ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ದಾರಿಯುದ್ದಕ್ಕೂ ಹೂಮಳೆ ಸುರಿಸುವ ಮೂಲಕ ನಿರ್ಗಮಿತರನ್ನು ಸಮಾರಂಭಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು ಅವರು ನಿರ್ಗಮಿತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿಲ್ಲೆಯ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಾರೆ. ಕುಡಿಯುವ ನೀರಿನ ಯೋಜನೆ ಹಾಗೂ ಕಾಮಗಾರಿಗಳ ಪ್ರಗತಿಗೆ ಮೋನಾ ರೋತ್ ಅವರ ಕೊಡುಗೆ ಅನನ್ಯವಾಗಿದೆ. ಅವರ ಸೇವೆ ಚಾಮರಾಜನಗರ ಜಿಲ್ಲೆಗೆ ಇನ್ನೂ ಅಗತ್ಯವಾಗಿತ್ತು ಎಂದರು.ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲೆ ಮುಂಚೂಣಿ ಸ್ಥಾನ ಕಾಯ್ದುಕೊಳ್ಳಲು ಮೋನಾ ರೋತ್ ಅವರ ಪರಿಶ್ರಮವಿದೆ. ಯೋಜನೆಗಳ ಪ್ರಗತಿಗಾಗಿ ಜಿಲ್ಲಾ ಗ್ಯಾರಂಟಿ ಸಮಿತಿಗೆ ಉತ್ತಮ ಸಹಕಾರ ನೀಡಿದ್ದರು. ಗ್ಯಾರಂಟಿ ಯೋಜನೆಗಳ ರಾಜ್ಯಮಟ್ಟದ ಸಭೆಗಳಲ್ಲಿಯೂ ಅವರು ಜಿಲ್ಲೆಯ ಪರವಾಗಿ ಉತ್ತಮ ಕೆಲಸ ಮಾಡಿದ್ದಾರೆ ಎಂದರು.
ಜಿಲ್ಲೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಅಭಿವೃದ್ಧಿಗಾಗಿ ಸ್ವಯಂ ಪ್ರೇರಣೆಯಿಂದ ಕರ್ತವ್ಯದಲ್ಲಿ ತೊಡಗಿಸಿಕೊಳ್ಳಲು ಅಧಿಕಾರಿಗಳಿಗೆ ಸಲಹೆ ನೀಡಿದ್ದೇನೆ. ಯಾವುದೇ ವಿಭಾಗಗಳ ಪ್ರಗತಿಯಲ್ಲಿ ಜಿಲ್ಲೆ ಅಗ್ರ ೧೦ ರೊಳಗಿರಬೇಕು ಎಂಬುದು ನನ್ನ ಅಭಿಲಾಷೆಯಾಗಿತ್ತು. ಒಟ್ಟಾರೆ ಜಿಲ್ಲೆಯಲ್ಲಿ ಕೆಲಸ ಮಾಡಿದ ತೃಪ್ತಿ ನನಗಿದೆ ಎಂದರು.