ಕನ್ನಡಪ್ರಭ ವಾರ್ತೆ ರಾಮನಗರ
ನಗರದ ಕಂದಾಯ ಭವನದಲ್ಲಿರುವ ಕನ್ನಡ ಮತ್ತು ಸಂಸ್ಸೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹಿಂದೂ ಧರ್ಮದವರಿಗೆ ಪವಿತ್ರ ಗ್ರಂಥವಾದ ಭಗವದ್ಗೀತೆಯು ಶ್ರೀ ಕೃಷ್ಣನಿಂದ ಬೋಧಿಸಲ್ಪಟ್ಟಿದ್ದು, ಇದರಲ್ಲಿರುವ ಮಾನವೀಯ ಮೌಲ್ಯಗಳನ್ನು ಕೇವಲ ಹಿಂದೂ ಧರ್ಮಕ್ಕೆ ಸೀಮಿತಗೊಳಿಸದೆ ಎಲ್ಲಾ ಜನಾಂಗದವರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಇಂದಿನ ಯುವ ಪೀಳಿಗೆ ಮತ್ತು ಮಕ್ಕಳಲ್ಲಿ ನೈತಿಕ ಶಿಕ್ಷಣ ಕೊರತೆಯು ಎದ್ದು ಕಾಣುತ್ತಿದೆ. ಅದನ್ನು ಪೋಷಕರು ಮನೆಗಳಿಂದಲೇ ಮಕ್ಕಳಿಗೆ ಶ್ರೀ ಕೃಷ್ಣರಂತಹ ಆದರ್ಶ ಪುರುಷರ ಉದಾಹರಣೆಯೊಂದಿಗೆ ಕಲಿಸಬೇಕು ಎಂದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ್ ಮಾತನಾಡಿ, ಇಂದಿನ ಮಕ್ಕಳು ಅತಿ ಹೆಚ್ಚು ಶಿಕ್ಷಣಕ್ಕೆ ಪ್ರಾಮುಖ್ಯತೆಯನ್ನು ಕೊಡಬೇಕು ಎಂದು ಹೇಳಿದರು. ಶಿಕ್ಷಣದಿಂದಲೇ ತಮ್ಮ ಅಭಿವೃದ್ಧಿ ಮತ್ತು ಬೆಳವಣಿಗೆ ಸಾಧ್ಯ ಆದ್ದರಿಂದ ಸಮುದಾಯದ ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಮೊದಲ ಆದ್ಯತೆಯಾಗಬೇಕು ಮತ್ತು ಸರ್ಕಾರದಿಂದ ಬರುವ ಅನೇಕ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜದಲ್ಲಿ ಘನತೆಯಿಂದ ಜೀವನ ನಡೆಸಬೇಕು ಎಂದು ತಿಳಿಸಿದರು.