ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಭಗವಾನ್ ಬುದ್ಧ ಬಿ.ಇ.ಡಿ ಕಾಲೇಜು ಆವರಣದಲ್ಲಿ ನಡೆದ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ತರಗತಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಮಾನವೀಯ ಮೌಲ್ಯದೊಂದಿಗೆ ಶಿಸ್ತು, ಸಮಯ ಪ್ರಜ್ಞೆಯನ್ನು ಬೆಳೆಸಿಕೊಂಡಾಗ ಮಾತ್ರ ಸುಲಭವಾಗಿ ಗುರಿ ಸಾಧಿಸಬಹುದು ಎಂದರು.
ಭಗವಾನ್ ಬುದ್ಧ ಮಹಾವಿದ್ಯಾಲಯ ಸಂಸ್ಥಾಪಕ ಅಧ್ಯಕ್ಷ ಡಾ.ಯಮದೂರು ಸಿದ್ದರಾಜು ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ದೊರಕಿಸಬೇಕೆಂಬ ಉದ್ದೇಶದಿಂದ ಸರ್ಕಾರಿ ಉದ್ಯೋಗದಿಂದ ಸ್ವಯಂ ನಿವೃತ್ತಿಯಾಗಿ ಹೊಂದಿ ಶಾಲಾ ಕಾಲೇಜುಗಳನ್ನು ಸ್ಥಾಪಿಸಿ ಶಿಕ್ಷಣ ನೀಡುಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಲಭ್ಯವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.ಚಾಮರಾಜನಗರ ವಿವಿ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ಪ್ರಮುಖ. ಪ್ರಶಿಕ್ಷಣಾರ್ಥಿಗಳು ಮುಂದಿನ ಶಿಕ್ಷಕ ವೃತ್ತಿ ಪ್ರಾರಂಭಿಸುವುದರಿಂದ ಶಿಕ್ಷಣ ಕಲಿಸುವ ಪೂರಕ ಅಧ್ಯಯನವನ್ನು ಶ್ರದ್ದೆಯಿಂದ ಮಾಡಬೇಕು ಎಂದರು.
ಇದೇ ವೇಳೆ ಪ್ರೊ.ಪಿ.ವೆಂಕಟರಾಮಯ್ಯ, ಪ್ರೊ.ಗಂಗಾಧರ್, ಬಿಸಿಎಂ ಇಲಾಖೆ ತಾಲೂಕು ಕಲ್ಯಾಣಾಧಿಕಾರಿ ಎಂ.ಆರ್.ನಾಗರಾಜು ಅವರನ್ನು ಸನ್ಮಾನಿಸಲಾಯಿತು.