ಹುಬ್ಬಳ್ಳಿ:
ಇಲ್ಲಿನ ಕನಕದಾಸ ಶಿಕ್ಷಣ ಸಂಸ್ಥೆಯ ಸಹಭಾಗಿತ್ವದಲ್ಲಿ ಬಾಲಾಜಿ ಆಸ್ಪತ್ರೆ ವತಿಯಿಂದ "ವಿಶ್ವ ತಲೆ ಗಾಯ ಜಾಗೃತಿ ದಿನ " ಅಂಗವಾಗಿ ಗುರುವಾರ ಆರೋಗ್ಯ ಅರಿವು ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ತಲೆಗೆ ಪೆಟ್ಟಾಗಲು ಹಲವಾರು ಕಾರಣಗಳಿದ್ದರೂ ಅವುಗಳಲ್ಲಿ ವಾಹನ ಅಪಘಾತಗಳೇ ಮೊದಲ ಸ್ಥಾನದಲ್ಲಿವೆ. ವರದಿಯ ಪ್ರಕಾರ ಭಾರತದಲ್ಲಿ ತಲೆಗೆ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಲ್ಲಿ ಶೇ. 60ರಷ್ಟು ವಾಹನ ಅಪಘಾತಕ್ಕೆ ತುತ್ತಾದರೆ, ಶೇ. 20ರಿಂದ 30ರಷ್ಟು ಅನ್ಯ ಕಾರಣಗಳಿಂದ ಬಿದ್ದು ಮತ್ತು ಶೇ.10-20 ಹಲ್ಲೆ ಅಥವಾ ಆಟ ಆಡುವಾಗ ಸಂಭವಿಸುವ ಅಪಘಾತಗಳಿಂದ ತಲೆಗೆ ಪೆಟ್ಟು ಮಾಡಿಕೊಳ್ಳುತ್ತಾರೆ. ಇಂಡಿಯನ್ ಹೆಡ್ ಇಂಜುರಿ ಫೌಂಡೇಶನ್ ವರದಿ ಪ್ರಕಾರ ಭಾರತದಲ್ಲಿ ಪ್ರತಿ ವರ್ಷ 1.5 ಮಿಲಿಯನಷ್ಟು ಮೆದುಳಿನ ಗಾಯದ ವರದಿ ದಾಖಲಾಗುತ್ತಿದ್ದು, 2 ಲಕ್ಷಕ್ಕೂ ಅಧಿಕ ಸಾವು ಸಂಭವಿಸುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.ಭಾರತದಲ್ಲಿ ರಸ್ತೆ ಅಪಘಾತದಿಂದ ಪ್ರತಿ 6 ನಿಮಿಷಕ್ಕೆ ಒಂದರಂತೆ ಸಾವು ಸಂಭವಿಸುತ್ತಿದೆ. ಉಳಿದ ದೇಶಗಳಿಗೆ ಹೋಲಿಸಿದರೆ ರಸ್ತೆ ಅಪಘಾತದಲ್ಲಿ ತಲೆಗೆ ಪೆಟ್ಟಾಗಿ ಸಾವನ್ನಪ್ಪುತ್ತಿರುವವರ ಪ್ರಮಾಣ ಭಾರತದಲ್ಲೇ ಹೆಚ್ಚಿದೆ. ಆದ್ದರಿಂದ ವಾಹನ ಚಲಾಯಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಬೇಕು ಎಂದರು .