ಜಾನಪದ ಕಲೆಗಳಿಗೆ ಯುವಜನತೆಯ ಪ್ರೋತ್ಸಾಹ ಅಗತ್ಯ

KannadaprabhaNewsNetwork |  
Published : Aug 24, 2024, 01:17 AM IST
22ಕೆಆರ್ ಎಂಎನ್ 6.ಜೆಪಿಜಿರಾಮನಗರದ ಜಾನಪದ ಲೋಕದಲ್ಲಿ ವಿಶ್ವ ಜಾನಪದ ದಿನಾಚರಣೆ ಮತ್ತು ಜನಪದ ಮಹಾಕಾವ್ಯ ಗಾಯನ ಮತ್ತು ಸಂವಾದ ಕಾರ್ಯಕ್ರಮವನ್ನು ಹಿರಿಯ ಜಾನಪದ ವಿದ್ವಾಂಸರಾದ ಪ್ರೊ. ಕಾಳೇಗೌಡ ನಾಗವಾರ  ಉದ್ಘಾಟಿಸಿದರು. | Kannada Prabha

ಸಾರಾಂಶ

ಜಾನಪದ ಕಲೆಗಳಿಗೆ ಯುವಜನತೆಯ ಪ್ರೋತ್ಸಾಹ ಅಗತ್ಯ

ಕನ್ನಡಪ್ರಭ ವಾರ್ತೆ ರಾಮನಗರ

ಇಂದಿನ ಯುವಜನತೆ ನೆಲ ಮೂಲದ ಜಾನಪದ ಕಲೆಗಳನ್ನು ಉಳಿಸಿ, ಬೆಳೆಸುವಂತಹ ಕಾರ್ಯ ಮಾಡಬೇಕು ಎಂದು ಹಿರಿಯ ಜಾನಪದ ವಿದ್ವಾಂಸ ಪ್ರೊ. ಕಾಳೇಗೌಡ ನಾಗವಾರ ಕರೆ ನೀಡಿದರು.

ನಗರದ ಜಾನಪದ ಲೋಕದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಜಾನಪದ ದಿನಾಚರಣೆ ಮತ್ತು ಜನಪದ ಮಹಾಕಾವ್ಯ ಗಾಯನ ಮತ್ತು ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜನಪದ ಗಾಯಕ ಡಾ. ಅಪ್ಪಗೆರೆ ತಿಮ್ಮರಾಜು ಮಾತನಾಡಿ, ಜಾನಪದ ಕಲೆಗಳನ್ನು ಮುಂದಿನ ತಲೆಮಾರುಗಳಿಗೆ ಉಳಿಸಿ, ಬೆಳೆಸುವ ಕಾರ್ಯ ಆಗಬೇಕಿದೆ ಎಂದರು. ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ಸುಮಾರು ಎರಡೂವರೆ ಸಾವಿರ ವರ್ಷಗಳ ಹಿಂದೆಯೇ ಕನ್ನಡದಲ್ಲಿ ಜಾನಪದ ಪರಂಪರೆಯಿತ್ತು ಎಂಬುದು ತಿಳಿದು ಬರುತ್ತದೆ ಎಂದರು.

ಜಾನಪದ ಗಾಯನವನ್ನು ಕೋಣನಕೊಪ್ಪಲು ಸಿದ್ದರಾಜು, ಕೈಲಾಸಮೂರ್ತಿ, ಮೋಹನ್ ಕುಮಾರ್ ಪ್ರಸ್ತುತ ಪಡಿಸಿದರು. ಕ್ಯುರೇಟರ್ ಎಂ. ರವಿ, ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್, ವಿದ್ವಾಂಸರಾದ ಶಿವಣ್ಣ, ಸಾಹಿತಿ ವಿಜಯ್ ರಾಂಪುರ, ಸು.ತ ರಾಮೇಗೌಡ, ಡಾ.ತೇಜಾವತಿ ಹಾಗೂ ಜಾನಪದ ಗಾಯಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?
ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಮೆಟ್ರೋ ಟಿಕೆಟ್‌ ಮತ್ತೆ ಏರಿಕೆ? ಯಾವ ಮಾರ್ಗದಲ್ಲಿ ಎಷ್ಟು ಹೆಚ್ಚಳ?