ವಿಳಂಬ ನೀತಿ ಅನುಸರಿಸಿದರೇ ನಿರ್ದಾಕ್ಷಿಣ್ಯ ಕ್ರಮ

KannadaprabhaNewsNetwork |  
Published : Jun 09, 2026, 03:00 AM IST
ಹುಕ್ಕೇರಿಯಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿದರು. | Kannada Prabha

ಸಾರಾಂಶ

ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಳಂಬ ನೀತಿ ಅನುಸರಿಸಿದರೇ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಖಡಕ್‌ ಎಚ್ಚರಿಕೆ ನೀಡಿದರು.

ಕನ್ನಡಪ್ರಭ ವಾರ್ತೆ ಹುಕ್ಕೇರಿ

ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಳಂಬ ನೀತಿ ಅನುಸರಿಸಿದರೇ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಖಡಕ್‌ ಎಚ್ಚರಿಕೆ ನೀಡಿದರು.

ಇಲ್ಲಿನ ತಾಲೂಕು ಪಂಚಾಯತಿ ಸಭಾಭವನದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿಗದಿತ ಕಾಲಾವಧಿಯಲ್ಲಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಹುಕ್ಕೇರಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಅಧಿಕಾರಿ ಮತ್ತು ಸಿಬ್ಬಂದಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು. ಇದರೊಂದಿಗೆ ಜನರಿಗೆ ಪಾರದರ್ಶಕ ಆಡಳಿತ ಒದಗಿಸಬೇಕು ಎಂದರು.ನೀರಾವರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಕೃಷಿ ಚಟುವಟಿಕೆಗಳಿಗೆ ಅಗತ್ಯ ವಿದ್ಯುತ್ ಪೂರೈಸಬೇಕು. ಪ್ರಸಕ್ತ ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯವಿರುವ ಬೀಜ ಮತ್ತು ರಸಗೊಬ್ಬರ ಪೂರೈಸಬೇಕು. ಕೃಷಿ ಚಟುವಟಿಕೆಗಳಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಕಲ್ಪಿಸಬೇಕು. ಇದೀಗ ಮಳೆಗಾಲ ಶುರುವಾಗಿದ್ದು, ಭೂಮಿಯ ತೇವಾಂಶ ನೋಡಿಕೊಂಡು ಬಿತ್ತನೆ ಮಾಡಬೇಕು ಎಂದು ಸೂಚಿಸಿದರು.ಅರಣ್ಯ ಇಲಾಖೆಯಿಂದ ರಸ್ತೆ ಬದಿ, ಸರ್ಕಾರಿ ಗಾಯರಾಣ, ಶಾಲಾ-ಅಂಗನವಾಡಿ ಆವರಣಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸಬೇಕು. ಜನರಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನಿಗಾ ವಹಿಸಬೇಕು. ಅಂಗನವಾಡಿ-ಶಾಲೆಗಳ ಶಿಥಿಲ ಕಟ್ಟಡಗಳನ್ನು ದುರಸ್ತಿಗೊಳಿಸಬೇಕು. ಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷಕ್ಕೆ ಬೇಕಾದ ಸೌಲಭ್ಯಗಳನ್ನು ಒದಗಿಸಬೇಕು. ರಸ್ತೆ, ಚರಂಡಿ, ಬೀದಿ ದೀಪಗಳ ಅಳವಡಿಕೆ, ಸಮುದಾಯ ಭವನ ನಿರ್ಮಾಣ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸಬೇಕು ಎಂದು ಆದೇಶಿಸಿದರು.ತಹಸೀಲ್ದಾರ್‌ ಬಲರಾಮ ಕಟ್ಟಿಮನಿ, ತಾಲೂಕು ಪಂಚಾಯತಿ ಇಒ ಟಿ.ಆರ್.ಮಲ್ಲಾಡದ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಶಾನೂಲ್ ತಹಸೀಲ್ದಾರ್‌, ಸಚಿವರ ಆಪ್ತ ಸಹಾಯಕರಾದ ಕಿರಣ ರಜಪೂತ, ದಯಾನಂದ ಪಾಟೀಲ, ಪ್ರವೀಣ ಗುಡ್ಡಾಕಾಯು, ಬಸವರಾಜ ಜತ್ತಿ, ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ರಾಶಿಂಗೆ, ಕೆಡಿಪಿ ಜಿಲ್ಲಾ ಸಮಿತಿ ಸದಸ್ಯ ಬಸವರಾಜ ಕೋಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ ರವದಿ, ಸಂತೋಷ ಮುಡಸಿ, ಮುಖಂಡರಾದ ರಿಷಭ್ ಪಾಟೀಲ, ಇಲಿಯಾಸ್ ಇನಾಮದಾರ, ರವಿ ಜಿಂಡ್ರಾಳಿ, ಇಮ್ರಾನ ಮೋಮಿನ್, ಅಕ್ಷಯ ವೀರಮುಖ, ದಿಲೀಪ ಹೊಸಮನಿ, ಈರಣ್ಣ ಬಿಸಿರೊಟ್ಟಿ, ಜಯಪ್ರಕಾಶ ಕರಜಗಿ, ಮಲಗೌಡ ಪಾಟೀಲ, ಮಂಜು ಕಾಂಬಳೆ, ಕೆಂಪಣ್ಣ ಶಿರಹಟ್ಟಿ, ಕೆ.ವೆಂಕಟೇಶ, ಕಿರಣ ಬಾಗೇವಾಡಿ, ಸತೀಶ ದಿನ್ನಿಮನಿ ಮತ್ತಿತರರು ಉಪಸ್ಥಿತರಿದ್ದರು.ತಾಪಂ ಮ್ಯಾನೇಜರ್ ಅವಿನಾಶ ಹೊಳೆಪ್ಪಗೋಳ ಸ್ವಾಗತಿಸಿದರು. ಯೋಜನಾಧಿಕಾರಿ ಪ್ರಶಾಂತ ಮುನ್ನೋಳಿ ನಿರೂಪಿಸಿದರು. ಬಳಿಕ ಸಚಿವರು ವಿವಿಧ ಗ್ರಾಮಸ್ಥರ ಅಹವಾಲು ಆಲಿಸಿ, ಸಮಸ್ಯೆ ಇತ್ಯರ್ಥಕ್ಕೆ ಸಂಬಂಧಿಸಿದವರಿಗೆ ಸೂಚಿಸಿದರು.ವಿವಿಧ ಇಲಾಖೆಗಳ ಯೋಜನೆಗಳು ಅರ್ಹರಿಗೆ ತಲುಪುವಂತೆ ನೋಡಿಕೊಳ್ಳಬೇಕು. ತನ್ಮೂಲಕ ಎಲ್ಲ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಒಂದು ವೇಳೆ ಈ ಕರ್ತವ್ಯದಲ್ಲಿ ಉದಾಸೀನತೆ ಕಂಡು ಬಂದಲ್ಲಿ ಅಂಥ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ವಹಿಸಲಾಗುವುದು.

-ಸತೀಶ ಜಾರಕಿಹೊಳಿ, ಲೋಕೋಪಯೋಗಿ ಸಚಿವರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಗರಬೆಟ್ಟ ಏತ ನೀರಾವರಿ ಪೂರ್ಣಗೊಳಿಸಲು ಆಗ್ರಹ
ಸಚಿವ ಸ್ಥಾನ ನೀಡದಿದ್ರೆ ಇಂಡಿ ಬಂದ್ ಗೆ ಕರೆ