ನಾನೂ ನಾಯಕಿ ಶಿಬಿರದಲ್ಲಿ ಜಿಲ್ಲೆಯಿಂದ ಐದು ಮಹಿಳಾ ಪ್ರತಿನಿಧಿಗಳು ಭಾಗಿ

KannadaprabhaNewsNetwork |  
Published : Jun 27, 2026, 01:15 AM IST
ಶಿಬಿರದಲ್ಲಿ ಪಾಲ್ಗೊಂಡಿರುವ ಪ್ರತಿನಿಧಿಗಳು | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಆಶ್ರಯದಲ್ಲಿ ಜಾನಪದ ಲೋಕ ಸಹಯೋಗದೊಂದಿಗೆ ಜೂನ್ 26 ರಿಂದ ಎರಡು ದಿನಗಳ ಕಾಲ ನಡೆಯಲಿರುವ ನಾನೂ ನಾಯಕಿ-2026 ಶಿಬಿರದಲ್ಲಿ ಕೊಡಗು ಜಿಲ್ಲೆಯಿಂದ ಐದು ಮಂದಿ ಮಹಿಳಾ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಆಶ್ರಯದಲ್ಲಿ ಜಾನಪದ ಲೋಕ ಸಹಯೋಗದೊಂದಿಗೆ ಜೂನ್ 26 ರಿಂದ ಎರಡು ದಿನಗಳ ಕಾಲ ನಡೆಯಲಿರುವ ನಾನೂ ನಾಯಕಿ-2026 ಶಿಬಿರದಲ್ಲಿ ಕೊಡಗು ಜಿಲ್ಲೆಯಿಂದ ಐದು ಮಂದಿ ಮಹಿಳಾ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ.

ರಾಮನಗರದ ಜಾನಪದ ಲೋಕ ಬಯಲು ರಂಗಮಂದಿರದಲ್ಲಿ 350 ಕ್ಕೂ ಅಧಿಕ ಮಹಿಳಾ ಪ್ರತಿನಿಧಿಗಳು ಭಾಗವಹಿಸಿದ್ದು, ಕೊಡಗು ಜಿಲ್ಲೆಯಿಂದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ನೇತೃತ್ವದಲ್ಲಿ ಐದು ಮಂದಿ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ.

ಎರಡು ದಿನಗಳ ಕಾಲ ನಡೆಯಲಿರುವ ಶಿಬಿರದಲ್ಲಿ ನಾಯಕತ್ವದ ವಿಷಯಗಳ ಬಗ್ಗೆ 8 ಅಧಿವೇಶನಗಳು ಜರುಗಲಿದ್ದು ರಾಜ್ಯದ ವಿವಿಧಡೆಗಳ ಸಂಪನ್ಮೂಲ ವ್ಯಕ್ತಿಗಳು ಉಪನ್ಯಾಸ ನೀಡಲಿದ್ದಾರೆ.

ಎರಡನೇ ದಿನ ನಡೆಯುವ ಅಧಿವೇಶನದಲ್ಲಿ ಶರಣ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಅಧ್ಯಕ್ಷರಾದ ಕೆ ಎಸ್ ಮೂರ್ತಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದ 30ಕ್ಕೂ ಅಧಿಕ ಶೈಕ್ಷಣಿಕ ಜಿಲ್ಲೆಗಳ ಪ್ರತಿನಿಧಿಗಳು ಶಿಬಿರದಲ್ಲಿ ಭಾಗವಹಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಸಂಸ್ಥಾಪಕ ಅಧ್ಯಕ್ಷರಾದ ಡಾ ಹುಲಿಕಲ್ ನಟರಾಜ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜುಲೈಯಲ್ಲಿ ಬಾಲಿಕಾ ಜಾಗೃತಿ ಅಭಿಯಾನ
ಉಪ್ಪಿನಂಗಡಿ: ನೇತ್ರಾವತಿ ಒಡಲಿಗೆ ತ್ಯಾಜ್ಯ ನೀರು!