ಕನ್ನಡಪ್ರಭ ವಾರ್ತೆ ಮುಧೋಳ
ಗುರುವಾರ ಮುಧೋಳ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಇಂಗ್ಲಿಷ್ ಸ್ನಾತಕೋತ್ತರ 2023-24ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಸ್ಥಾನವಹಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳು ಬುದ್ಧಿವಂತಿಕೆ ಹಾಗೂ ಕೌಶಲವನ್ನು ಹೆಚ್ಚಿಸಿ, ಜೀವನದ ಹಾದಿಯಲ್ಲಿ ಸಾಗಬೇಕು. ಇದರೊಂದಿಗೆ ಪೋಷಕರು ಹಾಗೂ ಗುರು ಹಿರಿಯರಿಗೆ ಗೌರವವನ್ನು ನೀಡಬೇಕು. ವಿದ್ಯಾರ್ಥಿಗಳ ಬೆಳವಣಿಗೆಗೆ ಪೋಷಕರ ಹಾಗೂ ಗುರುಗಳ ಸಹಕಾರ ಸದಾ ಇರುತ್ತದೆ. ಹಾಗಾಗಿ ಇವರಿಗೆ ಋುಣಿಯಾಗಿರುವುದು ಎಲ್ಲರ ಕರ್ತವ್ಯ. ನಿಮ್ಮ ಮುಂದಿನ ಭವಿಷ್ಯ ಉತ್ತಮವಾಗಿರಲಿ ಎಂದರು.
ಕಲಿಕೆ ಎನ್ನುವುದು ನಿರಂತರ, ಕಾಲೇಜಿನಲ್ಲಿ ಕಲಿಯುವುದು ಮುಗಿದರೂ ನಿಮ್ಮ ನಿಜವಾದ ಜೀವನದ ಪಾಠ ಇನ್ನು ಮುಂದೆ ಪ್ರಾರಂಭವಾಗುತ್ತದೆ. ನಿಮ್ಮನ್ನು ನೀವು ಹೇಗೆ ಪ್ರಸ್ತುತಪಡಿಸುತ್ತೀರಿ ಎನ್ನುವುದರ ಮೇಲೆ ನಿಮ್ಮ ಭವಿಷ್ಯ ನಿರ್ಧರಿತವಾಗುತ್ತದೆ. ಹೊಸತನ್ನು ಕಲಿಯುತ್ತಾ ಹೋಗುವುದರ ಮೂಲಕ ಇತರರಿಗಿಂತ ಭಿನ್ನವಾಗುವುದಕ್ಕೆ ಪ್ರಯತ್ನಿಸಬೇಕು. ನಡವಳಿಕೆ ಮತ್ತು ತಾಂತ್ರಿಕತೆಯನ್ನು ಸಮಾನವಾಗಿ ಸಮತೋಲನ ಮಾಡಿಕೊಂಡರೆ ಮಾತ್ರ ಒತ್ತಡವನ್ನು ನಿಭಾಯಿಸಬಹುದು ಎಂದರು.ಪ್ರಾಚಾರ್ಯ ಪ್ರೊ.ಎಮ್.ವ್ಹಿ.ಜಿಗಬಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಇದುವರೆಗೆ ಕಲಿಕೆಯಲ್ಲಿ ಮತ್ತು ಶಿಸ್ತಿನಲ್ಲಿ ನಿಮ್ಮನ್ನು ತಿದ್ದಿ ತೀಡಿ ಸಚ್ಚಾರಿತ್ರ್ಯವಂತರನ್ನಾಗಿಸುವ ನಿಟ್ಟಿನಲ್ಲಿ ಉಪನ್ಯಾಸಕರು ಸಾಕಷ್ಟು ಶ್ರಮವಹಿಸಿದ್ದಾರೆ. ನಿಮ್ಮ ಜೀವನ ಪಯಣದಲ್ಲಿ ಇದರ ನೆನಪು ಬಂದರೆ ಅವರ ಶ್ರಮ ಸಾರ್ಥಕವಾಗಲಿದೆ ಎಂದು ಹೇಳಿದರು.
ಭೀಮ ಪಡೆಸೂರ ಮತ್ತು ಮುಷ್ಕನ್ ಮುಲ್ಲಾ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು, ಇಂಗ್ಲಿಷ್ ಸ್ನಾತಕೋತ್ತರ ವಿಭಾಗದ ಕೋ-ಆರ್ಡಿನೇಟರ್ ಪ್ರೊ.ಪಿ.ಬಿ.ಬಡಿಗೇರ ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿದರು. ಇಂಗ್ಲಿಷ್ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ.ಎಮ್.ಎಚ್.ಜೋಗಿ ವಂದಿಸಿದರು. ಪ್ರೀತಿ ಪೂಜಾರ ನಿರೂಪಿಸಿದರು.