ರಾಜ್ಯದಲ್ಲಿ ವಾಸಿಸುವ ಅನ್ಯ ಭಾಷಿಗರು ಕನ್ನಡ ಕಲಿಯಿರಿ: ಮಾಜಿ ಶಾಸಕ ಎಂ.ಕೆ. ಸೋಮಶೇಖರ್‌

KannadaprabhaNewsNetwork |  
Published : Nov 11, 2024, 11:51 PM IST
22 | Kannada Prabha

ಸಾರಾಂಶ

, ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಲ್ಲಿ ಕನ್ನಡ ನಾಡಿನಾದ್ಯಂತ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತದೆ. ವಿಶ್ವದೆಲ್ಲೆಡೆ ಕನ್ನಡ ಭಾಷೆಗೆ ವಿಶಿಷ್ಟ ಸ್ಥಾನವಿದೆ.

ಕನ್ನಡಪ್ರಭ ವಾರ್ತೆ ಮೈಸೂರು

ಕುವೆಂಪುನಗರ ಕೆಎಸ್ಸಾರ್ಟಿಸಿ ಬಸ್‌ಘಟಕದ ವತಿಯಿಂದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಮಾಜಿ ಶಾಸಕ ಎಂ.ಕೆ. ಸೋಮಶೇಖರ್‌ ಹಾಗೂ ಶಾಸಕ ಕೆ. ಹರೀಶ್‌ಗೌಡ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಕನ್ನಡ ರಾಜ್ಯೋತ್ಸವ ನವೆಂಬರ್ ತಿಂಗಳಲ್ಲಿ ಕನ್ನಡ ನಾಡಿನಾದ್ಯಂತ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತದೆ. ವಿಶ್ವದೆಲ್ಲೆಡೆ ಕನ್ನಡ ಭಾಷೆಗೆ ವಿಶಿಷ್ಟ ಸ್ಥಾನವಿದೆ. ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದಿರುವುದೇ ಇದಕ್ಕೆ ಹಿಡಿದ ಕೈಗನ್ನಡಿ. ಕನ್ನಡಿಗರು ಸ್ವಾಭಿಮಾನಿಗಳು, ಯಾರೇ ರಾಜ್ಯದ ಒಳಗಡೆ ಬದುಕು ನೆಡೆಸಲು ಬಂದರೆ ಪ್ರೀತಿಯಿಂದಲೇ ಸ್ವಾಗತಿಸಿ ಅಪ್ಪಿಕೊಂಡು ಒಪ್ಪಿಕೊಳ್ಳುತ್ತಾರೆ. ಎಲ್ಲಾ ಭಾಷಿಗರು, ಧರ್ಮೀಯರು, ಜಾತಿಯವರು ಬಂದರು ಯಾವ ಭೇದ ಭಾವ ತೋರದೆ ಸಮಾನವಾಗಿ ಕಾಣುತ್ತಾರೆ. ಆದರೆ ಅವರು ಸಹ ಕನ್ನಡವನ್ನು ಕಲಿತು ತಮ್ಮ ಜೀವನ ನೆಡೆಸಬೇಕು. ಬದಲಾಗಿ ಅವರ ಭಾಷೆಯನ್ನು ಕನ್ನಡಿಗರ ಮೇಲೆ ಏರಲು ಹೊರಟರೆ ಅದು ಈ ನೆಲಕ್ಕೆ ಮಾಡುವ ಅಪಮಾನವಾಗುತ್ತದೆ ಎಂದರು.ನಗರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ಟಿ. ವಿರೇಶ್, ಗ್ರಾಮಾಂತರ ನಿಯಂತ್ರಣಾಧಿಕಾರಿ ಶ್ರೀನಿವಾಸ್, ಸಿ.ಎಸ್.ಆರ್ ವ್ಯವಸ್ಥಾಪಕ ನಿರ್ದೇಶಕ ಚಂದ್ರಹಾಸ್, ಘಟಕ ವ್ಯವಸ್ಥಾಪಕ ಶ್ರೀನಿವಾಸ್, ಜವರೇಗೌಡ, ಕಿರಣ್, ಆನಂದ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!