ಸ್ವಾಭಿಮಾನಿ ಸಮಾವೇಶಕ್ಕೆ ಜಿಲ್ಲೆಯಿಂದ ಐದು ಸಾವಿರ ಮಂದಿ ಭಾಗಿ

KannadaprabhaNewsNetwork |  
Published : Dec 03, 2024, 12:32 AM IST
ಚಿತ್ರದುರ್ಗ ಪೋಟೋ ಸುದ್ದಿ 111 | Kannada Prabha

ಸಾರಾಂಶ

ಚಿತ್ರದುರ್ಗ: ಹಾಸನನದಲ್ಲಿ ಡಿ.5 ರಂದು ಕಾಂಗ್ರೆಸ್ ಪಕ್ಷ ಆಯೋಜಿಸಿರುವ ಸ್ವಾಭಿಮಾನಿ ಸಮಾವೇಶಕ್ಕೆ ಚಿತ್ರದುರ್ಗ ಜಿಲ್ಲೆಯಿಂದ ಐದು ಸಾವಿರ ಕಾರ್ಯಕರ್ತರು ತೆರಳುವರೆಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.

ಚಿತ್ರದುರ್ಗ: ಹಾಸನನದಲ್ಲಿ ಡಿ.5 ರಂದು ಕಾಂಗ್ರೆಸ್ ಪಕ್ಷ ಆಯೋಜಿಸಿರುವ ಸ್ವಾಭಿಮಾನಿ ಸಮಾವೇಶಕ್ಕೆ ಚಿತ್ರದುರ್ಗ ಜಿಲ್ಲೆಯಿಂದ ಐದು ಸಾವಿರ ಕಾರ್ಯಕರ್ತರು ತೆರಳುವರೆಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದರು.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಕಡೆ ಜಯಭೇರಿ ಬಾರಿಸಿದ್ದು, ರಾಜ್ಯದ ಮತದಾರರ ಒಲವು ಸಿದ್ದರಾಮಯ್ಯ ಅವರ ಮೇಲಿದೆ ಎಂಬುದು ಮತ್ತೆ ಸಾಬೀತಾಗಿದೆ. ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ನಿರುದ್ಯೋಗಿ ಯುವಕ-ಯುವತಿಯರು ಶೋಷಿತರು, ಮಹಿಳೆಯರಲ್ಲಿ ಬಲ ತುಂಬುವ ಉದ್ದೇಶದಿಂದ ಹಾಸನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದವರನ್ನು ಬಲಪಡಿಸುವುದು ಸ್ವಾಭಿಮಾನಿ ಸಮಾವೇಶದ ಉದ್ದೇಶ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ರಾಷ್ಟ್ರೀಯ ಮಟ್ಟದ ಆರ್ಥಿಕ ತಜ್ಞ. ಹದಿನೇಳು ಬಜೆಟ್ ಮಂಡಿಸಿದ ಅನುಭವ ಅವರಿಗಿದೆ. ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಐದು ಉಚಿತ ಗ್ಯಾರಂಟಿಗಳನ್ನು ಈಡೇರಿಸಿ ನುಡಿದಂತೆ ನಡೆದಿರುವ ಸಿದ್ದರಾಮಯ್ಯನವರಿಗೆ ಬಿಜೆಪಿಯವರು ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿಲುಕಿಸಲು ಯತ್ನಿಸಿ ಕುತಂತ್ರ ಮಾಡಿದರು. ಮೂರು ವಿಧಾನಸಭೆ ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಕೈಹಿಡಿದು ಬಿಜೆಪಿ ಅಪ ಪ್ರಚಾರಕ್ಕೆ ತಕ್ಕ ಉತ್ತರ ನೀಡಿದ್ದಾರೆ ಎಂದು ಹೇಳಿದರು. ಯಾವುದೇ ಕಪ್ಪುಚುಕ್ಕೆಯಿಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಚಿತ ವಿದ್ಯುತ್, ಗೃಹಲಕ್ಷ್ಮಿ, ಶಕ್ತಿ ಯೋಜನೆ, ಅನ್ನಭಾಗ್ಯ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿರುವುದನ್ನು ಸಹಿಸದೆ ಬಿಜೆಪಿಯವರು ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ ಎಂದು ದೂರಿದರು.

ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿರುವ ನರೇಂದ್ರಮೋದಿಯಿಂದ ಯಾವುದೆ ಬದಲಾವಣೆಯಾಗಿಲ್ಲ. ಅದಾನಿ, ಅಂಬಾನಿ, ದೊಡ್ಡ ಉದ್ಯಮಿಗಳಿಗೆ ಅನುಕೂಲವಾಗಿದೆ. ಬಡವರ ಕಷ್ಟ ಗೊತ್ತಿಲ್ಲ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಯುವ ಸಮೂಹವನ್ನು ವಂಚಿಸಿದ್ದಾರೆ. ರೈತರ ಆದಾಯ ದುಪ್ಪಟ್ಟುಗೊಳಿಸುವುದಾಗಿ ಭರವಸೆ ನೀಡಿ ಯಾವುದನ್ನು ಈಡೇರಿಸಿಲ್ಲ ಎಂದು ಆಪಾದಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ, ಜಿಪಂ ಮಾಜಿ ಸದಸ್ಯರುಗಳಾದ ಆರ್.ನರಸಿಂಹರಾಜ, ಬಿ.ಪಿ.ಪ್ರಕಾಶ್‍ಮೂರ್ತಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಆರ್.ಪ್ರಕಾಶ್, ಬಿ.ಪಿ.ತಿಪ್ಪೇಸ್ವಾಮಿ, ಲಿಡ್ಕರ್ ಮಾಜಿ ಚೇರ್ಮನ್ ಓ.ಶಂಕರ್, ವಕೀಲರುಗಳಾದ ರವೀಂದ್ರ, ಶರಣಪ್ಪ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ