ಬೆಂಕಿ ನಂದಿಸುವ ಕಾರ್ಯಕ್ಕೆ ಮೊದಲ ಆದ್ಯತೆ ನೀಡಿ: ರತ್ನಾಪ್ರಭ

KannadaprabhaNewsNetwork |  
Published : Feb 02, 2025, 01:02 AM IST
ಭದ್ರಾವತಿ ನ್ಯೂಟೌನ್ ಜೆಟಿಎಸ್ ಶಾಲೆ ಸಮೀಪದ ಲಯನ್ಸ್ ಕ್ಲಬ್ ಶುಗರ್ ಟೌನ್ ಸಭಾಂಗಣದಲ್ಲಿ ಅರಣ್ಯ ಇಲಾಖೆ ಮುಂಚೂಣಿ ಸಿಬ್ಬಂದಿಗಳಿಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಘಟಕದ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಬೆಂಕಿಯಿಂದ ಅರಣ್ಯ ರಕ್ಷಿಸುವ ಕುರಿತು ಕಾರ್ಯಾಗಾರದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕುರಿತು ಅಣಕು ಪ್ರದರ್ಶನ ನಡೆಸಿಕೊಡಲಾಯಿತು. | Kannada Prabha

ಸಾರಾಂಶ

ಭದ್ರಾವತಿ: ಅರಣ್ಯದಲ್ಲಿ ಬೆಂಕಿ ಅವಘಡಗಳು ಸಂಭವಿಸಿದ ತುರ್ತು ಸಂದರ್ಭಗಳಲ್ಲಿ ಅರಣ್ಯ ಸಿಬ್ಬಂದಿ ಬೆಂಕಿ ನಂದಿಸುವ ನಿಟ್ಟಿನಲ್ಲಿ ಮೊದಲ ಆದ್ಯತೆ ನೀಡಬೇಕೆಂದು ಚನ್ನಗಿರಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಟಿ.ಎ.ರತ್ನಾಪ್ರಭ ಹೇಳಿದರು.

ಭದ್ರಾವತಿ: ಅರಣ್ಯದಲ್ಲಿ ಬೆಂಕಿ ಅವಘಡಗಳು ಸಂಭವಿಸಿದ ತುರ್ತು ಸಂದರ್ಭಗಳಲ್ಲಿ ಅರಣ್ಯ ಸಿಬ್ಬಂದಿ ಬೆಂಕಿ ನಂದಿಸುವ ನಿಟ್ಟಿನಲ್ಲಿ ಮೊದಲ ಆದ್ಯತೆ ನೀಡಬೇಕೆಂದು ಚನ್ನಗಿರಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಟಿ.ಎ.ರತ್ನಾಪ್ರಭ ಹೇಳಿದರು.

ಶನಿವಾರ ನಗರದ ನ್ಯೂಟೌನ್ ಜೆಟಿಎಸ್ ಶಾಲೆ ಸಮೀಪದ ಲಯನ್ಸ್ ಕ್ಲಬ್ ಶುಗರ್ ಟೌನ್ ಸಭಾಂಗಣದಲ್ಲಿ ಅರಣ್ಯ ಇಲಾಖೆ ಮುಂಚೂಣಿ ಸಿಬ್ಬಂದಿಗಳಿಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಘಟಕದಿಂದ ಹಮ್ಮಿಕೊಳ್ಳಲಾಗಿದ್ದ ಬೆಂಕಿಯಿಂದ ಅರಣ್ಯ ರಕ್ಷಿಸುವ ಕುರಿತು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಅರಣ್ಯ ಸಿಬ್ಬಂದಿ ಕರ್ತವ್ಯದ ಸಂದರ್ಭದಲ್ಲಿ ಬೆಂಕಿ ಅವಘಡ ಕುರಿತ ಮಾಹಿತಿ ತಿಳಿದ ತಕ್ಷಣ ಮೊದಲು ಬೆಂಕಿ ನಂದಿಸುವ ಕಾರ್ಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಮುಂದಾಗಬೇಕು. ಅಗ್ನಿ ನಂದಿಸುವ ಕುರಿತು ಹೆಚ್ಚಿನ ಮಾಹಿತಿ ಹೊಂದಿರಬೇಕು. ತುರ್ತು ಸೇವೆಗಳನ್ನು ಬಳಸಿಕೊಂಡು ಬೆಂಕಿ ನಂದಿಸುವ ಮೂಲಕ ಅರಣ್ಯ ಸಂರಕ್ಷಣೆ ಮಾಡಬೇಕು ಎಂದರು. ಅಗ್ನಿಶಾಮಕ ಠಾಣಾಧಿಕಾರಿ ವಸಂತಕುಮಾರ್, ತರೀಕೆರೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್.ಉಮರ್ ಬಾದ್‌ಷಹಾ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಸಿದ್ದಬಸಪ್ಪ, ಅಗ್ನಿಶಾಮಕ ದಳ ಅಧಿಕಾರಿ ಎಲ್.ಎಫ್.ಅಶೋಕ್ ಕುಮಾರ್, ಉಪ ವಲಯ ಅರಣ್ಯಾಧಿಕಾರಿ ಬಿ.ಎಚ್.ದುಗ್ಗಪ್ಪ, ನಿರಂಜನಮೂರ್ತಿ, ಮಹೇಂದ್ರ ಮತ್ತಿತರರಿದ್ದರು.ಲಯನ್ಸ್ ಕ್ಲಬ್ ಆವರಣದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕುರಿತು ಅಣಕು ಪ್ರದರ್ಶನ ನಡೆಸಿಕೊಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು