇ ಫಲಾನುಭವಿಗಳಾಗಿಲ್ಲ, ಪರೋಕ್ಷವಾಗಿ ಪುರುಷರೂ ಸಹ ಫಲಾನುಭವಿಗಳಾಗಿದ್ದಾರೆ ಎಂದರು.

ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ-ಶೇ.98., ಅನ್ನಭಾಗ್ಯ-ಶೇ.99., ಮತ್ತು ಶಕ್ತಿ, ಯುವನಿಧಿ, ಗೃಹಜ್ಯೊತಿ ಯೋಜನೆಗಳು ಶೇ. ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಲು ಸಾಧ್ಯ ಎಂದು ತಿಳಿಸಿದರು.

ಕುರುಗೋಡು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಿ.ಬಸವನಗೌಡ ಮಾತನಾಡಿ, ಕುರುಗೋಡು ತಾಲೂಕಿನಲ್ಲಿ ಶಕ್ತಿ ಯೋಜನೆಯಡಿ ₹219 ಕೋಟಿ, ಅನ್ನಭಾಗ್ಯ ಯೋಜನೆಯಡಿ ₹26.07 ಕೋಟಿ, ಗೃಹಲಕ್ಷ್ಮಿ ಯೋಜನೆಯಡಿ ₹294 ಕೋಟಿ, ಗೃಹಜ್ಯೋತಿ ಯೋಜನೆಯಡಿ ₹340 ಕೋಟಿ ಮತ್ತು ಯುವನಿಧಿ ಯೋಜನೆಯಡಿ ₹95.35 ಲಕ್ಷ ಅನುದಾನ ಪಾವತಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆ ಫಲಾನುಭವಿಗಳ ಕುಂದು-ಕೊರತೆ ಸಂವಾದ ನಡೆಸಲಾಯಿತು.

ಕುರುಗೋಡು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಾರ್ಯದರ್ಶಿ ಹಾಗೂ ಕುರುಗೋಡು ತಾಪಂ ಇಒ ಕೆ.ವಿ. ನಿರ್ಮಲ, ಸೋಮಸಮುದ್ರ ಗ್ರಾಪಂ ಅಧ್ಯಕ್ಷೆ ರಾಜೇಶ್ವರಿ, ಉಪಾಧ್ಯಕ್ಷೆ ಲಕ್ಷ್ಮಿ, ಸದಸ್ಯರಾದ ಮಂಜುನಾಥ, ಬಸವರಾಜ ಗೊರವರ, ಶಕುಂತಲ ಇತರರಿದ್ದರು.

PREV

Recommended Stories

ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ಮುಂದೇಕೆ, ಈಗ್ಲೆ ಮುಸ್ಲಿಂ ಆಗ್ಬಿಡಿ : ಬಿಜೆಪಿಗರ ಕಿಡಿ