ಕ್ಯಾಂಪ್ಕೋಗೆ ಬೆಳೆಗಾರರ ಹಿತದೃಷ್ಟಿಯೇ ಮುಖ್ಯ: ಕಿಶೋರ್ ಕುಮಾರ್ ಕೊಡ್ಗಿ

KannadaprabhaNewsNetwork |  
Published : Aug 04, 2024, 01:21 AM IST
ಫೋಟೊಪೈಲ್- ೩ಎಸ್ಡಿಪಿ೪- ಸಿದ್ದಾಪುರದಲ್ಲಿ ಕ್ಯಾಂಪ್ಕೊ ಸದಸ್ಯ ಬೆಳೆಗಾರರ ಸಭೆಯನ್ನು ಹಿರಿಯ ಸದಸ್ಯರಿಂದ ಉದ್ಘಾಟಿಸಲಾಯಿತು. ಕಿಶೋರಕುಮಾರ ಕೊಡ್ಗಿ, ಶಂಭುಲಿAಗ ಹೆಗಡೆ ಮುಂತಾದವರು ಉಪಸ್ಥಿತರಿದ್ದರು. | Kannada Prabha

ಸಾರಾಂಶ

ಅಡಕೆ ಸೇವನೆ ಆರೋಗ್ಯಕ್ಕೆ ಹಾನಿ ಎನ್ನುವ ಹೆಸರನ್ನು ಮೊದಲು ಹೋಗಲಾಡಿಸಬೇಕಿದೆ. ಆ ಬಗ್ಗೆ ವಿಜ್ಞಾನಿಗಳಿಂದ ಸಂಶೋಧನೆ ನಡೆಸಿ, ವಿಶ್ವ ಆರೋಗ್ಯ ಸಂಸ್ಥೆಗೆ ಸಲ್ಲಿಸಬೇಕಿದೆ. ಕ್ಯಾಂಪ್ಕೊ ಸಂಸ್ಥೆಯಿಂದ ಗೇರು ಬೀಜದ ರಪ್ತು ವ್ಯವಹಾರಕ್ಕೆ ಸಿದ್ಧತೆಗಳು ನಡೆದಿವೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು.

ಸಿದ್ದಾಪುರ: ದೇಶದ ಕಾನೂನನ್ನು ಪಾಲಿಸುತ್ತ ವ್ಯವಹಾರ ನಡೆಸುತ್ತಿರುವ ಸಹಕಾರ ಸಂಸ್ಥೆಗಳಲ್ಲಿ ಕ್ಯಾಂಪ್ಕೊ ಕೂಡ ಪ್ರಮುಖವಾದದ್ದು. ಆ ಕಾರಣದಿಂದ ಪೈಪೋಟಿ ಜಾಸ್ತಿ ಇದೆ. ಸಂಸ್ಥೆ ಲಾಭವನ್ನು ಮಾತ್ರ ಪರಿಗಣಿಸದೇ ಬೆಳೆಗಾರರ ಹಿತದೃಷ್ಟಿಯನ್ನು ಮುಖ್ಯವಾಗಿರಿಸಿಕೊಂಡಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು.

ಅವರು ಪಟ್ಟಣದ ಟಿಎಂಎಸ್ ಸಭಾಭವನದಲ್ಲಿ ನಡೆದ ಕ್ಯಾಂಪ್ಕೊ ಸಂಸ್ಥೆಯ ಸದಸ್ಯ ಬೆಳೆಗಾರರ ಸಭೆಯ ಅಧ್ಯಕ್ಷತೆ ವಹಿಸಿ ಶನಿವಾರ ಮಾತನಾಡಿ, ತೆರಿಗೆ ಎನ್ನುವ ಗುಮ್ಮ ಎಲ್ಲ ಉದ್ಯಮಗಳನ್ನು ಕಾಡುವಂತೆ ನಮ್ಮ ಸಂಸ್ಥೆಗೂ ಬಾಧಿಸುತ್ತಿದೆ. ಜಿಎಸ್‌ಟಿಯ ಕಾರಣದಿಂದ ವ್ಯಾಪಾರಿಗಳಂತೆ ನಮಗೆ ಬೆಳೆಗಾರರ ಮಹಸೂಲಿಗೆ ಹೆಚ್ಚಿನ ದರ ನೀಡಲು ಸಾಧ್ಯವಾಗುತ್ತಿಲ್ಲ. ಕೇಂದ್ರ ವಿತ್ತ ಸಚಿವೆಯವರಿಗೆ ಅಡಕೆ ವಹಿವಾಟಿಗೆ ಶೇ. ೨ ತೆರಿಗೆ ನಿಗದಿಪಡಿಸಿ ಎಂದು ಬಜೆಟ್ ಪೂರ್ವದಲ್ಲೇ ಮನವಿ ಮಾಡಿದ್ದರೂ ಅವರು ಒಪ್ಪುತ್ತಿಲ್ಲ. ದೇಶದಲ್ಲಿ ಅಂದಾಜು ₹೭೫ ಸಾವಿರ ಕೋಟಿಗಿಂತ ಹೆಚ್ಚು ಅಡಕೆ ವಹಿವಾಟು ನಡೆಯುತ್ತಿದ್ದು, ಶೇ. ೨ ತೆರಿಗೆ ವಿಧಿಸಿದರೆ ನಮಗೂ ಹೆಚ್ಚಿನ ದರ ನೀಡಲು ಸಾಧ್ಯವಾಗುತ್ತಿತ್ತು. ಸುಮಾರು ₹೭೦೦ ಕೋಟಿಯಷ್ಟು ಜಿಎಸ್‌ಟಿ ಕಟ್ಟುತ್ತಿರುವ ಕ್ಯಾಂಪ್ಕೊ ಮಾಡಿಕೊಂಡ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಬೇಕಿತ್ತು. ದರ ಕಡಿಮೆಯಾದರೂ ಸಹಕಾರಿ ಸಂಸ್ಥೆಗಳಲ್ಲಿ ಬೆಳೆಗಾರರು ವ್ಯವಹರಿಸಿ. ಇದರಿಂದ ಬೆಳೆಗಾರರು ಬೇರೆ ಬೇರೆ ರೀತಿಯಲ್ಲಿ ನಷ್ಟ ಅನುಭವಿಸುವುದು ತಪ್ಪುತ್ತದೆ ಎಂದರು.

ಬೆಳೆಗಾರರ ಪ್ರಶ್ನೆಗಳಿಗೆ ಉತ್ತರಿಸಿ ಅಡಕೆ ಸೇವನೆ ಆರೋಗ್ಯಕ್ಕೆ ಹಾನಿ ಎನ್ನುವ ಹೆಸರನ್ನು ಮೊದಲು ಹೋಗಲಾಡಿಸಬೇಕಿದೆ. ಆ ಬಗ್ಗೆ ವಿಜ್ಞಾನಿಗಳಿಂದ ಸಂಶೋಧನೆ ನಡೆಸಿ, ವಿಶ್ವ ಆರೋಗ್ಯ ಸಂಸ್ಥೆಗೆ ಸಲ್ಲಿಸಬೇಕಿದೆ. ಕ್ಯಾಂಪ್ಕೊ ಸಂಸ್ಥೆಯಿಂದ ಗೇರು ಬೀಜದ ರಪ್ತು ವ್ಯವಹಾರಕ್ಕೆ ಸಿದ್ಧತೆಗಳು ನಡೆದಿವೆ ಎಂದರು.

ಸಂಸ್ಥೆಯ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ, ಕ್ಯಾಂಪ್ಕೊ ನಿರ್ದೇಶಕರು, ವ್ಯವಸ್ಥಾಪಕರು, ಸಿಬ್ಬಂದಿ ಪಾಲ್ಗೊಂಡಿದ್ದರು.

ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕ ಡಾ. ಬಿ.ವಿ. ಸತ್ಯನಾರಾಯಣ ಪ್ರಾಸ್ತಾವಿಕ ಮಾತನಾಡಿ, ಸಂಸ್ಥೆಯ ಕಾರ್ಯಚಟುವಟಿಕೆ ವಿವರ ನೀಡಿದರು. ಸಂಸ್ಥೆಯ ಪ್ರಧಾನ ವ್ಯವಸ್ಥಾಪಕಿ ರೇಷ್ಮಾ ಮಲ್ಯ ಸದಸ್ಯರಿಗೆ ಸಂಸ್ಥೆಯ ವತಿಯಿಂದ ನೀಡಲಾಗುವ ಸೌಲಭ್ಯಗಳ ಕುರಿತು, ಕೃಷಿ ಅಧಿಕಾರಿ ಕೃಷ್ಣ ಸಂಸ್ಥೆಯಿಂದ ಉತ್ಪಾದಿಸಲಾಗುತ್ತಿರುವ ಸಾವಯವ ಗೊಬ್ಬರಗಳ ಕುರಿತು ಮಾಹಿತಿ ನೀಡಿದರು.

ಕ್ಯಾಂಪ್ಕೊ ನಿರ್ದೇಶಕ ಶಂಭುಲಿಂಗ ಹೆಗಡೆ ನಿಡಗೋಡ ಸ್ವಾಗತಿಸಿದರು. ನಿರ್ದೇಶಕ ರಾಘವೇಂದ್ರ ಗರ್ತಿಕೆರೆ ವಂದಿಸಿದರು. ಟಿಎಂಎಸ್ ಸಂಸ್ಥೆಯ ಅಧ್ಯಕ್ಷ ಆರ್.ಎಂ. ಹೆಗಡೆ ಬಾಳೆಸರ ಅವರನ್ನು ಸನ್ಮಾನಿಸಲಾಯಿತು.

PREV

Recommended Stories

ಇಂದಿನಿಂದ ಪ್ರೊ ಕಬಡ್ಡಿ ಲೀಗ್‌ ಶುರು : 12ನೇ ಆವೃತ್ತಿ । 12 ತಂಡ, ಒಟ್ಟು 117 ಪಂದ್ಯ
‘ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವವರು ಕಷ್ಟಕ್ಕೆ ಸಿಲುಕ್ತಾರೆ’