ಬಿಎಸ್‌ಎನ್‌ಎಲ್‌ ನೆರ್ಟ್‌ವರ್ಕ್ ಸಮಸ್ಯೆ ಬಗೆಹರಿಸಿ

KannadaprabhaNewsNetwork |  
Published : Dec 20, 2024, 12:46 AM IST
ಪೋಟೋ: 19ಎಸ್ಎಂಜಿಕೆಪಿ08ಶಿವಮೊಗ್ಗ ನಗರದ ಪ್ರವಾಸಿ ಮಂದಿರದಲ್ಲಿ ಬಿಎಸ್‌ಎನ್‌ಎಲ್‌ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ  ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು. | Kannada Prabha

ಸಾರಾಂಶ

ಶಿವಮೊಗ್ಗ ನಗರದ ಪ್ರವಾಸಿ ಮಂದಿರದಲ್ಲಿ ಬಿಎಸ್‌ಎನ್‌ಎಲ್‌ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಜಿಲ್ಲೆಯ ಮಲೆನಾಡಿನ ಭಾಗಗಳಾದ ತೀರ್ಥಹಳ್ಳಿ, ಹೊಸನಗರ, ಸಾಗರ ಮತ್ತು ಸೊರಬ ತಾಲೂಕಿನ ಬಹುದೂರದ ಮತ್ತು ಗುಡ್ಡಗಾಡು ಗ್ರಾಮೀಣ ಪ್ರದೇಶಗಳಲ್ಲಿ ಕೂಡಲೇ ನೆಟ್‌ವರ್ಕ್ ಸೌಲಭ್ಯಗಳನ್ನು ಕಲ್ಪಿಸುವಂತೆ ಬಿಎಸ್‌ಎನ್‌ಎಲ್‌ ಅಧಿಕಾರಿಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಸೂಚನೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಬಿಎಸ್‌ಎನ್‌ಎಲ್‌ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಟವರ್‌ಗಳನ್ನು ನಿರ್ಮಾಣ ಮಾಡಲು ಅರಣ್ಯ ಇಲಾಖೆಯ ಜಾಗವನ್ನು ಲೀಸ್ ಮೂಲಕ ನೀಡಲು ಕೆಲವು ಗ್ರಾಮಗಳ ಜಾಗದ ಬಗ್ಗೆ ಕರಾರು ಒಪ್ಪಂದ ಮಾಡಿಕೊಂಡಿದ್ದು, ಟವರ್ ನಿರ್ಮಾಣಕ್ಕಾಗಿ ಅರಣ್ಯ ಇಲಾಖೆಯವರು ಟೆಲಿಕಾಂ ಇಲಾಖೆಗೆ ಜಾಗವನ್ನು ಹಸ್ತಾಂತರಿಸದೇ ಇರುವುದು ಗಮನಕ್ಕೆ ಬಂದಿದೆ.

ಅರಣ್ಯ ಇಲಾಖೆ ಮತ್ತು ಟೆಲಿಕಾಂ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯತೆ ಸಾಧಿಸಿ ಮೂರು ದಿನಗಳೊಳಗಾಗಿ ಬಿಎಸ್‌ಎನ್‌ಎಲ್‌ ಇಲಾಖೆಗೆ ತಕ್ಷಣವೇ ಜಾಗ ಹಸ್ತಾಂತರಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಿಎಸ್‌ಎನ್‌ಎಲ್‌ ಟವರ್‌ಗಳನ್ನು ನಿರ್ಮಾಣ ಮಾಡಲು ಸಾಧ್ಯವಾಗದ ಪ್ರದೇಶಗಳಿಗೆ ಸ್ಯಾಟಲೈಟ್ ಮೂಲಕ ನೆಟ್‌ವರ್ಕ್ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಇದರ ನಿಟ್ಟಿನಲ್ಲಿ ಅಂತಹ ಪ್ರದೇಶಗಳನ್ನು ಗುರುತಿಸಿ ನೆಟ್‌ವರ್ಕ್ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ವಹಿಸುವಂತೆ ಬಿಎಸ್‌ಎನ್ಎಲ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಈಗಾಗಲೇ ನಿರ್ಮಾಣ ಹಂತದಲ್ಲಿರುವ ಟವರ್‌ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಜನರ ಬಳಕೆಗೆ ನೀಡುವಂತೆ ಟೆಲಿಕಾಂ ಇಲಾಖೆಯ ಅಧಿಕಾರಿಗಳಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಿಸಿಎಫ್‌ಕೆಟಿ ಹನುಮಂತಪ್ಪ, ಡೆಪ್ಯೂಟಿ ಜನರಲ್ ಮ್ಯಾನೇಜರ್ ಕೃಷ್ಣ ಮೊಗೇರ, ಜಿಲ್ಲೆಯ ಎಲ್ಲಾ ವಿಭಾಗಗಳ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಮತ್ತು ಇತರೆ ಟೆಲಿಕಾಂ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...