-ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಸಿದ್ರಾಮ ಚನಗೊಂಡ ವಿಷಾದ
ಕನ್ನಡಪ್ರಭವಾರ್ತೆ ಚಿತ್ರದುರ್ಗ
ಜಾಗತೀಕರಣ, ಖಾಸಗೀಕರಣದ ಪ್ರಭಾವದಿಂದಾಗಿ ಜಾನಪದ ಸೊಗಡು ಮಾಯವಾಗುತ್ತಿದೆ ಎಂದು ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಸಿದ್ರಾಮ ಚನಗೊಂಡ ವಿಷಾದ ವ್ಯಕ್ತಪಡಿಸಿದರು.ಕಾಲೇಜು ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಆಯೋಜಿಸಿದ್ದ ಜಾನಪದ ನಮ್ಮ ಸಂಸ್ಕೃತಿ ಮತ್ತು ನಮ್ಮ ಹೆಮ್ಮೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿಜ್ಞಾನದ ವಿದ್ಯಾರ್ಥಿಗಳು ಓದಿನ ಜೊತೆಗೆ ಜಾನಪದದ ಮಹತ್ವ, ನೃತ್ಯ ಗೀತೆಗಳು, ಸಾಹಿತ್ಯ, ವೇಷಭೂಷಣಗಳು ಮತ್ತು ನಮ್ಮ ಸಂಸ್ಕೃತಿಯ ಬಗ್ಗೆ ಅರಿವಿಟ್ಟುಕೊಂಡು ಜೀವನ ಮಾಡಬೇಕು ಎಂದರು.
ಕಾಲೇಜು ಶಿಕ್ಷಣ ಇಲಾಖೆ, ನಮ್ಮ ಸಂಸ್ಕೃತಿ, ನಮ್ಮ ಪರಂಪರೆ, ನಮ್ಮ ಹೆಮ್ಮೆ ಎಂದು ಈ ವರ್ಷದಿಂದ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದು ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ರಾಷ್ಟ್ರೀಯ ಮಟ್ಟಕ್ಕೆ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೂ ಸಹ ತಮ್ಮ ಪ್ರತಿಭೆಗಳನ್ನು ಬೆಳೆಸಬಹುದು. ಡೊಳ್ಳು ಕುಣಿತ, ಕಂಸಾಳೆ, ನಂದಿ ಕುಣಿತ, ನೆನಪಿನಲ್ಲಿ ಉಳಿಯುತ್ತದೆ. ಇಲ್ಲದಿದ್ದರೆ ವಿದ್ಯಾರ್ಥಿಗಳು ಇವುಗಳನ್ನ ಮರೆಯುತ್ತಾರೆ ಎಂದರು.
ಭೌತಶಾಸ್ತ್ರ ಪ್ರಾಧ್ಯಾಪಕರಾದ ಡಾ.ನಾಗರಾಜ್ ಮಾತನಾಡಿ, ಜಾನಪದ ಕಲೆಗಳ ಬಗ್ಗೆ ವಿದ್ಯಾರ್ಥಿಗಳು ಆಸಕ್ತಿ ಕಡಿಮೆಗೊಳಿಸಿಕೊಳ್ಳುತ್ತಿದ್ದಾರೆ. ಓದಿನ ಜೊತೆಗೆ ಈ ರೀತಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ, ತಮ್ಮ ಜೀವನವನ್ನು ಕಟ್ಟಿಕೊಳ್ಳಬಹುದು. ವಿದ್ಯಾರ್ಥಿಗಳು ಬರಿ ಐಟಿಬಿಟಿ ಕಂಪನಿಗಳಲ್ಲಿ ಉದ್ಯೋಗ ಗಳಿಸುವುದಕಷ್ಟೇ ತಮ್ಮ ಪ್ರತಿಭೆಯನ್ನ ಮೀಸಲಾಗಿಡಬಾರದು ಎಂದರು.
---------------
---
22 ಸಿಟಿಡಿ2