ಜಗತ್ತಿನ ಎಲ್ಲ ಕಲೆಗಳ ಮೂಲವೇ ಜಾನಪದ: ಮಂಡ್ಯ ರಮೇಶ್

KannadaprabhaNewsNetwork |  
Published : Feb 02, 2025, 01:01 AM IST
1ರಮೇಶ್‌ | Kannada Prabha

ಸಾರಾಂಶ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕುಂಜಿಬೆಟ್ಟು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆದ ಸಂಸ್ಕೃತಿ ಉತ್ಸವದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಪ್ರಾಯೋಜಿತ ಪಂಚಮಿ ಪುರಸ್ಕಾರವನ್ನು ರಂಗ ನಿರ್ದೇಶಕ ಹಾಗೂ ಚಿತ್ರನಟ ಮಂಡ್ಯ ರಮೇಶ್‌ಗೆ ಪ್ರದಾನಿಸಲಾಯಿತು.

ಪಂಚಮಿ ಪುರಸ್ಕಾರ ಪ್ರದಾನ

ಕನ್ನಡಪ್ರಭ ವಾರ್ತೆ ಉಡುಪಿ

ಜಗತ್ತಿನ ಎಲ್ಲ ಕಲೆಗಳ ಮೂಲ ಅಸ್ತಿತ್ವ ಜಾನಪದದಲ್ಲಿದೆ. ರಾಮಾಯಣ, ಮಹಾಭಾರತಗಳು ನಮ್ಮ ಬದುಕಿನ ರೂಪಕಗಳು ಎಂದು ರಂಗ ನಿರ್ದೇಶಕ ಹಾಗೂ ಚಿತ್ರನಟ ಮಂಡ್ಯ ರಮೇಶ್‌ ಅಭಿಪ್ರಾಯಪಟ್ಟರು.ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಕುಂಜಿಬೆಟ್ಟು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆದ ಸಂಸ್ಕೃತಿ ಉತ್ಸವದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಪ್ರಾಯೋಜಿತ ಪಂಚಮಿ ಪುರಸ್ಕಾರ ಸ್ವೀಕರಿಸಿ‌ ಮಾತನಾಡಿದರು.ರಂಗ ಕಲಾವಿದನಾಗುವುದು ಸುಲಭದ ಮಾತಲ್ಲ. ಅದು ಸಾಹಸದ ಕೆಲಸ. ಗಾಂಧಿಯನ್ನು ಬದಲಾಯಿಸಿರುವುದೂ ಇದೇ ರಂಗಭೂಮಿ ಎಂದರು.ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಿ, ನಾಟಕ, ಕಲೆ, ಸಂಗೀತ ಮನುಷ್ಯತ್ವ ಸಂಬಂಧ ಬೆಳೆಸಲು ಸಹಾಯ ಮಾಡುತ್ತದೆ. ಮನುಷ್ಯತ್ವದ ನೆಲೆಯಲ್ಲಿ ಸಂಬಂಧ ಗಟ್ಟಿಗೊಳಿಸುವುದು ಇಂದಿನ ಅಗತ್ಯ. ಮಕ್ಕಳು ಹಾಗೂ ಯುವಜನರಲ್ಲಿ ಮಾನವೀಯ ಮೌಲ್ಯಗಳನ್ನು ಉಳಿಸಿ, ಬೆಳೆಸಿಕೊಳ್ಳಬೇಕಾದರೆ ಅವರು ಕಲೆಯಲ್ಲಿ ತೊಡಗಿಕೊಳ್ಳಬೇಕು. ಭಿನ್ನ ದಾರಿಯಲ್ಲಿ ಸಾಗುತ್ತಿರುವ ಯುವಜನತೆಯನ್ನು ಸರಿಯಾದ ದಾರಿಯಲ್ಲಿ ಮುನ್ನಡೆಸಿಕೊಂಡು ಹೋಗಬೇಕಾದರೆ ಈ ರೀತಿಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಹೇಳಿದರು.​ಮುಖ್ಯ ಅಭ್ಯಾಗತರಾಗಿದ್ದ ಕಾರ್ಕಳ ಯಕ್ಷ ರಂಗಾಯಣ ನಿರ್ದೇಶಕ ಬಿ.ಆರ್. ವೆಂಕಟರಮಣ ಐತಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಗಾಂಧಿ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ.ಎಂ. ಹರಿಶ್ಚಂದ್ರ ಮಾತನಾಡಿ​ದರು.

ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅಭಿನಂದನಾ ಮಾತುಗಳನ್ನಾಡಿದರು.ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ. ಶಂಕರ್, ಉಪಾಧ್ಯಕ್ಷ ವಿಘ್ನೇಶ್ವರ ಅಡಿಗ, ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜೋಶಿ, ಸುಗುಣ ಸುವರ್ಣ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!