-10ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಜಿಲ್ಲಾಮಟ್ಟದ ಕಾರ್ಯಗಾರ
ಕನ್ನಡಪ್ರಭ ವಾರ್ತೆ ಶಹಾಪುರ
ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ವಿಷಯಗಳನ್ನು ಅಧ್ಯಯನ ನಡೆಸಬೇಕು. ಶೈಕ್ಷಣಿಕ ಪ್ರಗತಿ ಉತ್ತಮ ಪಡಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವತ್ತಾ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಖ್ಯಾತ ಮಕ್ಕಳ ವೈದ್ಯ ಡಾ. ಸುದತ್ತ ದರ್ಶನಾಪುರ ತಿಳಿಸಿದರು.ಭೀಮರಾಯನಗುಡಿ ಆಡಿಟೋರಿಯಂನಲ್ಲಿ ನಡೆದ 2024-25ನೇ ಸಾಲಿನ 10ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಗಣಿತ ವಿಷಯದಲ್ಲಿ ಜಿಲ್ಲಾಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದರು.
ಉಪನಿರ್ದೇಶಕ ಸಿ.ಎಸ್. ಮುಧೋಳ ಮಾತನಾಡಿ, ಸಂಪನ್ಮೂಲ ವ್ಯಕ್ತಿಗಳು ಎಲ್ಲಾ ಶಿಕ್ಷಕರಿಗೆ ಮಾರ್ಗದರ್ಶನ ಮಾಡುವುದರಿಂದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಗಣನೀಯ ಏರಿಕೆ ಆಗಬಹುದೆಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಕಲಿಕಾ ಆಸರೆ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ತರಗತಿ ಮತ್ತು ವೈಯಕ್ತಿಕ ಮಾರ್ಗದರ್ಶನ, ಪೋಷಕರ ಸಭೆಗಳು, ವಿಷಯ ಶಿಕ್ಷಕರಿಗೆ ವಿಶೇಷ ತರಬೇತಿ ಹೀಗೆ ಸಾಕಷ್ಟು ಹೊಸ ಯೋಜನೆಗಳ ಮೂಲಕ ಸಾಕಷ್ಟು ಪ್ರಯತ್ನ ಮಾಡಲಾಗುತ್ತಿದೆ ಎಂದರು.
---
ಶಹಾಪುರದ ಭೀಮರಾಯನಗುಡಿ ಆಡಿಟೋರಿಯಂನಲ್ಲಿ 2024-25ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಗಣಿತ ವಿಷಯದಲ್ಲಿ ಜಿಲ್ಲಾಮಟ್ಟದ ಕಾರ್ಯಗಾರ ನಡೆಯಿತು.