ಹರಪನಹಳ್ಳಿ: ತಾಲೂಕಿನ ತಾವರಗೊಂದಿ ಗ್ರಾಮದ ಬಳಿ ತುಂಗಭದ್ರಾ ನದಿ ತೀರದಲ್ಲಿ ಎಂ.ಪಿ. ರವೀಂದ್ರ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಸಂಕ್ರಾಂತಿ ಹಬ್ಬದಲ್ಲಿ ಜಾನಪದ ಗಾಯನ, ಸುಗ್ಗಿ ಹಾಡುಗಳು ಪ್ರೇಕ್ಷಕರಿಗೆ ರಸದೌತಣ ನೀಡಿತು.
ಖಡಕ್ ರೊಟ್ಟಿ, ಚಟ್ನಿಪುಡಿ, ಹೋಳಿಗೆ, ಹೆಸರು ಕಾಳು ಪಲ್ಯೆ, ಬೂಂದಿ, ಮೈಸೂರು ಪಾಕದೊಂದಿಗೆ ಜನರು ಊಟ ಸವಿದರು.
ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ ಅಹಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಸಂಕ್ರಾಂತಿ ಎಲ್ಲರಿಗೂ ಶುಭ ತರಲಿ ಎಂದು ಹಾರೈಸಿದರು. ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅವರು ಎಲ್ಲರಿಗೂ ಎಳ್ಳು-ಬೆಲ್ಲ ಹಂಚಿದರು.ಹೊನ್ನಾಳಿ ಶಾಸಕ ಶಾಂತನಗೌಡ, ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಜಿಪಂ ಸಿಇಒ ನೊಂಗಾಯ್ಜ್ ಮೊಹಮದ್ ಅಲಿ ಅಕ್ರಮ, ಹೂಡ ಅಧ್ಯಕ್ಷ ನಿಯಾಜಿ, ಮುಖಂಡ ಎಚ್.ಎಂ. ಮಲ್ಲಿಕಾರ್ಜುನ, ವಿವಿಧ ಬ್ಲಾಕ್ ಅಧ್ಯಕ್ಷರಾದ ಎಂ.ವಿ. ಅಂಜಿನಪ್ಪ, ಕುಬೇರಗೌಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಐಗೋಳ ಚಿದಾನಂದ, ಗೌತಮಪ್ರಭು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಉದಯಶಂಕರ, ತಹಸೀಲ್ದಾರ್ ಬಿ.ವಿ. ಗಿರೀಶಬಾಬು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಂಚಿಕೇರಿ ಜಯಲಕ್ಷ್ಮಿ, ಉಮಾಮಹೇಶ್ವರಿ, ಸುಮಾ ಜಗದೀಶ, ಮೈದೂರು ರಾಮಣ್ಣ, ಹುಲ್ಲಿಕಟ್ಟಿ ಚಂದ್ರಪ್ಪ, ಉದ್ದಾರ ಗಣೇಶ, ಡಿವೈಎಸ್ಪಿ ಸಂತೋಷ ಚವ್ಹಾಣ, ಸಿಪಿಐ ಮಹಾಂತೇಶ ಸಜ್ಜನ, ಪಿಎಸ್‌ಐಗಳಾದ ಶಂಭುಲಿಂಗ ಹಿರೇಮಠ, ಕಿರಣಕುಮಾರ, ವಿಜಯಕೃಷ್ಣ, ನಾಗರತ್ನಾ, ಮತ್ತೂರು ಬಸವರಾಜ, ಅರಸೀಕೆರೆ ನಾಗರಾಜ ಇದ್ದರು.