ಕನ್ನಡಪ್ರಭ ವಾರ್ತೆ ಬಾಗಲಕೋಟೆ
ತೋವಿವಿಯ ರೈತ ಭವನದ ತರಬೇತಿ ಕೇಂದ್ರದಲ್ಲಿ ಮುಖ್ಯ ತೋಟಗಾರಿಕೆ ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ಇಲಾಖೆ ಹಾಗೂ ಬೀಳಗಿ ಹಾಗೂ ಡಾ.ಎಸ್.ಬಿ. ದಂಡಿನ ಶಿಕ್ಷಣ ಮತ್ತು ಸಂಶೋಧನಾ ಪ್ರತಿಷ್ಠಾನ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ದಾಳಿಂಬೆ ಬೆಳೆಯಲ್ಲಿ ವೈಜ್ಞಾನಿಕ ಬೇಸಾಯ ಪದ್ಧತಿ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗುಣಮಟ್ಟದ ದಾಳಿಂಬೆ ಬೆಳೆಯಲು ಮೊದಲು ಭೂಮಿಯ ಫಲವತ್ತತೆ ಮುಖ್ಯ. ನಾಟಿ ಪೂರ್ವದಲ್ಲಿ ಭೂಮಿ ಪರೀಕ್ಷೆ ಮಾಡಿ, ಸಸ್ಯ ಜಂತು ನಿವಾರಣೆ ಮಾಡಬೇಕು. ರೋಗಗಳು ಬಾರದಂತೆ ಮುಂಜಾಗ್ರತಾ ಕ್ರಮ ಅನುಸರಿಸಿ ದಾಳಿಂಬೆ ಬೆಳೆಯಲು ಮುಂದಾಗಬೇಕು. ಹಣ್ಣು ಬೇರೆ ದೇಶಗಳಿಗೆ ರಪ್ತು ಮಾಡುವ ಮೂಲಕ ಉತ್ತಮ ಬೆಲೆ ಪಡೆದು ಆರ್ಥಿಕ ಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ ಮಾತನಾಡಿ, ಪ್ರತಿಯೊಂದು ತೋಟಗಾರಿಕೆ ಬೆಳೆಯಲ್ಲಿ ಬರುವ ಸಮಸ್ಯೆಗಳಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ವಿಜ್ಞಾನಿಗಳೊಂದಿಗೆ ಚರ್ಚಿಸಲಾಗುತ್ತಿದೆ. ಮುಂದುವರಿದು ರೈತರ ಜಮೀನಿನಲ್ಲಿಯೇ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲು ಸರಕಾರದ ಮಟ್ಟದಲ್ಲಿ ಯೋಜನೆ ರೂಪಿಸಲಾಗುತ್ತಿದೆ. ಬೂದಿಹಾಳ ಗ್ರಾಮದಲ್ಲಿ 10 ಎಕರೆ ಜಮೀನು ಖರೀದಿಸಲಾಗಿದ್ದು, ದಾಳಿಂಬೆ ಬೆಳೆಯ ಸಸಿಗಳನ್ನು ತಯಾರಿ ಮಾಡಿಕೊಡುವ ಕೆಲಸ ನಡೆಸಲಾಗುತ್ತಿದೆ ಎಂದು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ತೋವಿವಿಯ ಸಂಶೋಧನಾ ನಿರ್ದೇಶಕ ಡಾ.ಬಿ. ಫಕ್ರುದ್ದೀನ್ ಮಾತನಾಡಿ, ದಾಳಿಂಬೆ ಬೆಳೆ ಜಾಗೃತಿಯಿಂದ ಬೆಳೆಯಬೇಕು. ನೀರು ಕಡಿಮೆ ಇದ್ದರೂ ಬೆಳೆ ಬರುತ್ತದೆ. ಆದರೆ ಈ ಬೆಳೆಗೆ ಬರುವ ರೋಗ ನಿಯಂತ್ರಿಸುವ ಕೆಲಸವಾಗಬೇಕು. ಅದಕ್ಕಾಗಿ ಬೇಸಾಯ ಪದ್ಧತಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳಬೇಕು. ರೈತರು ಗುಣಮಟ್ಟ ಬೆಳೆ ಬೆಳೆಯುವಂತೆ ಮಾಡುವ ನಿಟ್ಟಿನಲ್ಲಿ ತರಬೇತಿ ಆಯೋಜನೆ ಮಾಡಲಾಗಿದೆ. ತೋಟಗಾರಿಕೆ ಇಲಾಖೆಯ ಜೊತೆ ತೋವಿವಿ ಕೈಜೋಡಿಸಿ ರೈತರ ಹೊಲದಲ್ಲಿಯೇ ವೈಜ್ಞಾನಿಕ ಪದ್ದತಿ ಪ್ರಾಯೋಗಿಕವಾಗಿ ಕೈಗೊಳ್ಳುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮುಖ್ಯ ತೋಟಗಾರಿಕಾ ವಿಜ್ಞಾನ ಕೇಂದ್ರದ ಸಹ ಸಂಶೋಧನಾ ಹಾಗೂ ವಿಸ್ತರಣೆ ನಿರ್ದೇಶಕ ಡಾ.ವಸಂತ ಗಾಣಿಗೇರ, ಕ್ಷೇತ್ರ ಅಧೀಕ್ಷಕ ಡಾ.ಆನಂದ ನಂಜಪ್ಪನವರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮಹೇಶ ದಂಡನ್ನವರ ಉಪಸ್ಥಿತರಿದ್ದರು.
- ಡಾ.ವಸಂತ ಗಾಣಿಗೇರ ಸಹ ಸಂಶೋಧಕರು ತೋವಿವಿ