ಬ್ಯಾಂಕುಗಳು ಆಹಾರ ಸಂಸ್ಕರಣೆಗೆ ಪ್ರೋತ್ಸಾಹ ನೀಡಿ: ಪ್ರತೀಕ್ ಬಾಯಲ್‌

KannadaprabhaNewsNetwork |  
Published : Nov 27, 2026, 02:45 AM IST
ಜಿಪಂ ಸಿಇಓ ಬಾಯಲ್ ಅಧ್ಯಕ್ಷತೆಯಲ್ಲಿ ಲೀಡ್ ಬ್ಯಾಂಕ್ ಸಭೆ ನಡೆಯಿತು | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ಬ್ಯಾಂಕುಗಳು ಆರ್ಥಿಕ ನೆರವನ್ನು ಕಲ್ಪಿಸಿ ಹೆಚ್ಚು ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಬ್ಯಾಂಕ್ ಅಧಿಕಾರಿಗಳಿಗೆ ಸಲಹೆ ನೀಡಿದರು.

ಉಡುಪಿ: ಜಿಲ್ಲೆಯಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ಬ್ಯಾಂಕುಗಳು ಆರ್ಥಿಕ ನೆರವನ್ನು ಕಲ್ಪಿಸಿ ಹೆಚ್ಚು ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಬ್ಯಾಂಕ್ ಅಧಿಕಾರಿಗಳಿಗೆ ಸಲಹೆ ನೀಡಿದರು.

ಅವರು ಬುಧವಾರ ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಜಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಜಿಲ್ಲಾ ಸಮಾಲೋಚನಾ ಸಮಿತಿ ಮತ್ತು ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ (ಪಿ.ಎಂ.ಎಫ್.ಎಂ.ಇ) ಯಡಿ ವಿವಿಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ 15 ಲಕ್ಷ ರು. ಗಳ ಅನುದಾನ ನೀಡಲಾಗುತ್ತಿದ್ದು, ಶೇ. 50 ರಷ್ಟು ಸಹಾಯಧನ ಸೌಲಭ್ಯ ಲಭ್ಯವಿದೆ. ಇದಕ್ಕೆ ಯಾವುದೇ ಇಲಾಖೆಗೆ ಅರ್ಜಿ ಸಲ್ಲಿಸಬೇಕಿಲ್ಲ, ಫಲಾಪೇಕ್ಷಿಗಳು ಮೊಬೈಲ್ ಮೂಲಕವೇ ಜಿಲ್ಲಾ ಸಂಪನ್ಮೂಲ ವ್ಯಕ್ತಿಗೆ ಅವಶ್ಯಕತೆ ದಾಖಲೆಗಳನ್ನು ಸಲ್ಲಿಸಿ, ಬ್ಯಾಂಕ್‌ಗಳಿಂದ ಆರ್ಥಿಕ ನೆರವು ಪಡೆಯಬಹುದಾಗಿದೆ. ಈ ಯೋಜನೆಯ ಹೆಚ್ಚು ಜನರು ಪ್ರಯೋಜನ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.ಉಡುಪಿ ಜಿಲ್ಲೆಯ ಎಲ್ಲ ಬ್ಯಾಂಕುಗಳಲ್ಲಿ ಒಟ್ಟು 78,101.82 ಕೋಟಿ ರು. ನಷ್ಟು ವ್ಯವಹಾರ ನಡೆದಿದ್ದು, ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಇದು ಹೆಚ್ಚಾಗಿದೆ. ಕಳೆದ ವರ್ಷ ಈ ಅವಧಿಯಲ್ಲಿ ಬ್ಯಾಂಕುಗಳ ಸಾಲ ಠೇವಣಿ ಅನುಪಾತವು ಶೇ. 48.62 ಇದ್ದು, ಪ್ರಸ್ತುತ ಶೇ. 49.32 ರಷ್ಟು ಏರಿಕೆಯಾಗಿದೆ. ಆರ್.ಬಿ.ಐ ನ ನಿಯಮಾನುಸಾರ ಸಿ.ಡಿ ಅನುಪಾತದ ಹೆಚ್ಚಿಸಲು ಎಲ್ಲಾ ಬ್ಯಾಂಕುಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಒಟ್ಟು ಶೇ. 62.41 ಸಾಧನೆ: ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಡಿವಿಜನಲ್ ಮ್ಯಾನೆಜರ್ ಅರ್ಚನಾ ಎನ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಗೆ ಪ್ರಸಕ್ತ ಸಾಲಿನಲ್ಲಿ ಆದ್ಯತೆಯ ಮತ್ತು ಆದ್ಯತೆಯೇತರ ವಲಯಗಳೆರಡಕ್ಕೂ ಒಟ್ಟಾರೆಯಾಗಿ 18,532.26 ಕೋಟಿ ರೂ.ಗಳ ವಾರ್ಷಿಕ ಸಾಲ ಯೋಜನೆ ಗುರಿಯನ್ನು ನಿಗದಿಪಡಿಸಲಾಗಿದ್ದು, 2026 ರ ಸೆಪ್ಟಂಬರ್ ಅಂತ್ಯದವರೆಗೆ 11,565.64 ಕೋಟಿ ರು. ಗುರಿ ಸಾಧಿಸಿ, ಶೇ. 62.41 ಸಾಧನೆ ಮಾಡಲಾಗಿದೆ ಎಂದರು.ಸಭೆಯಲ್ಲಿ ನಬಾರ್ಡ್‌ನ ಡಿ.ಡಿ.ಎಂ. ಸಂಗೀತಾ ಕಾರ್ಥಾ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಜಿ, ಜೆ.ಜೆ.ಎಂ. ವಿಶ್ವನಾಥ ಶೆಟ್ಟಿ, ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಡಾ. ಬೊಮ್ಮಯ್ಯ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕುಗಳ ಮುಖ್ಯಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನಸಾಮಾನ್ಯರ ಕಲ್ಯಾಣಕ್ಕಾಗಿ ವಿವಿಧ ಜನಪರ ಕಾರ್ಯಕ್ರಮ: ರಿಜ್ವಾನ್ ಅರ್ಷದ್
ಕೇಂದ್ರ ಯೋಜನೆ ಅರ್ಜಿ ತಿರಸ್ಕಾರಕ್ಕೆ ವರದಿ ಸಲ್ಲಿಸಲು ಚೌಟ ಸೂಚನೆ