ಶಾಲಾ, ಆಸ್ಪತ್ರೆ, ವಸತಿ ನಿಲಯ, ಅಂಗನವಾಡಿಗೆ ಆಹಾರ ಆಯೋಗದಿಂದ ಪರಿಶೀಲನೆ: ಡಾ.ಹೆಚ್.ಕೃಷ್ಣ ಮಾಹಿತಿ

KannadaprabhaNewsNetwork |  
Published : Nov 28, 2025, 01:15 AM IST
ಫೋಟೋ- ಫುಡ | Kannada Prabha

ಸಾರಾಂಶ

ಆಹಾರ ಭದ್ರತೆ ಕಾಯ್ದೆಯ ಸಮರ್ಪಕ ಅನುಷ್ಠಾನ ಮತ್ತು ಲೋಪದೋಷ ಸರಿಪಡಿಸುವಲ್ಲಿ ಆಯೋಗವು ಇಂದಿನಿಂದ 3 ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಶಾಲಾ, ಆಸ್ಪತ್ರೆ, ವಸತಿ ನಿಲಯ, ಅಂಗನವಾಡಿಗೆ ಭೇಟಿ ನೀಡಿ ಆಹಾರ ಸುರಕ್ಷತೆ ಮತ್ತು ಪೂರೈಕೆಯ ಗುಣಮಟ್ಟದ ಕುರಿತು ಪರಿಶೀಲನೆ ನಡೆಸಲಿದೆ ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಣ ಹೇಳಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ಆಹಾರ ಭದ್ರತೆ ಕಾಯ್ದೆಯ ಸಮರ್ಪಕ ಅನುಷ್ಠಾನ ಮತ್ತು ಲೋಪದೋಷ ಸರಿಪಡಿಸುವಲ್ಲಿ ಆಯೋಗವು ಇಂದಿನಿಂದ 3 ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಶಾಲಾ, ಆಸ್ಪತ್ರೆ, ವಸತಿ ನಿಲಯ, ಅಂಗನವಾಡಿಗೆ ಭೇಟಿ ನೀಡಿ ಆಹಾರ ಸುರಕ್ಷತೆ ಮತ್ತು ಪೂರೈಕೆಯ ಗುಣಮಟ್ಟದ ಕುರಿತು ಪರಿಶೀಲನೆ ನಡೆಸಲಿದೆ ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಣ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಸದಸ್ಯರು ಪ್ರತಿ ತಾಲೂಕಿಗೆ ಭೇಟಿ ನೀಡಿ ಅನಿರೀಕ್ಷಿತವಾಗಿ ವಸತಿ ನಿಲಯ, ನ್ಯಾಯ ಬೆಲೆ‌ ಅಂಗಡಿ, ಮಧ್ಯಾಹ್ನ ಬಿಸಿಯೂಟ, ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ‌ ಎಂದರು.

ಅನ್ನ ಭಾಗ್ಯ ಯೋಜನೆಯಡಿ ನೀಡಲಾಗುವ ಅಕ್ಕಿ ಅಕ್ರಮವಾಗಿ ಕಾಳ‌ಸಂತೆಯಲ್ಲಿ ಮಾರಾಟ ಮತ್ತು ಸಾಗಾಟದ ಬಗ್ಗೆ ವ್ಯಾಪಕ ದೂರು ಬಂದಿವೆ. ಹೀಗಾಗಿ ಆಯೋಗ ಇದೆಲ್ಲದರ ಬಗ್ಗೆ ಪರಿಶೀಲನೆ ಮಾಡಲಿದೆ. ಗೋಡೌನ್ ಗಳಿಗೆ ಹಠಾತ್ ಭೇಟಿ ನೀಡಲಿದೆ. ಅನ್ನ ಭಾಗ್ಯ ಮತ್ತು ಆಹಾರ ಭದ್ರತೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಏನೇ ಅಕ್ರಮ, ಲೋಪದೋಷಗಳಿದ್ದಲ್ಲಿ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಇದರಿಂದ ಬಾಧಿತ ವ್ಯಕ್ತಿಗಳು ಆಯೋಗದ ಸದಸ್ಯರನ್ನು ಸಂಪರ್ಕಿಸಬಹುದಾಗಿದೆ ಎ‍ಂದು ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಣ ತಿಳಿಸಿದರು.

ಆಯೋಗದ‌ ಎಲ್ಲಾ ಸದಸ್ಯರು ತಾಲೂಕಾ ಪ್ರವಾಸ ಮುಗಿಸಿದ ನಂತರ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತದೆ. ಜಿಲ್ಲೆಯಲ್ಲಿ ಆಯೋಗಕ್ಕೆ ಕಂಡುಬಂದ ನ್ಯೂನತೆಗಳನ್ನು ಮತ್ತು ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗುವುದು ಎಂದರು.

ಸಭೆಯಲ್ಲಿ ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್ ರಾವ್, ಮಾರುತಿ ಎಂ. ದೊಡ್ಡಲಿಂಗಣ್ಣವರ, ಎ.ರೋಹಿಣಿ ಪ್ರಿಯ, ಕೆ.ಎಸ್.ವಿಜಯಲಕ್ಷ್ಮಿ, ಅಹಾರ ಮತ್ತು ನಾಗರಿಕ‌ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಮುನಾವರ ದೌಲಾ, ಸಮಾಜ‌ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಡಿ.ಎಚ್.ಒ ಡಾ.ಶರಣಬಸಪ್ಪ ಕ್ಯಾತನಾಳ, ಡಿ.ಡಿ.ಪಿ.ಐ ಸುರ್ಯಕಾಂತ ಮದಾನೆ, ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ರಫೀಕ್ ಲಾಡಜಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ಯಾಲೆಟ್‌ನಲ್ಲಿ ಮತದಾನ ನಡೆಸಿದರೆ ತಪ್ಪೇನು? ರಾಜ್ಯ ಚುನಾವಣಾ ಆಯುಕ್ತ
ಜಾಗತಿಕ ಸವಾಲಿಗೆ ನವೋದ್ಯಮ ಉತ್ತರ : ರಾಧಾಕೃಷ್ಣನ್‌