ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಒತ್ತಾಯ

KannadaprabhaNewsNetwork |  
Published : Oct 05, 2025, 01:00 AM IST
ಸ್ವಾಮಿರಾವ್ ಹಸಿರು ನಿಶಾನೆ ತೋರಿಸಿದರು | Kannada Prabha

ಸಾರಾಂಶ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಜಿಲ್ಲಾ ರೈತ ಸಂಘದ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಪಂಪ್ಡ್ ಸ್ಟೋರೇಜ್ ಅಣುಕು ಶವಯಾತ್ರೆ ನಡೆಸುವ ಮೂಲಕ ಶನಿವಾರದಿಂದ ಪ್ರಾರಂಭಿಸಲಾಗಿದೆ. ಮಾಜಿ ಶಾಸಕ ಬಿ.ಸ್ವಾಮಿರಾವ್ ಹಸಿರು ನಿಶಾನೆ ತೋರಿ ಯೋಜನೆ ಕೈಬಿಡುವ ಹಕ್ಕೊತ್ತಾಯದ ಪತ್ರಕ್ಕೆ ಸಹಿ ಹಾಕುವ ಮೂಲಕ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಸಾಗರ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಜಿಲ್ಲಾ ರೈತ ಸಂಘದ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಪಂಪ್ಡ್ ಸ್ಟೋರೇಜ್ ಅಣುಕು ಶವಯಾತ್ರೆ ನಡೆಸುವ ಮೂಲಕ ಶನಿವಾರದಿಂದ ಪ್ರಾರಂಭಿಸಲಾಗಿದೆ. ಮಾಜಿ ಶಾಸಕ ಬಿ.ಸ್ವಾಮಿರಾವ್ ಹಸಿರು ನಿಶಾನೆ ತೋರಿ ಯೋಜನೆ ಕೈಬಿಡುವ ಹಕ್ಕೊತ್ತಾಯದ ಪತ್ರಕ್ಕೆ ಸಹಿ ಹಾಕುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಸ್ವಾಮಿರಾವ್ ಮಾತನಾಡಿ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅವೈಜ್ಞಾನಿಕವಾಗಿದ್ದು, ಪರಿಸರಕ್ಕೆ ಮಾರಕವಾದ ಯೋಜನೆಯಾಗಿದೆ. ಆಳುವ ಸರ್ಕಾರಗಳು ಮಲೆನಾಡಿಗರ ಮೇಲೆ ಪದೇಪದೇ ಒಂದಿಲ್ಲೊಂದು ಅವೈಜ್ಞಾನಿಕ ಯೋಜನೆ ಹೇರುವ ಕೆಲಸ ಮಾಡುತ್ತಿದೆ. ತಕ್ಷಣ ಯೋಜನೆ ಕೈಬಿಡಬೇಕು. ಈಗ ಅಣಕು ಶವವಿಟ್ಟು ಪ್ರತಿಭಟನೆ ಮಾಡುತ್ತಿದ್ದೇವೆ. ಯೋಜನೆ ಕೈಬಿಡದಿದ್ದರೆ ಜೀವಬಲಿಯಾಗುವುದು ನಿಶ್ಚಿತ ಎಂದರು.

ಪರಿಸರವಾದಿ ಅಖಿಲೇಶ್ ಚಿಪ್ಳಿ ಮಾತನಾಡಿ, ಮಾಹಿತಿ ಹಕ್ಕಿನಲ್ಲಿ ಯೋಜನೆ ಕುರಿತು ಡಿಪಿಆರ್ ಕೇಳಿದರೆ ಕೊಡುತ್ತಿಲ್ಲ. ಜನಸಾಮಾನ್ಯರ ಪ್ರಶ್ನೆಗಳಿಗೆ ಕೆಪಿಸಿಎಲ್ ಸಮರ್ಪಕ ಉತ್ತರ ನೀಡುತ್ತಿಲ್ಲ. ಪರಿಸರ ಮಾರಕವಾದ ಯೋಜನೆ ಕೈಬಿಡದೆ ಹೋದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಮಲೆನಾಡು ಭಾಗವನ್ನು ಒಳಗೊಂಡ ಪ್ರತ್ಯೇಕ ರಾಜ್ಯದ ಬೇಡಿಕೆ ಇರಿಸುವುದು ಅನಿವಾರ್ಯವಾಗುತ್ತದೆ ಎಂದರು.

ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ಯೋಜನೆ ಕುರಿತು ಕೆಪಿಸಿಎಲ್ ಯಾವುದೇ ಮಾಹಿತಿ ಕೊಡುತ್ತಿಲ್ಲ. ಯೋಜನೆ ಕಾರ್ಯಾರಂಭಕ್ಕಿಂತ ಮೊದಲೇ ಹಣ ಬಿಡುಗಡೆ ಮಾಡಿರುವುದು ಅನೇಕ ಅನುಮಾನಕ್ಕೆ ಕಾರಣವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಯೋಜನೆ ಕುರಿತು ಆಸಕ್ತಿ ವಹಿಸಿದ್ದು ಏಕೆ ಎಂದು ಪ್ರಶ್ನಿಸಿದ ಅವರು, ಹೊನ್ನಾವರ ಶಾಸಕರು ಯೋಜನೆ ವಿರೋಧಿಸಿದರೆ ಸಾಗರ ಕ್ಷೇತ್ರದ ಶಾಸಕರು ಯೋಜನೆ ಪರ ವಿಧಾನಸೌಧದಲ್ಲಿ ಮಾತನಾಡಿರುವುದು ಅವರ ಪರಿಸರ ವಿರೋಧಿ ಮನಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ಮಾತನಾಡಿ, ಯೋಜನೆ ಕೈಬಿಡುವವರೆಗೂ ರೈತ ಸಂಘ ನಿರಂತರ ಹೋರಾಟ ನಡೆಸಲಿದೆ. ಯೋಜನೆ ಅನಾನುಕೂಲತೆಯನ್ನು ರೈತ ಸಂಘದ ಪ್ರಮುಖರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಿದ್ದಾರೆ. ಅ. ೪ರಿಂದ ಅ. ೧೫ರವರೆಗೆ ನಿರಂತರವಾಗಿ ಹೋರಾಟ ನಡೆಯಲಿದ್ದು, ರಾಜ್ಯದ ಪ್ರಮುಖ ರೈತ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯ ಸರ್ಕಾರ ಯೋಜನೆ ಕೈಬಿಡುವವರೆಗೂ ರೈತ ಸಂಘ ಹೋರಾಟ ನಡೆಸಲಿದೆ ಎಂದು ಹೇಳಿದರು.

ಪ್ರಮುಖರಾದ ರಮೇಶ್ ಕೆಳದಿ, ಡಾ.ರಾಮಚಂದ್ರಪ್ಪ ಮನೆಘಟ್ಟ, ಭದ್ರೇಶ್ ಬಾಳಗೋಡು, ಕುಮಾರ ಗೌಡ, ಶಿವು ಆಲಳ್ಳಿ, ದೇವರಾಜ್, ರಾಮಚಂದ್ರ, ರಾಜು, ಶ್ರೀಕರ ಹೊಸನಗರ, ಎಸ್.ವಿ.ಹಿತಕರ ಜೈನ್ ಇನ್ನಿತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ