ಎಚ್.ಆಂಜನೇಯ ಪರಿಷತ್‌ಗೆ ನೇಮಕ ಮಾಡಲು ಒತ್ತಾಯ

KannadaprabhaNewsNetwork |  
Published : May 26, 2024, 01:31 AM IST
ಪೋಟೋ೨೫ಸಿಎಲ್‌ಕೆ೩ ಚಳ್ಳಕೆರೆ ನಗರದ ಅಂಬೇಡ್ಕರ್ ವೃತ್ತದ ಬಳಿ ಕರ್ನಾಟಕ ದಲಿತ ಸಂಘರ್ಷಿ ಸಮಿತಿ(ಪರಿವರ್ತನಾವಾದ), ರಾಜ್ಯ ಕಲಾಮಂಡಳಿ ವತಿಯಿಂದ ಎಚ್.ಆಂಜನೇಯಗೆ ಸೂಕ್ತ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದರು. | Kannada Prabha

ಸಾರಾಂಶ

ದಲಿತ ನಾಯಕ ಮಾಜಿ ಮಂತ್ರಿ ಹೆಚ್.ಆಂಜನೇಯರವರನ್ನು ವಿಧಾನ ಪರಿಷತ್‍ಗೆ ನೇಮಕ ಮಾಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಚಿತ್ರದುರ್ಗ ಜಿಲ್ಲೆಯ ಹಿರಿಯ ರಾಜಕಾರಣಿ, ಕಾಂಗ್ರೆಸ್ ಪಕ್ಷದ ಮುತ್ಸದಿ, ಮಾಜಿ ಸಚಿವ ಎಚ್.ಆಂಜನೇಯರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಒತ್ತಾಯಿಸಿರುವುದಾಗಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪರಿವರ್ತನಾವಾದ), ರಾಜ್ಯ ಕಲಾಮಂಡಳಿ ಅಧ್ಯಕ್ಷ ಕೆ.ಟಿ.ಮುತ್ತುರಾಜ್ ತಿಳಿಸಿದರು.

ಅವರು, ಶನಿವಾರ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆ ಬಳಿ ಆಂಜನೇಯರವರ ಭಾವಚಿತ್ರ ಹಿಡಿದು, ಎಚ್.ಆಂಜನೇಯವರ ಹೆಸರನ್ನು ವಿಧಾನ ಪರಿಷತ್‌ಗೆ ಪರಿಣಿಸು ವಂತೆ ಮನವಿ ಮಾಡಿರುವುದಾಗಿ ತಿಳಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಜವಾಬ್ದಾರಿಯುತ ಕಾರ್ಯಗಳನ್ನು ನಿಬಾಯಿಸಿದ್ದಾರೆ. ಪಕ್ಷಕ್ಕಾಗಿ ದುಡಿದ ಅವರಿಗೆ ಸೂಕ್ತ ಸ್ಥಾನ ನೀಡಬೇಕೆಂದರು. ಜಿಲ್ಲಾಧ್ಯಕ್ಷ ಹೆಗ್ಗೆರೆ ಮಂಜುನಾಥ, ಅಂಜಿನಪ್ಪ, ಶ್ರವಣ ಕುಮಾರ್, ತಿಪ್ಪೇಸ್ವಾಮಿ ಮುಂತಾದವರು ಇದ್ದರು. ಪರಿಷತ್ತಿಗೆ ಆಂಜನೇಯರ ಆಯ್ಕೆ ಮಾಡಲಿ: ಜಯಣ್ಣ

ಚಿತ್ರದುರ್ಗ: ದಲಿತ ನಾಯಕ ಮಾಜಿ ಮಂತ್ರಿ ಹೆಚ್.ಆಂಜನೇಯರವರನ್ನು ವಿಧಾನ ಪರಿಷತ್‍ಗೆ ನೇಮಕ ಮಾಡುವಂತೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಣ್ಣ ಕಾಂಗ್ರೆಸ್ ನಾಯಕರುಗಳನ್ನು ಒತ್ತಾಯಿಸಿದ್ದಾರೆ.ಸಮಾಜ ಕಲ್ಯಾಣ ಸಚಿವರಾಗಿದ್ದಾಗ ರಾಜ್ಯದಲ್ಲಿ ಅನೇಕ ಶಾಲಾ-ಕಾಲೇಜುಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‍ಗಳನ್ನು ತೆರೆಯುವ ಮೂಲಕ ಶಿಕ್ಷಣಕ್ಕೆ ಒತ್ತು ಕೊಟ್ಟಿದ್ದಾರೆ. ಎಸ್ಸಿಪಿ. ಟಿಎಸ್ಪಿ. ಯೋಜನೆಯಡಿ ದಲಿತರಿಗೆ ಸಾಕಷ್ಟು ಅನುಕೂಲವಾಗಿದೆ. ತಳಮಟ್ಟದ ಕಾರ್ಯಕರ್ತನಾಗಿ ಪಕ್ಷ ಸಂಘಟನೆಗೆ ಕಳೆದ ನಲವತ್ತು ವರ್ಷಗಳಿಂದಲೂ ಪ್ರಾಮಾಣಿಕವಾಗಿ ದುಡಿಯುತ್ತಿರುವ ಹೆಚ್.ಆಂಜನೇಯರವರು ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡರು ಪಕ್ಷದಿಂದ ಹಿಂದೆ ಸರಿಯಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಪರ ಶಕ್ತಿ ಮೀರಿ ಪ್ರಚಾರ ಮಾಡಿದ್ದಾರೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಶೋಷಿತರ ಪರವಾಗಿರುವ ಹೆಚ್.ಆಂಜನೇಯರವರನ್ನು ವಿಧಾನ ಪರಿಷತ್‍ಗೆ ನೇಮಿಸಿ ದಲಿತರಿಗೆ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಕೆಂಗುಂಟೆ ಜಯಣ್ಣ ಕಾಂಗ್ರೆಸ್ ವರಿಷ್ಠರುಗಳಲ್ಲಿ ಮನವಿ ಮಾಡಿದ್ದಾರೆ.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌