ಶಿಗ್ಗಾಂವಿ ತಾಲೂಕಿನಲ್ಲಿ ಕಲ್ಲು ಗಣಿಗಾರಿಕೆಯನ್ನು ಸಂಪೂರ್ಣ ಸ್ಥಗಿತಗೊಳಿಸಬೇಕು. ಇಲ್ಲವಾದರೆ ಕಲ್ಲು ಒಡೆಯುವ ಎಲ್ಲರಿಗೂ ಅವಕಾಶ ನೀಡಬೇಕು ಎಂದು ಅಖಿಲ ಕರ್ನಾಟಕ ಭೋವಿ ಯುವ ವೇದಿಕೆ, ಅಖಿಲ ಕರ್ನಾಟಕ ಭೋವಿ ಕಲ್ಲು-ಬಂಡೆ ಮಣ್ಣು ಮತ್ತು ಕಟ್ಟಡ ಕಾರ್ಮಿಕರ ವೇದಿಕೆಯ ತಾಲೂಕ ಘಟಕದ ಪದಾಧಿಕಾರಿಗಳು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಶಿಗ್ಗಾಂವಿ: ತಾಲೂಕಿನಲ್ಲಿ ಕಲ್ಲು ಗಣಿಗಾರಿಕೆಯನ್ನು ಸಂಪೂರ್ಣ ಸ್ಥಗಿತಗೊಳಿಸಬೇಕು. ಇಲ್ಲವಾದರೆ ಕಲ್ಲು ಒಡೆಯುವ ಎಲ್ಲರಿಗೂ ಅವಕಾಶ ನೀಡುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಭೋವಿ ಯುವ ವೇದಿಕೆ, ಅಖಿಲ ಕರ್ನಾಟಕ ಭೋವಿ ಕಲ್ಲು-ಬಂಡೆ ಮಣ್ಣು ಮತ್ತು ಕಟ್ಟಡ ಕಾರ್ಮಿಕರ ವೇದಿಕೆಯ ತಾಲೂಕ ಘಟಕದ ಪದಾಧಿಕಾರಿಗಳು ಗುರುವಾರ ತಹಸೀಲ್ದಾರ ಸಂತೋಷ ಹಿರೇಮಠರಿಗೆ ಮನವಿ ಸಲ್ಲಿಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ದುರಗಪ್ಪ ವಡ್ಡರ ಮಾತನಾಡಿ, ಕಲ್ಲು ಒಡೆಯುವುದು ಭೋವಿ ಸಮಾಜದ ವೃತ್ತಿಯಾಗಿದೆ. ಹಲವು ವರ್ಷಗಳಿಂದ ಕಲ್ಲು ಒಡೆದು ಜೀವನ ನಡೆಸುತ್ತಿದ್ದಾರೆ. ಇದೀಗ ಮೂರ‍್ನಾಲ್ಕು ವರ್ಷಗಳಿಂದ ಶಿಗ್ಗಾಂವಿ ತಾಲೂಕಿನಲ್ಲಿ ಕಲ್ಲು ಗಣಿಗಾರಿಕೆ ಬಂದು ಮಾಡಿ ಅನ್ಯಾಯ ಮಾಡಲಾಗಿದೆ. ಇದರಿಂದ ದುಡಿಯುವ ಕೈಗಳಿಗೆ ಕೆಲಸವಿಲ್ಲದಂತಾಗಿದೆ. ಸಮಾಜದ ಜನರು ಗುಳೆ ಹೋಗುತ್ತಿದ್ದಾರೆ. ತಾಲೂಕಿನಲ್ಲಿ ಕೆಲವೊಂದು ಕಡೆ ಗಣಿಗಾರಿಕೆ ನಡೆಯುತ್ತಿದೆ. ತಾಲೂಕಿನಾದ್ಯಂತ ಮರಳಿ ಕಲ್ಲು ಗಣಿಗಾರಿಕೆಯನ್ನು ಪ್ರಾರಂಭ ಮಾಡಲು ಅನುಮತಿ ನೀಡಬೇಕು ಅಥವಾ ಸಂಪೂರ್ಣ ಗಣಿಗಾರಿಕೆ ಬಂದು ಮಾಡಬೇಕು. ನಮ್ಮ ಮನವಿಗೆ ೧೫ ದಿನಗಳ ಒಳಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು. ಇಲ್ಲದಿದ್ದರೆ ತಹಸೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲಾ ಉಪಾಧ್ಯಕ್ಷ ಹನುಮಂತಪ್ಪ ಬಂಡಿವಡ್ಡರ, ತಾಲೂಕು ಅಧ್ಯಕ್ಷ ಅಶೋಕ ವಡ್ಡರ, ಯಲ್ಲಪ್ಪ ವಡ್ಡರ, ಸುರೇಶ ವಡ್ಡರ, ಮಂಜುನಾಥ ಗಂಜಿಗಟ್ಟಿ, ಮಂಜುನಾಥ ವಡ್ಡರ, ನಾಗರೆಡ್ಡಿ ವಡ್ಡರ, ಪರಶುರಾಮ ವಡ್ಡರ, ಶಿವಪ್ಪ ವಡ್ಡರ, ಶಂಕ್ರಪ್ಪ ವಡ್ಡರ, ಸಂತೋಷ ವಡ್ಡರ, ಸಿದ್ದಪ ಜಲ್ದಿ, ಶೇಕಪ ತಳಲ್ಲಿ, ಶೇಕಪ್ಪ ವಡ್ಡರ ಇತರರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.