ಕನ್ನಡಪ್ರಭ ವಾರ್ತೆ ಬೀಳಗಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳಲ್ಲಿ ಕಬ್ಬು ಬೆಳೆಗಾರರಿಗೆ ಪ್ರತಿ ಕ್ವಿಂಟಾಲ್ಗೆ ₹355ರಿಂದ ₹416ರವರೆಗೆ ಎಸ್ಎಪಿ ಬೆಲೆ ನೀಡಲಾಗುತ್ತಿದೆ. ತಮಿಳುನಾಡಿನಲ್ಲಿ 800 ಬೆಲೆ ನೀಡಲಾಗುತ್ತಿದೆ. ಇದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಎಸ್ಎಪಿ ಜಾರಿಗೊಳಿಸಿ, ಕನಿಷ್ಠ ₹1,000 ಬೆಲೆ ನಿಗದಿಪಡಿಸುವ ಮೂಲಕ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದರು.
ಕೃಷಿ ವೆಚ್ಚ ಹೆಚ್ಚಳದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಸಗೊಬ್ಬರ, ನೀರು, ವಿದ್ಯುತ್, ಕೃಷಿ ಕಾರ್ಮಿಕರ ವೇತನ ಸೇರಿದಂತೆ ಕಬ್ಬು ಬೆಳೆಯಲು ಹಾಗೂ ಕುಟುಂಬ ನಿರ್ವಹಣೆಗೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡಬೇಕಾಗುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ಘೋಷಿಸಿರುವ ಪ್ರತಿ ಕ್ವಿಂಟಾಲ್ಗೆ ₹365ರ ಎಫ್ಆರ್ಪಿ ದರ ಪರಿಷ್ಕರಿಸಿ ಹೆಚ್ಚಿಸಬೇಕು. ರೈತರು, ಸಕ್ಕರೆ ಕಾರ್ಖಾನೆಗಳು ಹಾಗೂ ಗ್ರಾಹಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಸಮತೋಲಿತ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನೀಡಿರುವ ₹50ರ ಎಸ್ಎಪಿ ನೆರವು ರೈತರ ಸಮಸ್ಯೆಗಳಿಗೆ ಸಮರ್ಪಕ ಪರಿಹಾರವಲ್ಲ. ಇದು ರೈತರ ಕಣ್ಣಿಗೆ ಮಣ್ಣೆರಚಿದಂತಾಗಿದೆ ಎಂದು ಟೀಕಿಸಿದ ಅವರು, ಎಸ್ಎಪಿ ವಿಚಾರದಲ್ಲಿ ರಾಜ್ಯ ಸರ್ಕಾರ ತಾತ್ಸಾರ ಮನೋಭಾವ ತಾಳಿರುವುದು ಖಂಡನೀಯ ಎಂದರು.