ಕೊಡಗಿನ ಐವರು ನಿಗಮ-ಮಂಡಳಿ ನಿರ್ದೇಶಕರಾಗಿ ಆಯ್ಕೆ

KannadaprabhaNewsNetwork |  
Published : Nov 14, 2026, 02:30 AM IST
ವಿವಿಧ ನಿಗಮ- ಮಂಡಳಿ ನಿರ್ದೇಶಕರಾಗಿ ಆಯ್ಕೆಯಾದವರು. | Kannada Prabha

ಸಾರಾಂಶ

ರಾಜ್ಯ ಸರ್ಕಾರ ವಿವಿಧ ನಿಗಮ-ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಪಟ್ಟಿ ಬಿಡುಗಡೆ ಮಾಡಿದ್ದು, ಕೊಡಗು ಜಿಲ್ಲೆಯಿಂದ ಐವರು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಮಡಿಕೇರಿ : ರಾಜ್ಯ ಸರ್ಕಾರ ವಿವಿಧ ನಿಗಮ-ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಪಟ್ಟಿ ಬಿಡುಗಡೆ ಮಾಡಿದ್ದು, ಕೊಡಗು ಜಿಲ್ಲೆಯಿಂದ ಐವರು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.ಸಂಪಾಜೆಯ ಸೂರಜ್ ಹೊಸೂರು ಅವರು ಕಾವೇರಿ ಜಲಾನಯನ ಪ್ರದೇಶ ಅಭಿವೃದ್ಧಿ ಮಂಡಳಿ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

ಗೋಣಿಕೊಪ್ಪಲಿನ ಅರ್ವತೋಕ್ಲು ಗ್ರಾಮದ ಎ.ಜೆ. ಬಾಬು ಅವರು ಚೆಸ್ಕಾಂ ನಿರ್ದೇಶಕರಾಗಿ ಹಾಗೂ ಚಾಮುಂಡೇಶ್ವರಿ ವಿದ್ಯುತ್ ನಿಗಮದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ನಾಪೋಕ್ಲುವಿನ ಕೆ.ಎ. ಇಸ್ಮಾಯಿಲ್ ಅವರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

ಸೋಮವಾರಪೇಟೆ ತಾಲೂಕಿನ ಶಾಂತಳ್ಳಿಯ ಕೆ.ಎಂ. ಲೋಕೇಶ್ ಅವರು ಮಲೆನಾಡು ಅಭಿವೃದ್ಧಿ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಕಿಗ್ಗಾಲು ಗ್ರಾಮದ ಐ.ಎಲ್. ಚಿಣ್ಣಪ್ಪ ಅವರು ಕಂಠೀರವ ಸ್ಟುಡಿಯೋಸ್ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಸರ್ವತೋಮುಖ ಪ್ರಗತಿಗೆ ಶ್ರಮಿಸಿ
ಎಸಿಯಾಗಿ ಪದೋನ್ನತಿ ಹೊಂದಿದ ತಹಸೀಲ್ದಾರ್‌ ಬೋಸಗಿ