ಹುಬ್ಬಳ್ಳಿ:
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫ್ಲೈಓವರ್‌ನಿಂದ 16ರಿಂದ 18 ಅಡಿ ಎತ್ತರದ ಗಣಪತಿಗಳ ವಿಸರ್ಜನಾ ಮೆರವಣಿಗೆಗೆ ಯಾವುದೇ ತೊಂದರೆಯಾಗುವುದಿಲ್ಲ. 18 ಅಡಿಗೂ ಎತ್ತರದ ನಾಲ್ಕು ಬೃಹತ್ ಗಣಪತಿಗಳಿಗೆ ಮಾತ್ರ ಪರ‍್ಯಾಯ ಮಾರ್ಗ ಕಲ್ಪಿಸಲಾಗುವುದು ಎಂದರು.
ಹುಬ್ಬಳ್ಳಿಯ ಗಣೇಶೋತ್ಸವ ರಾಜ್ಯದಲ್ಲೇ ವಿಜೃಂಭಣೆಯಿಂದ ನಡೆಯುತ್ತಿದ್ದು, ಈ ಬಾರಿ 25 ಅಡಿಗೂ ಎತ್ತರದ 3-4 ಬೃಹತ್ ಗಣಪತಿಗಳ ವಿಸರ್ಜನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ, ಪೊಲೀಸ್, ರಾಷ್ಟ್ರೀಯ ಹೆದ್ದಾರಿ, ಅರಣ್ಯ ಇಲಾಖೆ ಹಾಗೂ ಹೆಸ್ಕಾಂ ಅಧಿಕಾರಿಗಳೊಂದಿಗೆ ಮಾರ್ಗಗಳ ಪರಿಶೀಲನೆ ನಡೆಸಲಾಗಿದೆ ಎಂದು ಹೇಳಿದರು.ಸೆ. 14ರಂದು ಪ್ರತಿಷ್ಠಾಪನೆಯಾಗುವ 5 ದಿನಗಳ ಗಣಪತಿಗಳ ವಿಸರ್ಜನೆ ಸೆ. 18ರಿಂದ ಆರಂಭವಾಗಲಿದೆ. 7 ದಿನಗಳ ಗಣಪತಿಗಳ ವಿಸರ್ಜನೆ ಸೆ. 20ರಂದು, 9 ದಿನಗಳ ಗಣಪತಿಗಳ ವಿಸರ್ಜನೆ ಸೆ. 22ರಂದು ಹಾಗೂ 12 ದಿನಗಳ ಗಣಪತಿಗಳ ವಿಸರ್ಜನೆ ಸೆ. 25ರಂದು ನಡೆಯಲಿದೆ. ಈ ವೇಳೆ ಬೃಹತ್ ಗಣಪತಿಗಳಿಗೆ ವಿಶೇಷ ಮಾರ್ಗ ಕಲ್ಪಿಸಲಾಗುವುದು ಎಂದರು.
ಈ ವೇಳೆ ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಡಿಸಿಪಿಗಳಾದ ರವೀಶ್ ಸಿ.ಆರ್., ಶ್ರುತಿ ಎನ್.ಎಸ್., ಆರ್‌ಎಫ್‌ಒ ಆರ್.ಎಸ್. ಉಪ್ಪಾರ ಸೇರಿದಂತೆ ಮಹಾಮಂಡಳದ ಪದಾಧಿಕಾರಿಗಳಾದ ಎಸ್.ಎಸ್. ಕಮಡೊಳ್ಳಿಶೆಟ್ಡರ್, ಶಾಂತರಾಜ ಪೋಳ, ಅಮರೇಶ ಹಿಪ್ಪರಗಿ, ಚನ್ನಬಸಪ್ಪ ಧಾರವಾಡಶೆಟ್ಟರ, ಮುಖಂಡರಾದ ರವಿ ನಾಯ್ಕ, ಪರಶುರಾಮ ಪೂಜಾರ ಸೇರಿದಂತೆ ಹಲವರಿದ್ದರು. ಅಧಿಕಾರಿಗಳೊಂದಿಗೆ ಪರಿಶೀಲನೆ