ಕನ್ನಡಪ್ರಭ ವಾರ್ತೆ ಹಲಗೂರು
ಸಮೀಪದ ಬ್ಯಾಡರಹಳ್ಳಿ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಅಂಬೇಡ್ಕರ್ ಸಭಾಂಗಣದಲ್ಲಿ ಕಲಾಲೋಕ ಫೌಂಡೇಶನ್ ಮದ್ದೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಕರುನಾಡ ಜಾನಪದ ಸಂಭ್ರಮ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಜಾನಪದ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು ಅಡಕವಾಗಿದ್ದು, ಮನುಷ್ಯನಿಗೆ ಬದುಕುವ ದಾರಿ ತೋರಿಸುತ್ತದೆ. ರಾಜ್ಯದಲ್ಲಿ ಕಂಸಾಳೆ, ಯಕ್ಷಗಾನ, ಬಯಲಾಟ, ಸೋಬಾನೆ, ತಂಬೂರಿ ಪದ, ಪೂಜಾ ಕುಣಿತ, ತಮಟೆ, ನಗಾರಿ, ಪಟದ ಕುಣಿತ, ಸೇರಿದಂತೆ ಹಲವಾರು ಜಾನಪದ ಕಲಾ ಪ್ರಕಾರಗಳು ಅತ್ಯಂತ ಶ್ರೀಮಂತವಾಗಿವೆ ಎಂದರು.ಪತ್ರಕರ್ತ ಎಸ್.ಉಮೇಶ್ ಮಾತನಾಡಿ, ಜನಸಾಮಾನ್ಯರು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಪ್ರಭಾವಕ್ಕೆ ಸಿಲುಕಿದ್ದಾರೆ. ಇದರಿಂದ ಮನಸ್ಸಿಗೆ ಮುದ ನೀಡುವ ಹಲವು ದೇಶಿ ಸಂಸ್ಕೃತಿಯ ಆಚರಣೆಗಳು ಕಣ್ಮರೆಯಾಗುತ್ತಿವೆ ಎಂದರು.
ಉಪನ್ಯಾಸಕ ಜಾಕೀರ್ ಹುಸೇನ್ ಮಾತನಾಡಿ, ಮದ್ದೂರಿನ ಕಲಾಲೋಕ ಫೌಂಡೇಶನ್ ನಿರಂತರವಾಗಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುತ್ತಿದ್ದು, ಕಲೆ, ಸಾಹಿತ್ಯ, ವಿಚಾರ ಸಂಕಿರಣ ಇತಿಹಾಸ, ಸಂಸ್ಕೃತಿ ಬಿಂಬಿಸುವ ಜೊತೆಗೆ, ಮುಂದಿನ ತಲೆಮಾರಿಗೆ ಸಂಸ್ಕೃತಿಯನ್ನು ಕೊಂಡೊಯ್ಯುವ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.
ಈ ವೇಳೆ ಶಿಕ್ಷಕರಾದ ಬಸವರಾಜು, ಮಿಸ್ಮಿತಾ, ಕಲಾವಿದ ಮಹೇಶ್, ಪೋಷಕ ಸಮಿತಿ ಸದಸ್ಯರಾದ ಶಿವರಾಜು, ಶೀಲಾ, ಮಹದೇವಮ್ಮ ಸಿಬ್ಬಂದಿ ವರ್ಗ ಸೇರಿದಂತೆ ಹಲವರು ಭಾಗವಹಿಸಿದ್ದರು.