ಗದಗ: 2023-24 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಜೋಳ ಉತ್ಪನ್ನ ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದು, ಮೇ. 31 ರವರೆಗೆ ನೋಂದಣಿ ಕಾರ್ಯ ಕೈಗೊಳ್ಳಲಾಗುವುದು. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ ಗುರುವಾರ 2023-24 ನೇ ಸಾಲಿನ ಹಿಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜೋಳ ಕೃಷಿ ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಎಫ್.ಎ.ಕ್ಯೂ ಗುಣಮಟ್ಟ ದೃಢೀಕರಿಸಲು ಕ್ರಮ ವಹಿಸಬೇಕು. ಖರೀದಿ ಏಜ್ಸನಿಯವರು ತಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ಪ್ರತಿ ಖರೀದಿ ಕೇಂದ್ರಕ್ಕೆ ಗ್ರೇಡರ್ ನೇಮಿಸಬೇಕು. ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರಗೆ 20 ಕ್ವಿಂಟಲ್‍ನಂತೆ ರೈತರಿಂದ ಅವರು ಹೊಂದಿರುವ ಜಮೀನಿಗೆ ಅನುಗುಣವಾಗಿ ಎಫ್.ಐ.ಡಿ. ಪ್ರಕಾರ ಖರೀದಿಸಲಾಗುವುದು ಎಂದರು.
ಜಿಲ್ಲೆಯ 5 ಕಡೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಕೃಷಿ ಇಲಾಖೆ, ಎಪಿಎಂಸಿ ಕಾರ್ಯದರ್ಶಿ, ಕೃಷಿ ಮಾರಾಟ ಇಲಾಖೆ, ಕಾನೂನು ಮಾಪನ ಇಲಾಖೆ, ಕೆ.ಎಫ್.ಸಿ.ಎಸ್.ಸಿ ಹಾಗೂ ಮಾರ್ಕೆಟಿಂಗ್ ಫೆಡರೇಶನ್‍ದ ಶಾಖಾ ವ್ಯವಸ್ಥಾಪಕರು, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.ಕೇಂದ್ರ ಸರ್ಕಾರದ ಬೆಂಬಲ ಬೆಲೆ ಖರೀದಿ ಮಾರ್ಗಸೂಚಿಗಳನ್ವಯ ಜಿಲ್ಲೆಯ 5 ಕಡೆಗಳಲ್ಲಿ ಜೋಳ ಖರೀದಿ ಕೇಂದ್ರಗಳು: ಗದಗ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ, ಲಕ್ಷ್ಮೇಶ್ವರ ಎಪಿಎಂಸಿ ಪ್ರಾಂಗಣ, ಮುಂಡರಗಿ ಎಪಿಎಂಸಿ ಪ್ರಾಂಗಣ, ನರಗುಂದ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ, ರೋಣ ಎಪಿಎಂಸಿ ಮಾರುಕಟ್ಟೆ ಪ್ರಾಂಗಣ.