ವಾಲ್ಮೀಕಿ ಭವನ ತಡೆಯಾಜ್ಞೆ ತೆರವಿಗೆ ಒತ್ತಾಯ

KannadaprabhaNewsNetwork |  
Published : Dec 31, 2024, 01:01 AM IST
೩೦ಕೆಎಲ್‌ಆರ್-೪ಕೋಲಾರ ತಾಲೂಕಿನ ರಾಮಸಂದ್ರದಲ್ಲಿ ಅಕ್ರಮ ಖಾತೆಗಳನ್ನು ರದ್ದುಪಡಿಸಿ ಬಡವರಿಗೆ ನ್ಯಾಯ ಒದಗಿಸುವಂತೆ ರಾಮಸಂದ್ರ ಗ್ರಾಮಸ್ಥರು ಹಾಗೂ ವಾಲ್ಮೀಕಿ ಸಮುದಾಯದ ಮುಖಂಡರು ಡಿಸಿ ಡಾ.ಎಂ.ಆರ್.ರವಿರಿಗೆ ಮನವಿಸಲ್ಲಿಸಿದರು. | Kannada Prabha

ಸಾರಾಂಶ

ದಲಿತರ ಅಭಿವೃದ್ಧಿಗೆ ಹಾಗೂ ಸಮುದಾಯದ ಕಾರ್ಯಕ್ರಮಗಳಿಗೆ ಭವನಗಳು ಸಹಕಾರಿಯಾಗುತ್ತವೆ. ಆದರೆ ಕೆಲವರು ಭವನ ನಿರ್ಮಾಣಕ್ಕೆ ಕೋರ್ಟ್ ತಡೆಯಾಜ್ಞೆ ತಂದಿದ್ದಾರೆ. ನರಸಾಪುರ ಹೋಬಳಿಯ ರಾಮಸಂದ್ರ ಗ್ರಾಮದಲ್ಲಿ ಉಳ್ಳವರು ಅನಧಿಕೃತ ಖಾತೆಗಳನ್ನು ಮಾಡಿಕೊಂಡು ಬಡವರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆಂಬ ಆರೋಪಗಳಿವೆ.

ಕನ್ನಡಪ್ರಭ ವಾರ್ತೆ ಕೋಲಾರಜಿಲ್ಲೆಯಾದ್ಯಂತ ಕೆಲವು ಕಡೆಗಳಲ್ಲಿ ವಾಲ್ಮೀಕಿ ಸಮುದಾಯ ಭನವಗಳ ನಿರ್ಮಾಣಕ್ಕೆ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದು, ಇದನ್ನು ತೆರವು ಮಾಡಿಸಿ ಭವನಗಳ ನಿರ್ಮಾಣಕ್ಕೆ ಆದೇಶ ನೀಡಬೇಕು ಹಾಗೂ ರಾಮಸಂದ್ರ ಗ್ರಾಮದಲ್ಲಿನ ಅಕ್ರಮ ಖಾತೆಗಳನ್ನು ರದ್ದುಪಡಿಸಿ ಬಡವರಿಗೆ ನ್ಯಾಯ ಒದಗಿಸುವಂತೆ ಗ್ರಾಮಸ್ಥರು ಹಾಗೂ ವಾಲ್ಮೀಕಿ ಸಮುದಾಯದ ಮುಖಂಡರು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.ವಾಲ್ಮೀಕಿ ಸಮುದಾಯದ ಮುಖಂಡ ಕೋಟೆ ಶ್ರೀನಿವಾಸ್ ಮಾತನಾಡಿ, ದಲಿತರ ಅಭಿವೃದ್ಧಿಗೆ ಹಾಗೂ ಸಮುದಾಯದ ಕಾರ್ಯಕ್ರಮಗಳಿಗೆ ಭವನಗಳು ಸಹಕಾರಿಯಾಗುತ್ತವೆ. ಆದರೆ ಕೆಲವರು ಭವನ ನಿರ್ಮಾಣಕ್ಕೆ ಕೋರ್ಟ್ ತಡೆಯಾಜ್ಞೆ ತಂದಿದ್ದಾರೆ. ನರಸಾಪುರ ಹೋಬಳಿಯ ರಾಮಸಂದ್ರ ಗ್ರಾಮದಲ್ಲಿ ಉಳ್ಳವರು ಅನಧಿಕೃತ ಖಾತೆಗಳನ್ನು ಮಾಡಿಕೊಂಡು ಬಡವರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆಂದು ಆರೋಪಿಸಿದರು. ದೇಗುಲದ ಜಮೀನು ಅಕ್ರಮ ಖಾತೆ

ರಾಮಸಂದ್ರದಲ್ಲಿ ದೇವಸ್ಥಾನದ ಜಮೀನುಗಳನ್ನು ಸಹ ಅಕ್ರಮ ಖಾತೆಗಳನ್ನು ಮಾಡಿದ್ದಾರೆ. ಇಂತಹ ಅಕ್ರಮಗಳಲ್ಲಿ ಅಧಿಕಾರಿಗಲು ಶಾಮೀಲಾಗಿದ್ದಾರೆ. ಅಂತಹವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದರೆ ಜನವರಿ ೭ ರಿಂದ ತಹಸೀಲ್ದಾರ್ ಕಚೇರಿ ಮುಂದೆ ಗ್ರಾಮಸ್ಥರ ಜತೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದರು.ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಬಡವರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ. ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ವಾಲ್ಮೀಕಿ ಸಮುದಾಯ ಭವನಗಳಿಗೆ ತಡೆಯಾಜ್ಞೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯೆ ಮಂಜುಳಾ ಶ್ರೀನಿವಾಸ್, ಗ್ರಾಮಸ್ಥರಾದ ರಾಜಣ್ಣ, ಅರುಣ್ ಕುಮಾರ್, ನಾರಾಯಣಪ್ಪ, ಮುನಿಯಪ್ಪ, ಹನುಮಂತಪ್ಪ, ವೆಂಕಟಸ್ವಾಮಿ, ನಾಗರಾಜ್, ಬಾಲಕೃಷ್ಣ, ಪ್ರವೀಣ್, ವಿಎನ್‌ಎಸ್ ವೆಂಕಟ್, ಹರೀಷ್, ಅರುಣ್ ಕುಮಾರ್, ಅಶ್ವಥ್ ಇದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...