ಕನ್ನಡಪ್ರಭ ವಾರ್ತೆ ಉಳ್ಳಾಲ
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಮಂಗಳೂರು, ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರ್ ಘಟಕ ದ.ಕ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನ ಕಟ್ಟಡದ ಉದ್ಘಾಟನೆ, ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯಾವುದೇ ಯೋಜನೆ ಹಾಕಿಕೊಂಡಾಗ ಅದರಲ್ಲಿ ಲೋಪ ಹುಡುಕದೆ ಅದನ್ನು ಅಚ್ಚುಕಟ್ಟಾಗಿ ಮಾಡುವ ಸದುದ್ದೇಶ ಹೊಂದಿದರೆ ಅದಕ್ಕೆ ಬೇರೆ ಬೇರೆ ರೂಪದಲ್ಲಿ ದಾನಿಗಳು ಸಹಕರಿಸುತ್ತಾರೆ ಎಂಬುದಕ್ಕೆ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಿಪಿಸಿಎಲ್ ಸಂಸ್ಥೆಯ ರಾಜ್ಯ ಮುಖ್ಯಸ್ಥೆ ನೀರಾ ಸಿಂಗ್ ಅವರು 1.59 ಕೋಟಿ ರು. ನೀಡಲು ಸಾಧ್ಯವಾಯಿತು ಎಂದು ಸಂತಸ ವ್ಯಕ್ತಪಡಿಸಿದರು.ಕಾರ್ಯಕ್ರಮ ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಮಾದರಿ ಸಮುದಾಯ ಆರೋಗ್ಯ ಕೇಂದ್ರ ಉದ್ಘಾಟನೆಗೊಂಡಿದ್ದು ಆರೋಗ್ಯ ಕಾಪಾಡಿಕೊಳ್ಳಲು ಇಂತಹ ವ್ಯವಸ್ಥೆ ಮುಖ್ಯ ಎಂದರು.
ಮುಖ್ಯಸ್ಥೆ ನೀರಾ ಸಿಂಗ್, ಸಮುದಾಯ ಆರೋಗ್ಯ ಕೇಂದ್ರ ಉಸ್ತುವಾರಿ ವಹಿಸಿರುವ ಯೇನೆಪೋಯ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಯು. ಅಬ್ದುಲ್ಲಾ ಕುಂಞಿ, ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷ ಕಣಚೂರು ಮೋನು, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಬಿಪಿಸಿಎಲ್ ಸಂಸ್ಥೆಯ ಅಧಿಕಾರಿ ಫರ್ವೇಜ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ
ಸದಾಶಿವ ಉಳ್ಳಾಲ, ನಗರಸಭೆಯ ಅಧ್ಯಕ್ಷೆ ಶಶಿಕಲಾ ಉಳ್ಳಾಲ, ಮಾಜಿ ಮಂಡಲ ಪ್ರಧಾನ ರಶೀದ್ ಹಾಜಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಕೆ.,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಹೆಚ್.ಆರ್. ತಿಮ್ಮಯ್ಯ ಸ್ವಾಗತಿಸಿದರು. ಅಬ್ದುಲ್ ರಝಕ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು.