ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಸಂಸದರಾಗಿ ರಮೇಶ ಜಿಗಜಿಣಗಿ ಸತತವಾಗಿ 7ನೇ ಬಾರಿಗೆ ಆಯ್ಕೆಯಾಗುತ್ತಿದ್ದು, ಮೇಲಾಗಿ ಹೈದರಾಬಾದ ಕರ್ನಾಟಕ ಮತ್ತು ಮುಂಬೈ ಕರ್ನಾಟಕದಲ್ಲಿ ಏಕೈಕ ದಲಿತ ವ್ಯಕ್ತಿಯಾಗಿದ್ದಾರೆ. ಅಲ್ಲದೇ, ಸಾರ್ವಜನಿಕ ಜೀವನದಲ್ಲಿ ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ಅನುಭವ ಹಿರಿಯ ರಾಜಕಾರಣಿ. ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದಲ್ಲಿ ಬರುವ ಬೀದರ್, ಕಲಬುರ್ಗಿ, ಯಾದಿಗಿರಿ, ಬಳ್ಳಾರಿ ಜಿಲ್ಲೆಗಳ ಬಿಜೆಪಿ ಬೆಳವಣಿಗೆಯ ದೃಷ್ಟಿಯಿಂದಾಗಿ ರಮೇಶ ಜಿಗಜಿಣಗಿಯವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹೇಮರಡ್ಡಿ ಮೇಟಿ, ನ್ಯಾಯವಾದಿ ಶಿವಣ್ಣ ಲೋಟಗೇರಿ ಆಗ್ರಹಿಸಿದ್ದಾರೆ.
ಲೋಟಗೇರಿಯವರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ರಂಗದಲ್ಲಿ 1ಕಪ್ಪು ಚುಕ್ಕೆ ಇಲ್ಲದ ವ್ಯಕ್ತಿ. ಅಪಾರ ಅನುಭವವುಳ್ಳ ಮೋದಿಯವರ ಸಚಿವ ಸಂಪುಟದಲ್ಲಿ ಇಂತಹ ವ್ಯಕ್ತಿ ಇರಬೇಕು. ಇಂತಹವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವುದರಿಂದ ಪಕ್ಷಕ್ಕೆ ಹೆಚ್ಚಿನ ಬಲ ಬರಲಿದೆ. ಅಲ್ಲದೇ ಡಾ.ಬಿ.ಆರ್.ಅಂಬೇಡ್ಕರವರ ಹಾಗೂ ಡಾ.ಬಾಬು ಜಗಜೀವನರಾಮ್ ಅವರಿಗೆ ಗೌರವ ನೀಡಿದಂತಾಗುತ್ತದೆ. ರಾಷ್ಟ್ರದಲ್ಲಿ 3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ನರೇಂದ್ರ ಮೋದಿಜಿಯವರ ಕೇಂದ್ರ ಸಚಿವ ಸಂಪುಟದಲ್ಲಿ ಬಿಜಾಪುರ ಮತ್ತು ಉತ್ತರ ಕರ್ನಾಟಕಕ್ಕೆ ಪ್ರಾತಿನಿಧ್ಯ ನಿಡಿದಂತೆ ಆಗುತ್ತದೆ ಎಂದು ಒತ್ತಾಯಿಸಿದರು.ನರೇಂದ್ರ ಮೋದಿಜಿ ಮತ್ತು ಜೆ.ಪಿ.ನಡ್ಡಾ, ಅಮಿತ್ ಶಾ, ಬಿ.ಎಸ್.ಯಡಿಯೂರಪ್ಪ ಮತ್ತು ಸಂಘ ಪರಿವಾರವರನ್ನು ಕೇಂದ್ರ ಸಚಿವ ಸಂಪುಟದಲ್ಲಿ ಜಿಗಜಿಣಗಿ ಅವರಿಗೆ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.ಸುದ್ದಿಗೋ಼ಷ್ಠಿಯಲ್ಲಿ ಜಿಪಂ ಮಾಜಿ ಸದಸ್ಯರಾದ ಹೇಮರೆಡ್ಡಿ ಮೇಟಿ, ಮಂಡಲ ಅಧ್ಯಕ್ಷರಾದ ಜಗದೀಶ ಪಂಪಣ್ಣವರ, ಮಾಜಿ ಭೂ ನ್ಯಾಯ ಮಂಡಳಿ ಸದಸ್ಯರಾದ ಎಸ್.ಎಚ್.ಲೋಟಗೇರಿ, ಬಸವರಾಜ ಸರೂರ ಮತ್ತಿತರರು ಇದ್ದರು.ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಸಂಸದರಾಗಿ ರಮೇಶ ಜಿಗಜಿಣಗಿ ಸತತವಾಗಿ 7ನೇ ಬಾರಿಗೆ ಆಯ್ಕೆಯಾಗುತ್ತಿದ್ದು, ಮೇಲಾಗಿ ಹೈದರಾಬಾದ ಕರ್ನಾಟಕ ಮತ್ತು ಮುಂಬೈ ಕರ್ನಾಟಕದಲ್ಲಿ ಏಕೈಕ ದಲಿತ ವ್ಯಕ್ತಿಯಾಗಿದ್ದಾರೆ. ಅಲ್ಲದೇ, ಸಾರ್ವಜನಿಕ ಜೀವನದಲ್ಲಿ ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ಅನುಭವ ಹಿರಿಯ ರಾಜಕಾರಣಿ. ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದಲ್ಲಿ ಬರುವ ಬೀದರ್, ಕಲಬುರ್ಗಿ, ಯಾದಿಗಿರಿ, ಬಳ್ಳಾರಿ ಜಿಲ್ಲೆಗಳ ಬಿಜೆಪಿ ಬೆಳವಣಿಗೆಯ ದೃಷ್ಟಿಯಿಂದಾಗಿ ರಮೇಶ ಜಿಗಜಿಣಗಿಯವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹೇಮರಡ್ಡಿ ಮೇಟಿ, ನ್ಯಾಯವಾದಿ ಶಿವಣ್ಣ ಲೋಟಗೇರಿ ಆಗ್ರಹಿಸಿದ್ದಾರೆ.