ವಿಷಾಹಾರ ಸೇವನೆ: ಅಸ್ವಸ್ಥರಾಗಿದ್ದ ೨೯ ವಿದ್ಯಾರ್ಥಿಗಳು ಗುಣಮುಖ

KannadaprabhaNewsNetwork |  
Published : Mar 23, 2025, 01:33 AM IST
೨೨ಕೆಎಂಎನ್‌ಡಿ-8ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರೊಂದಿಗೆ ಆಸ್ಪತ್ರೆಯಿಂದ ಬಿಡುಗಡೆಯಾದ ವಿದ್ಯಾರ್ಥಿಗಳು. | Kannada Prabha

ಸಾರಾಂಶ

ವಿಷಾಹಾರ ಸೇವನೆ ಮಾಡಿ ಅಸ್ವಸ್ಥಗೊಂಡಿದ್ದ ಮಕ್ಕಳ ಪೈಕಿ ೨೯ ಮಕ್ಕಳು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲಾಧಿಕಾರಿ ಡಾ.ಕುಮಾರ ಮತ್ತು ಜಿಲ್ಲಾ ಆರಕ್ಷಕ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಸಮ್ಮುಖದಲ್ಲಿ ಮಕ್ಕಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಮಂಡ್ಯ

ವಿಷಾಹಾರ ಸೇವನೆ ಮಾಡಿ ಅಸ್ವಸ್ಥಗೊಂಡಿದ್ದ ಮಕ್ಕಳ ಪೈಕಿ ೨೯ ಮಕ್ಕಳು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲಾಧಿಕಾರಿ ಡಾ.ಕುಮಾರ ಮತ್ತು ಜಿಲ್ಲಾ ಆರಕ್ಷಕ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಸಮ್ಮುಖದಲ್ಲಿ ಮಕ್ಕಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದ ಗೋಕುಲ ವಿದ್ಯಾ ಸಂಸ್ಥೆಗೆ ಸೇರಿದ ಮೇಘಾಲಯ ಮೂಲದ ೨೪ ಹಾಗೂ ಸ್ಥಳೀಯ ೭ ವಿದ್ಯಾರ್ಥಿಗಳು ಹೋಳಿ ಹಬ್ಬದ ಊಟ ಸೇವಿಸಿ ಅಸ್ವಸ್ಥಗೊಂಡಿದ್ದರು. ಊಟ ಸೇವಿಸಿದ್ದ ವಿದ್ಯಾರ್ಥಿಗಳ ಪೈಕಿ ಮೇಘಾಲಯದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. ಉಳಿದ ೨೯ ಮಕ್ಕಳು ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆಸ್ಪತ್ರೆಯಿಂದ ಬಿಡುಗಡೆಯಾದ ಮಕ್ಕಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಧೈರ್ಯ ತುಂಬಿದರು. ಮೇಘಾಲಯ ವಿದ್ಯಾರ್ಥಿಗಳ ವಾಸ್ತವ್ಯಕ್ಕೆ ಮಂಡ್ಯದ ಬಾಲಕರ ಬಾಲಮಂದಿರದಲ್ಲಿ ಉಳಿದುಕೊಳ್ಳುವುದಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ. ಮಕ್ಕಳ ಆಧಾರ್ ಗುರುತಿನ ಚೀಟಿಯನ್ನು ತಂದರೆ ಮೇಘಾಲಕ್ಕೆ ಕಳುಹಿಸುವುದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.

ಚಿಟ್ಟನಹಳ್ಳಿಯಲ್ಲಿ ಗ್ರಾಮ ದೇವತೆ ಹಬ್ಬ ವಿಜೃಂಭಣೆಯ ಆಚರಣೆ

ಪಾಂಡವಪುರ: ತಾಲೂಕಿನ ಚಿಟ್ಟನಹಳ್ಳಿ ಗ್ರಾಮ ದೇವತೆ ಮಂಚಮ್ಮ ದೇವಿಹಬ್ಬವನ್ನು ಶನಿವಾರ ಗ್ರಾಮಸ್ಥರು ಬಹಳ ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಹಬ್ಬದ ಹಿನ್ನೆಲೆಯಲ್ಲಿ ಮಂಚಮ್ಮ ದೇವಿಗೆ ಬೆಳಗ್ಗೆಯಿಂದಲೇ ವಿಶೇಷ ಪೂಜೆ-ಪುನಸ್ಕಾರಗಳು ನೆರವೇರಿದವು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಮಂಚಮ್ಮ ದೇವಿಗೆ ತಮ್ಮ ಭಕ್ತಿ-ಭಾವವನ್ನು ಸಮರ್ಪಿಸುವ ಮೂಲಕ‌ ದೇವರ ಕೃಪೆಗೆ ಪಾತ್ರರಾದರು. ಈ ವೇಳೆ ಸಾವಿರಾರು ಜನರು ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಂಡಿದ್ದು‌‌ ದೇವರ ಪ್ರಸಾದ ಸ್ವೀಕರಿಸಿದರು. ಪಟೇಲ್ ಬಿ.ಸಿ. ಮರಿಗೌಡ ಮತ್ತು ಶ್ರೀಮತಿ ಜವರಮ್ಮ ಹೆಸರಿನಲ್ಲಿ ಅವರ ಪುತ್ರ ಮತ್ತು ಪುತ್ರಿಯರು ನಿರ್ಮಿಸಿದ ಗ್ರಾಮದ ಸ್ವಾಗತ ಕಮಾನನ್ನು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಸಮ್ಮುಖದಲ್ಲಿ ಕ್ಯಾಪ್ಟನ್ ಯೋಗೀಶ ಮತ್ತು ಕುಟುಂಬ ಸದಸ್ಯರು ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ