ದೇವನಗೂಲ್ ಗ್ರಾಮದಲ್ಲಿ ಕಾಡಾನೆ ದಾಳಿ: ಬಾಳೆ ಬೆಳೆ ನಾಶ

KannadaprabhaNewsNetwork |  
Published : Apr 12, 2024, 01:03 AM IST
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದಲ್ಲಿ ಬುಧವಾರ ರಾತ್ರಿ  ಕಾಡಾನೆ ದಾಳಿ ನಡೆಸಿ ಬಾಳೆ ಬೆಳೆ ನಾಶ ಮಾಡಿರುವುದು. | Kannada Prabha

ಸಾರಾಂಶ

ದೇವನಗೂಲ್ ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಬಾಳೆ ಬೆಳೆ ನಾಶ ಮಾಡಿದೆ. ಒಂಟಿ ಸಲಗ ಕಳೆದ ಬಾರಿ ಚಾರ್ಮಾಡಿ ಭಾಗದಿಂದ ಬಂದು ದೇವನಗೂಲ್ ಗ್ರಾಮಕ್ಕೆ ಲಗ್ಗೆಯಿಟ್ಟು ವಾಸದ ಮನೆಯ ಹಿಂಭಾಗದಲ್ಲಿ ಬೈನೇಮರ, ಬಾಳೆ ಎಳೆದು ನಾಶ ಮಾಡಿತ್ತು. ಈ ಬಾರಿ ದೇವನಗೂಲ್ ಗ್ರಾಮದ ಗ್ರಾಮಸ್ಥರಾದ ಡಿ.ಟಿ.ಮಂಜುನಾಥ್ ಆಚಾರ್ಯ, ಎಂ.ವೀರಪ್ಪಗೌಡ ಎಂಬುವರ ಮನೆ ಬಳಿ ರಾತ್ರಿ ದಾಳಿ ಮಾಡಿ ಬೃಹತ್ ಬೈನೇಮರ ಹಾಗೂ ಸುತ್ತಮುತ್ತ ಇರುವ ಬಾಳೆ ಬೆಳೆ ನಾಶ ಮಾಡಿ ಸಾಗಿದೆ, ಇದರಿಂದ ಬೆಳೆ ನಾಶವಾಗಿ ನಷ್ಟ ಸಂಭವಿಸಿದೆ.

ಕಾಡಾನೆ ಕಾಫಿ ಗಿಡಗಳನ್ನು ಕೂಡ ತುಳಿದು ರೈತರ ಬೆಳೆ ಹಾನಿ ಮಾಡುತ್ತಿದೆ

ಕನ್ನಡಪ್ರಭ ವಾರ್ತೆ, ಕೊಟ್ಟಿಗೆಹಾರ

ದೇವನಗೂಲ್ ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಬಾಳೆ ಬೆಳೆ ನಾಶ ಮಾಡಿದೆ. ಒಂಟಿ ಸಲಗ ಕಳೆದ ಬಾರಿ ಚಾರ್ಮಾಡಿ ಭಾಗದಿಂದ ಬಂದು ದೇವನಗೂಲ್ ಗ್ರಾಮಕ್ಕೆ ಲಗ್ಗೆಯಿಟ್ಟು ವಾಸದ ಮನೆಯ ಹಿಂಭಾಗದಲ್ಲಿ ಬೈನೇಮರ, ಬಾಳೆ ಎಳೆದು ನಾಶ ಮಾಡಿತ್ತು. ಈ ಬಾರಿ ದೇವನಗೂಲ್ ಗ್ರಾಮದ ಗ್ರಾಮಸ್ಥರಾದ ಡಿ.ಟಿ.ಮಂಜುನಾಥ್ ಆಚಾರ್ಯ, ಎಂ.ವೀರಪ್ಪಗೌಡ ಎಂಬುವರ ಮನೆ ಬಳಿ ರಾತ್ರಿ ದಾಳಿ ಮಾಡಿ ಬೃಹತ್ ಬೈನೇಮರ ಹಾಗೂ ಸುತ್ತಮುತ್ತ ಇರುವ ಬಾಳೆ ಬೆಳೆ ನಾಶ ಮಾಡಿ ಸಾಗಿದೆ, ಇದರಿಂದ ಬೆಳೆ ನಾಶವಾಗಿ ನಷ್ಟ ಸಂಭವಿಸಿದೆ.

ಕಾಫಿ ತೋಟಗಳಲ್ಲಿ ಸಾಗುತ್ತಿರುವ ಕಾಡಾನೆ ಕಾಫಿ ಗಿಡಗಳನ್ನು ಕೂಡ ತುಳಿದು ರೈತರ ಬೆಳೆ ಹಾನಿ ಮಾಡುತ್ತಿರುವುದರಿಂದ ಗ್ರಾಮಸ್ಥರು ಕಾಡಾನೆ ಕಾಟದಿಂದ ಬೇಸತ್ತಿದ್ದಾರೆ. ಹೀಗೆ ಕಾಡಾನೆ ಕಾಟ ಮುಂದುವರಿದರೆ ಜನರ ಪ್ರಾಣಕ್ಕೂ ಕುತ್ತು ಬರಲಿದೆ ಎಂದು ಗ್ರಾಮಸ್ಥ ಎಂ.ವೀರಪ್ಪಗೌಡ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಆನೆ ಕಾರ್ಯಪಡೆ ಬಸವರಾಜ್ ಮಾತನಾಡಿ, ಕಾಡಾನೆ ಯಾವ ಭಾಗದಿಂದ ಬಂದಿದೆ ಎಂದು ಹೆಜ್ಜೆ ಗುರುತು ಪತ್ತೆ ಯಾಗುತ್ತಿಲ್ಲ. ಈ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಬಾಳೆ ಬೆಳೆ ಹಾನಿಯಾದವರು ಸೂಕ್ತ ದಾಖಲೆಯೊಂದಿಗೆ ಅರ್ಜಿ ನೀಡಿದರೆ ಪರಿಹಾರ ನೀಡಲು ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಪರಿಹಾರಕ್ಕೆ ಆಗ್ರಹಿಸಲಾಗುವುದು. ಸದ್ಯಕ್ಕೆ ಗ್ರಾಮಸ್ಥರು ರಾತ್ರಿ ವೇಳೆ ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ಉಪವಲಯ ಅರಣ್ಯಾಧಿಕಾರಿ ಕಿರಣ್, ಗಸ್ತು ಅರಣ್ಯ ಪಾಲಕ ಉಮೇಶ್, ಕಾರ್ಯಪಡೆ ಸಿಬ್ಬಂದಿ ಹೇಮಂತ್, ಮುರಳಿ, ಶಿವಕುಮಾರ್, ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದೇವನಗೂಲ್ ಗ್ರಾಮದ ಭಾಗದಲ್ಲಿ ಪದೇ ಪದೇ ಕಾಡಾನೆ ದಾಳಿ ಮಾಡುತ್ತಿದೆ. ಪರಿಹಾರ ನೀಡುವ ಬದಲು ಕಾಡಾನೆ ಸ್ಥಳಾಂತರ ಮಾಡಬೇಕು ಗ್ರಾಮಸ್ಥ ಡಿ.ಎಂ.ರಾಜು ಆಚಾರ್ಯ ಒತ್ತಾಯಿಸಿದ್ದಾರೆ.

11 ಕೆಸಿಕೆಎಂ 6ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಬಾಳೆ ಬೆಳೆ ನಾಶ ಮಾಡಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ