ಕುಶಾಲನಗರ: ಕುಶಾಲನಗರ ಫಾತಿಮಾ ಕಾನ್ವೆಂಟ್ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವ ಅಂಗವಾಗಿ ಅಂತರ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಜಾನಪದ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿತ್ತು.
ಸುದೀರ್ಘ 50 ವರ್ಷಗಳ ನಿರಂತರ ಪ್ರಯತ್ನದ ಮೂಲಕ ಕುಶಾಲನಗರದ ಫಾತಿಮಾ ಕಾನ್ವೆಂಟ್ ಶಿಕ್ಷಣ ಸಂಸ್ಥೆ ಹೆಮ್ಮರವಾಗಿ ಬೆಳೆದಿದೆ ಎಂದು ಅವರು ಹೇಳಿದರು.
ಶಿಕ್ಷಣ ಸಂಸ್ಥೆ ವ್ಯವಸ್ಥಾಪಕರಾದ ಸಿಸ್ಟರ್ ಆಗ್ನೆಸ್, ಜನಪದ ಮನರಂಜನೆಗೆ ಸೀಮಿತವಾಗದೆ ಪಾರಂಪರಿಕ ಶ್ರೀಮಂತ ಕಲೆಯಾಗಿದೆ. ಜನಪದ ಸೊಗಡನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಪರಿಚಯ ಮಾಡಬೇಕು ಎಂದರು.ಸಂಸ್ಥೆ ವತಿಯಿಂದ ಬಿಇಓ ಎಂ. ಕೃಷ್ಣಪ್ಪ, ಸಿ.ಆರ್.ಪಿ. ವಿಶ್ವನಾಥ್ ಮತ್ತು ಹಳೆ ವಿದ್ಯಾರ್ಥಿಗಳು ಹಾಗೂ ದಾನಿಗಳಾದ ಹಿತೇಶ್ ಮತ್ತು ಹಿರಿಯ ಶಿಕ್ಷಕಿ ಭಾರತಿ ದೇವಯ್ಯ ಅವರನ್ನು ಸನ್ಮಾನಿಸಲಾಯಿತು.
ಸಂಸ್ಥೆಯ ಪ್ರಮುಖರಾದ ಸಿಸ್ಟರ್ ಅರ್ಪಿತ, ಸಿಸ್ಟರ್ ಫ್ಲೋರೆಟ್, ಸಿಸ್ಟರ್ ಸೋಫಿಯಾ, ಕರ್ನಾಟಕ ಜಾನಪದ ಪರಿಷತ್ ಕುಶಾಲನಗರ ತಾಲೂಕು ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ತೀರ್ಪುಗಾರರು ಇದ್ದರು.