ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ತೀವ್ರ ಬರ ಇರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಹೊಣೆಗಾರಿಕೆಯಿಂದ ಕೆಲಸ ನಿಭಾಯಿಸಬೇಕು. ಕುಡಿಯುವ ನೀರಿನ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನಿಗಾವಹಿಸಬೇಕು ಎಂದು ಸೂಚಿಸಿದರು.
ಬರಪರಿಸ್ಥಿತಿ ಸಮರ್ಪಕವಾಗಿ ಹಾಗೂ ತುರ್ತಾಗಿ ನಿಭಾಯಿಸಬೇಕಾಗಿರುವದರಿಂದ ಜಿಲ್ಲಾ ಪಂಚಾಯತ್ ಅಧೀನದ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಅನುಮತಿಯಿಲ್ಲದೆ ಕೇಂದ್ರ ಸ್ಥಾನ ಬಿಡದಿರಲು, ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.ಪಂಚ ಗ್ಯಾರಂಟಿ ಹಾಗೂ ಆರನೇ ಭೂ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ, ವಿವಿಧ ಇಲಾಖೆಗಳ ವ್ಯಾಪ್ತಿಯ ಜಿ.ಪಂ. ಅನುದಾನ, ಸರ್ಕಾರದ ಇತರೆ ಯೋಜನೆಗಳಡಿಯ ಸಕಾಲಕ್ಕೆ ಸೂಕ್ತ ಪ್ರಗತಿ ಸಾಧಿಸಬೇಕು. ಫಲಾನುಭವಿ ಆಧಾರಿತ ಪ್ರತಿಯೊಂದು ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ದೊರಕಿಸಬೇಕು. ಅನುದಾನ ಲ್ಯಾಪ್ಸ್ ಆಗದಂತೆ ಎಚ್ಚರಿಕೆ ವಹಿಸಬೇಕು. ಅಕ್ರಮಗಳಿಗೆ ಅವಕಾಶ ನೀಡದೆ, ಸರ್ಕಾರದ ಮಾರ್ಗಸೂಚಿ, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕಾಯ್ದೆಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲು ಅವರು ಸೂಚನೆ ನೀಡಿದರು.