ಜಾನಪದ ಕಲಾ ಪ್ರಕಾರ ಉಳಿಸಿ, ಬೆಳೆಸಿ: ಮನ್ಮುಲ್ ನಿರ್ದೇಶಕಿ ರೂಪ

KannadaprabhaNewsNetwork |  
Published : Jul 09, 2024, 12:53 AM IST
8ಕೆಎಂಎನ್ ಡಿ13 | Kannada Prabha

ಸಾರಾಂಶ

ನಮ್ಮ ವೇಷಭೂಷಣ ಸಮವಸ್ತ್ರಗಳನ್ನು ತೊಟ್ಟು ನಮ್ಮ ಸಂಸ್ಕೃತಿ ಪರಂಪರೆ ಉಳಿಸಿ, ಪ್ರಚಾರ ಪಡಿಸುವ ನಿಟ್ಟಿನಲ್ಲಿ ಮುಂದಾಗಬೇಕು. ಪ್ರತಿಯೊಬ್ಬರಿಗೂ ಭಾರತೀಯರು ಎಂಬ ಹೆಮ್ಮೆ ಇರಬೇಕು. ಆದರೆ, ಇಂದಿನ ಯುವ ಜನಾಂಗವನ್ನು ಮರೆಯುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ಗ್ರಾಮೀಣ ಸೊಗಡಿನ ಜಾನಪದ ಕಲಾ ಪ್ರಕಾರಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕಿದೆ ಎಂದು ಮನ್ಮುಲ್ ನಿರ್ದೇಶಕಿ ರೂಪ ಹೇಳಿದರು.

ತಾಲೂಕಿನ ಸೋಮನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಯುವ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘ, ಮನುಜ ಮತ ಸೇವಾ ಟ್ರಸ್ಟ್ ಹಾಗೂ ಜನಕಲರಂಗ ಸಂಘದಿಂದ ಆಯೋಜಿಸಿದ್ದ ಯುವಜನರ ನಡಿಗೆ ಜನಪದದ ಕಡೆಗೆ ಕಾರ್ಯಕ್ರಮವನ್ನು ಕಂಜರ ನುಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ನಮ್ಮ ವೇಷಭೂಷಣ ಸಮವಸ್ತ್ರಗಳನ್ನು ತೊಟ್ಟು ನಮ್ಮ ಸಂಸ್ಕೃತಿ ಪರಂಪರೆ ಉಳಿಸಿ, ಪ್ರಚಾರ ಪಡಿಸುವ ನಿಟ್ಟಿನಲ್ಲಿ ಮುಂದಾಗಬೇಕು. ಪ್ರತಿಯೊಬ್ಬರಿಗೂ ಭಾರತೀಯರು ಎಂಬ ಹೆಮ್ಮೆ ಇರಬೇಕು. ಆದರೆ, ಇಂದಿನ ಯುವ ಜನಾಂಗವನ್ನು ಮರೆಯುತ್ತಿದ್ದಾರೆ ಎಂದು ವಿಷಾದಿಸಿದರು.

ಜಾನಪದ ಕಲಾ ಪ್ರಕಾರಗಳನ್ನು ಉಳಿಸುವ ನಿಟ್ಟಿನಲ್ಲಿ ಗಾಯಕ ಹುರಗಾಲವಾಡಿ ರಾಮಯ್ಯ ಹಾಗೂ ಮೇಲ್ಕಂಡ ಸಂಘ-ಸಂಸ್ಥೆಗಳು ಮಾಡುತ್ತಿರುವ ಕಾರ್ಯಕ್ರಮಗಳು ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದೇ ವೇಳೆ ಕರ್ನಾಟಕ ಜನಪದ ಅಕಾಡೆಮಿ ಮಾಜಿ ಸದಸ್ಯ ಹುರಗಾಲವಾಡಿ ರಾಮಯ್ಯ ಜನಪದ ಗೀತೆಗಳನ್ನು ಹಾಡುವ ಜೊತೆಗೆ ವಿದ್ಯಾರ್ಥಿಗಳನ್ನು ಜನಪದ ಗೀತೆಗಳ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಸ್ವಾಮಿ ವಿವೇಕಾನಂದ ಯುವ ಸಂಸ್ಕೃತಿಕ ಮತ್ತು ಕ್ರೀಡಾ ಸಂಘ ಕಳೆದ ಹತ್ತು ವರ್ಷಗಳಿಂದ ಯುವಜನರಿಗೆ ಜನಪದದ ಬಗ್ಗೆ ಆಸಕ್ತಿ ತೋರುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮೊರಾರ್ಜಿ ವಸತಿ ಶಾಲೆ ಪ್ರಾಂಶುಪಾಲೆ ಆಶಾ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಸ್ವಾಮಿ ವಿವೇಕಾನಂದ ಯುವ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ಕಾರ್ಯದರ್ಶಿ, ಲಾರಾ ಪ್ರಸನ್ನ, ವಸತಿ ನಿಲಯದ ಮೇಲ್ವಿಚಾರಕ ಗಿರೀಶ್, ವಸತಿ ನಿಲಯದ ದಾದಿ ಶಿಲ್ಪ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಲೆ ಏರಿಸಿ ಜನರ ಜೇಬಿಗೆ ಕೇಂದ್ರ ಕನ್ನ: ಕೈ ಟೀಕೆ
ನಾನು ಸಾಲರಾಮಯ್ಯ ಅಲ್ಲ : ಸಿದ್ದರಾಮಯ್ಯ ತಿರುಗೇಟು