ಚಿಕ್ಕಮುದುವಾಡಿಯಲ್ಲಿ ಜಾನಪದ ಸುಗ್ಗಿ ಸಂಭ್ರಮ

KannadaprabhaNewsNetwork |  
Published : Jul 22, 2026, 01:45 AM IST
ಕೆ ಕೆ ಪಿ ಸುದ್ದಿ 02:ಚಿಕ್ಕಮುದವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜನಪದ ಸುಗ್ಗಿ ಸಂಭ್ರಮ ಕಾರ್ಯಕ್ರಮ ನಡೆಸಲಾಯಿತು.  | Kannada Prabha

ಸಾರಾಂಶ

ಕನಕಪುರ: ಮಾಧ್ಯಮಗಳಿಲ್ಲದ ಕಾಲದಲ್ಲಿ ಮೌಖಿಕವಾಗಿ ಜನಪದ ಪರಂಪರೆಯನ್ನು ಉಳಿಸಿ ಬೆಳೆಸಿದಂತಹ ಕೀರ್ತಿ ಗ್ರಾಮೀಣರಿಗೆ ಸಲ್ಲುತ್ತದೆ ಎಂದು ಹಿರಿಯ ಜನಪದ ವಿದ್ವಾಂಸ ಮೈಸೂರಿನ ಗುರುರಾಜ್ ತಿಳಿಸಿದರು

ಕನಕಪುರ: ಮಾಧ್ಯಮಗಳಿಲ್ಲದ ಕಾಲದಲ್ಲಿ ಮೌಖಿಕವಾಗಿ ಜನಪದ ಪರಂಪರೆಯನ್ನು ಉಳಿಸಿ ಬೆಳೆಸಿದಂತಹ ಕೀರ್ತಿ ಗ್ರಾಮೀಣರಿಗೆ ಸಲ್ಲುತ್ತದೆ ಎಂದು ಹಿರಿಯ ಜನಪದ ವಿದ್ವಾಂಸ ಮೈಸೂರಿನ ಗುರುರಾಜ್ ತಿಳಿಸಿದರು.

ತಾಲೂಕಿನ ಚಿಕ್ಕಮುದುವಾಡಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸುಗ್ಗಿ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಸ್ಥೆ ಹಾಗೂ ಜಿಲ್ಲಾ ಕಸಾಪ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜನಪದ ಸುಗ್ಗಿ ಸಂಭ್ರಮ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬದಲಾದ ಕಾಲಘಟ್ಟದಲ್ಲಿ ಮೂಲ ಜನಪದ ಸಾಹಿತ್ಯವನ್ನು ತಿರುಚುವುದು ನಿಲ್ಲಬೇಕೆಂದರು.

ಪದ್ಮಶ್ರೀ ಪುರಸ್ಕೃತ ಹಾಸನ ರಘು ಮಾತನಾಡಿ, ನಮ್ಮ ಪೂರ್ವಜರು ನಮಗೆ ನೀಡಿರುವ ಈ ಜನಪದ ಸಂಸ್ಕೃತಿ ಬಳುವಳಿಯನ್ನು ನಾವು ಕಾಪಾಡಿಕೊಳ್ಳಬೇಕೆಂದರು.ಜನಪದ ವಿದ್ವಾಂಸ ಪ್ರೊ.ವ.ನಂ.ಶಿವರಾಮು ಮಾತನಾಡಿ, ಸುಗ್ಗಿ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಕಾಳಯ್ಯನವರ ಕಾರ್ಯವೈಖರಿಯನ್ನು ಶ್ಲಾಘಿಸಿ, ಸರ್ಕಾರ ಜನಪದ ಕಲಾವಿದರಿಗೆ ಸೂಕ್ತ ಸಂಭಾವನೆ ನೀಡಿ ಪ್ರೋತ್ಸಾಹಿಸಬೇಕೆಂದು ಒತ್ತಾಯಿಸಿದರು.

ಸುತ್ತಮುತ್ತಲ ಗ್ರಾಮದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಜಾನಪದ ಸಮೂಹ ನೃತ್ಯ ಹಾಗೂ ಭರತನಾಟ್ಯ ಕಾರ್ಯಕ್ರಮ ನಡೆಸಿಕೊಟ್ಟರು. ಕಸಾಪ ತಾಲೂಕು ಅಧ್ಯಕ್ಷ ಶಿವಲಿಂಗಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಪ್ರಭಾಕರ್, ರಂಗಭೂಮಿ ನಟ ಮತ್ತು ನಿರ್ದೇಶಕ ಎಂ.ಸಿ.ನಾಗರಾಜ್, ಹಿರಿಯ ಸಾಹಿತಿ, ಕಲಾವಿದ ಚಿಕ್ಕಮರಿಗೌಡ, ಉಪನ್ಯಾಸಕ ಎಚ್.ಎಸ್.ನಾಗೇಶ್, ಶಿಕ್ಷಕ ಮುನಿಚೌಡಯ್ಯ, ಶಂಕರ್ ಭಾರತಿಪುರ ಭಾಗವಹಿಸಿದ್ದರು.

ಕೆ ಕೆ ಪಿ ಸುದ್ದಿ 02:

ಕನಕಪುರ ತಾಲೂಕಿನ ಚಿಕ್ಕಮುದವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜನಪದ ಸುಗ್ಗಿ ಸಂಭ್ರಮ ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಚಿವ ಭೈರತಿ ಸುರೇಶ್ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಣೆ
ಜನ ಕೇಂದ್ರಿತ ಚಿಂತನೆಗಳಿಂದ ಸಂಘಟನೆ ಯಶಸ್ಸು ಸಾಧ್ಯ