ಸಮಗ್ರ ಕೃಷಿ ಪದ್ಧತಿ ಅನುಸರಿಸಿ: ಎಂ.ಜಯರಾಮ ಶೆಟ್ಟಿ

KannadaprabhaNewsNetwork | Published : Apr 30, 2025 12:33 AM

ಸಾರಾಂಶ

ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್, ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಯ ೪೫ನೇ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕುಂದಾಪುರ

ಕೃಷಿಯಲ್ಲಿ ಸಮಗ್ರ ಕೃಷಿ ನೀತಿಯನ್ನು ಅನುಸರಿಸಿದರೆ ಲಾಭವಿದೆ ಎಂದು ಕೋಟದ ರೈತಧ್ವನಿ ಸಂಘ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ ಹೇಳಿದರು.ಅವರು ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್, ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಯ ೪೫ನೇ ಕಾರ್ಯಕ್ರಮದಲ್ಲಿ ಮಾತನಾಡಿದರು.ರೈತರು ಒಂದೇ ಬಗೆಯ ಬೆಳೆ ಬೆಳೆಯದೆ ಕಾಲಕ್ಕನುಗುಣವಾಗಿ ಮಣ್ಣಿಗೆ ಯೋಗ್ಯವಾದ ಬೆಳೆಗಳನ್ನು ಬೆಳೆಯಬೇಕು, ಆಗ ಲಾಭದಾಯ ಬೆಳೆಯಾಗಿಸಲು ಸಾಧ್ಯವಿದೆ. ಪ್ರಸ್ತುತ ರೈತ ಸಮುದಾಯಕ್ಕೆ ಅನುಕೂಲಕರ ಯೋಜನೆಗಳೇ ಇಲ್ಲವಾಗಿದೆ. ಸರ್ಕಾರ ಇಂತಹ ಯೋಜನೆಗಳ ಮೂಲಕ ಕೃಷಿಕರಿಗೆ ಹೆಚ್ಚಿನ ಉತ್ತೇಜನ ನೀಡಿದರೆ ಮಾತ್ರ ಕೃಷಿ ಪರಂಪರೆ ಉಳಿಯಲು ಸಾಧ್ಯವಿದೆ. ಪಂಚವರ್ಣ ಸಂಘಟನೆ ರೈತರನ್ನು ಗುರುತಿಸುವ ಕಾಯಕ ಶ್ರೇಷ್ಠವಾದದ್ದು ಎಂದರು.ಕೃಷಿ ಮತ್ತು ಹೈನುಗಾರಿಕಾ ಕ್ಷೇತ್ರದ ಸಾಧಕಿ ಅನುಸೂಯ ಹಂದೆ ಅವರಿಗೆ ಕೃಷಿ ಪರಿಕರ ನೀಡಿ ಗೌರವಿಸಲಾಯಿತು. ಅಲ್ಲದೆ ಪರಿಸರ ಜಾಗೃತಿ ಸಲುವಾಗಿ ಗಿಡ ನೆಟ್ಟು, ಗೋ ಪೂಜೆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಕಾರ್ಯಕ್ರಮವನ್ನು ಕುಂದಾಪುರ ವಕೀಲರ ಸಂಘದ ಮಾಜಿ ಅಧ್ಯಕ್ಷ ಎಚ್.ಪ್ರಮೋದ್ ಹಂದೆ ಉದ್ಘಾಟಿಸಿದರು.

ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಕೆ.ಮನೋಹರ ಪೂಜಾರಿ ವಹಿಸಿದ್ದರು. ಅಭ್ಯಾಗತರಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘ ಉಪಾಧ್ಯಕ್ಷ ನಾಗರಾಜ್ ಹಂದೆ, ಕರ್ಣಾಟಕ ಬ್ಯಾಂಕ್ ನಿವೃತ್ತ ಡಿಜಿಎಂ ರವೀಂದ್ರ ಹಂದೆ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು.ಮಹಿಳಾ ಮಂಡಲ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು. ಸದಸ್ಯ ಮಹೇಶ್ ಬೆಳಗಾವಿ ವಂದಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

Share this article