ವಿಜಯಪುರದಲ್ಲಿ ಹೊನಲು-ಬೆಳಕಿನ ವಾಲಿಬಾಲ್ ಟೂರ್ನಮೆಂಟ್

KannadaprabhaNewsNetwork |  
Published : Nov 26, 2026, 01:30 AM IST
ವಿಜೆಪಿ೨೫ವಿಜಯಪುರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಹೊನಲು-ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಆಯೋಜಕರು ಸ್ವಾಗತಿಸಿ, ಸನ್ಮಾನಿಸಿದರು. | Kannada Prabha

ಸಾರಾಂಶ

ವಿಜಯಪುರ: ಯುವಕರು ಕ್ರೀಡಾಭಿಮಾನವನ್ನು ಬೆಳೆಸಿಕೊಳ್ಳಬೇಕು. ಕ್ರೀಡೆಯಿಂದ ದೈಹಿಕ ಸದೃಢತೆಯ ಜೊತೆಗೆ ಶಿಸ್ತು ಮತ್ತು ಆತ್ಮವಿಶ್ವಾಸ ಬೆಳೆಯುತ್ತದೆ. ಸೋಲು-ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಿ, ಸೋತಾಗ ಕುಗ್ಗದೆ ಹಾಗೂ ಗೆದ್ದಾಗ ಹಿಗ್ಗದೆ ಕ್ರೀಡಾ ಮನೋಭಾವದಿಂದ ಆಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಕರೆ ನೀಡಿದರು

ವಿಜಯಪುರ: ಯುವಕರು ಕ್ರೀಡಾಭಿಮಾನವನ್ನು ಬೆಳೆಸಿಕೊಳ್ಳಬೇಕು. ಕ್ರೀಡೆಯಿಂದ ದೈಹಿಕ ಸದೃಢತೆಯ ಜೊತೆಗೆ ಶಿಸ್ತು ಮತ್ತು ಆತ್ಮವಿಶ್ವಾಸ ಬೆಳೆಯುತ್ತದೆ. ಸೋಲು-ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಿ, ಸೋತಾಗ ಕುಗ್ಗದೆ ಹಾಗೂ ಗೆದ್ದಾಗ ಹಿಗ್ಗದೆ ಕ್ರೀಡಾ ಮನೋಭಾವದಿಂದ ಆಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಕರೆ ನೀಡಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸಹಸ್ರ ಗೆಳೆಯರ ಬಳಗ ಆಯೋಜಿಸಿದ್ದ ಎರಡನೇ ವರ್ಷದ ಎರಡು ದಿನಗಳ ರಾಜ್ಯಮಟ್ಟದ ಹೊನಲು-ಬೆಳಕಿನ ವಾಲಿಬಾಲ್ ಟೂರ್ನಮೆಂಟ್‌ಗೆ ಚಾಲನೆ ನೀಡಿ ಮಾತನಾಡಿದ ಅವರು,

ಕ್ರೀಡೆಗಳು ಯುವಕರನ್ನು ದುಶ್ಚಟಗಳ ಕಡೆಗೆ ಮಾರು ಹೋಗದಂತೆ ತಡೆಯುತ್ತವೆ. ಕಬಡ್ಡಿ, ಖೋ-ಖೋ ನಂತಹ ದೇಶೀಯ ಕ್ರೀಡೆಗಳಿಗೂ ಹೆಚ್ಚಿನ ಮಹತ್ವ ನೀಡಬೇಕು. ಒತ್ತಡದ ನಡುವೆ ಜೀವನವನ್ನು ನಿಭಾಯಿಸುವ ಸಾಮರ್ಥ್ಯ ಕ್ರೀಡೆಯಿಂದ ವೃದ್ಧಿಯಾಗುತ್ತದೆ ಎಂದು ಸಚಿವರು ಕ್ರೀಡಾಪಟುಗಳನ್ನು ಹುರಿದುಂಬಿಸಿದರು.

ಪುರಸಭೆ ಮಾಜಿ ಅಧ್ಯಕ್ಷ ಎಂ.ಸತೀಶ್ ಕುಮಾರ್ ಮಾತನಾಡಿ, ಯುವಕರೇ ಈ ದೇಶದ ದೊಡ್ಡ ಶಕ್ತಿ. ಇಂತಹ ಶಕ್ತಿಯನ್ನು ಒಂದುಗೂಡಿಸುವ ಕೆಲಸ ಕ್ರೀಡೆಗಳಿಂದ ಮಾತ್ರ ಸಾಧ್ಯ. ಗ್ರಾಮೀಣ ಭಾಗದಲ್ಲಿ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ಯುವಜನರನ್ನು ಆರೋಗ್ಯವಂತರನ್ನಾಗಿ ಮಾಡುವುದರ ಜೊತೆಗೆ, ಗ್ರಾಮೀಣ ಪ್ರತಿಭೆಗಳಿಗೆ ಉತ್ತಮ ವೇದಿಕೆ ಕಲ್ಪಿಸಿದಂತಾಗುತ್ತದೆ. ಯುವಕರು ಮೊಬೈಲ್ ವ್ಯಸನದಿಂದ ದೂರವಿದ್ದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಟೂರ್ನಮೆಂಟ್‌ನ ಪ್ರಾಯೋಜಕರಾದ ತತ್ತಮಂಗಲ ರಮೇಶ್ ಮಾತನಾಡಿ, ಗ್ರಾಮೀಣ ಭಾಗದ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂತಹ ಹೊನಲು ಬೆಳಕಿನ ಪಂದ್ಯಾವಳಿಗಳು ಅತ್ಯಂತ ಪೂರಕವಾಗಿವೆ. ಯುವಕರು ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಮಿಂಚುವಂತಾಗಬೇಕು. ಕ್ರೀಡಾ ಚಟುವಟಿಕೆಗಳಿಗೆ ನಮ್ಮ ಸಹಕಾರ ಸದಾ ಇರುತ್ತದೆ ಎಂದು ಶುಭ ಹಾರೈಸಿದರು.

ಆಯೋಜಕ ಗಿರೀಶ್ ಯಾದವ್ ಮಾತನಾಡಿ, ಎರಡನೇ ವರ್ಷದಲ್ಲಿ ಅತ್ಯಂತ ಯಶಸ್ವಿಯಾಗಿ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಿದ್ದೇವೆ. ಯುವಕರು ಹಿರಿಯರ ಮಾರ್ಗದರ್ಶನ ಪಡೆದು, ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಳ್ಳಬೇಕು ಎಂದರು.

ವಿಜೇತ ತಂಡಗಳ ವಿವರ:

ಪ್ರಥಮ ಬಹುಮಾನ: ಬೈರತಿ ನಾಗೇಶ್ ಬಾಯ್ಸ್ ತಂಡ (೪೦,೦೦೦ ನಗದು ಹಾಗೂ ಆಕರ್ಷಕ ಟ್ರೋಫಿ), ದ್ವಿತೀಯ ಬಹುಮಾನ: ಬೆಂಗಳೂರಿನ ರೆಡ್ಡಿ ಬಾಯ್ಸ್ ತಂಡ (೩೦,೦೦೦ ನಗದು ಹಾಗೂ ಆಕರ್ಷಕ ಟ್ರೋಫಿ), ತೃತೀಯ ಬಹುಮಾನ: ವಿಜಯಪುರದ ಭಜರಂಗಿ ಬಾಯ್ಸ್ ತಂಡ (೨೦,೦೦೦ ನಗದು ಹಾಗೂ ಆಕರ್ಷಕ ಟ್ರೋಫಿ), ನಾಲ್ಕನೇ ಬಹುಮಾನ: ವಿಜಯಪುರದ ಸ್ಪೈಕರ್ ಬಾಯ್ಸ್ ತಂಡ (೧೦,೦೦೦ ನಗದು ಹಾಗೂ ಆಕರ್ಷಕ ಟ್ರೋಫಿ)

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಮಂಜುನಾಥ್, ಸದಸ್ಯ ಚಿನ್ನಪ್ಪ, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನ್ನೂರು ವೆಂಕಟೇಶ್, ಆರ್.ಎಂ.ಸಿ. ಟಿ. ಮಂಜುನಾಥ್, ಸೈಫುಲ್ಲಾ, ಗಿರೀಶ್, ಬಾಬು, ಮಂಜುನಾಥ್, ಬುಜ್ಜಿ, ಮುರಳಿ ಸೇರಿದಂತೆ ಹಲವು ಗಣ್ಯರು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.

(ಫೋಟೋ ಕ್ಯಾಪ್ಷನ್‌)

ವಿಜಯಪುರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಹೊನಲು-ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಆಯೋಜಕರು ಸನ್ಮಾನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಸವೇಶ್ವರರ ಬಗ್ಗೆ ಅವಹೇಳನಕಾರಿ ಪದಬಳಕೆ ನಾಡಿಗೆ ಕಪ್ಪುಚುಕ್ಕೆ: ಡಾ.ಶ್ರೀ.ಗುರುಬಸವ ಮಹಾಸ್ವಾಮಿ
ಸರ್ಕಾರಿ ಕೆಲಸವಿದ್ರೂ ರೈತನ ವರಿಸಲಿದ್ದಾಳೆ ಲಕ್ಷ್ಮೀ