)
ಬಾಳೆಹೊನ್ನೂರಿನಲ್ಲಿ ಪರಿಸರ ಸೂಕ್ಷ್ಮ ಪ್ರದೇಶದ ಕರಡು ಅಧಿಸೂಚನೆ ವಿರೋಧಿಸಿ ನಡೆದ ರೈತರ ಸಭೆ ಉದ್ಘಾಟನೆ
ಜನರ ಅಹವಾಲು ಸ್ವೀಕರಿಸಲು ಜಿಲ್ಲಾ ಉಸ್ತುವಾರಿ ಸಚಿವರು ತಿಂಗಳಲ್ಲಿ 2 ದಿನ ಕಾರ್ಯಕ್ರಮ ನಡೆಸಬೇಕು. ಶಾಸಕರು ಗ್ರಾಪಂ ಮಟ್ಟದಲ್ಲಿ ಅಹವಾಲು ಸ್ವೀಕರಿಸಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದರು.
ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ರಾಜ್ಯದ 20 ಸಾವಿರ ಚದರ ಕಿ.ಮೀ.ಗೂ ಅಧಿಕ ಪ್ರದೇಶ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ವ್ಯಾಪ್ತಿಯಲ್ಲಿದೆ. ಇದರಲ್ಲಿ 16 ಸಾವಿರ ಚದರ ಕಿ.ಮೀ. ಪ್ರದೇಶದಲ್ಲಿ ಯಾವುದೇ ಸಮಸ್ಯೆ ಇಲ್ಲ. ಉಳಿದ ಸುಮಾರು 4 ಸಾವಿರ ಚದರ ಕಿ.ಮೀ. ಪ್ರದೇಶದಲ್ಲಿ 1,400ಕ್ಕೂ ಹೆಚ್ಚು ಹಳ್ಳಿಗಳಿವೆ. ಈ ಹಿಂದೆ ಹೊರಡಿಸಿದ್ದ ಆರು ಅಧಿಸೂಚನೆಗಳನ್ನು ತಿರಸ್ಕರಿಸಲಾಗಿದೆ. ಇದೀಗ 7ನೇ ಅಧಿಸೂಚನೆ ಬಂದಿದೆ. ಇದೇ ಅಂತಿಮ ಅಧಿಸೂಚನೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ರೈತರು ಹಾಗೂ ಜನರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಲು ಬಿಡುವುದಿಲ್ಲ ಎಂದರು.ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ ಕುದುರೆಮುಖ ರಾಷ್ಟ್ರೀಯ ಉದ್ಯಾನ, ಭದ್ರಾ ಅಭಯಾರಣ್ಯ, ಭದ್ರಾ ಜಲಾಶಯ ಸೇರಿದಂತೆ ವಿವಿಧ ಯೋಜನೆಗಳಿಗೆ ರೈತರ ಜಮೀನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ ಇದುವರೆಗೆ ಪರ್ಯಾಯ ಭೂಮಿ ನೀಡಲು ಸಾಧ್ಯವಾಗಿಲ್ಲ. ಇದೀಗ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿನ ಜನರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ ಎಂದರು.ಶಾಸಕಿ ನಯನಾ ಮೊಟಮ್ಮ ಮಾತನಾಡಿ ಜಿಲ್ಲೆಯಲ್ಲಿ ನೂರಾರು ವರ್ಷಗಳಿಂದ ಕಾಫಿ ತೋಟಗಳಿವೆ. ಇತ್ತೀಚಿನ ವರ್ಷ ಗಳಲ್ಲಿ ಅರಣ್ಯ ಇಲಾಖೆ ನಿಯಮಗಳು, ಮಾನವ–ವನ್ಯಜೀವಿ ಸಂಘರ್ಷ ಸೇರಿದಂತೆ ಹಲವು ಕಾರಣಗಳಿಂದ ಕಾಫಿ ಬೆಳೆ ಗಾರರು ಸಮಸ್ಯೆ ಎದುರಿಸುತ್ತಿದ್ದಾರೆ. ಇದೀಗ ಕಸ್ತೂರಿರಂಗನ್ ವರದಿ ಮಲೆನಾಡಿನ ಜನರ ಬದುಕಿನ ಮೇಲೆ ಮತ್ತೊಂದು ಆತಂಕ ತಂದಿದೆ. ವರದಿ ಯಥಾವತ್ತಾಗಿ ಜಾರಿಯಾದರೆ ಜನರ ಬದುಕು ಸಂಕಷ್ಟಕ್ಕೆ ಸಿಲುಕಲಿದೆ ಎಂದು ಹೇಳಿದರು.ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಕಾಡು ಮತ್ತು ನಾಡನ್ನು ವೈಜ್ಞಾನಿಕವಾಗಿ ಪ್ರತ್ಯೇಕಿಸುವ ಅಗತ್ಯವಿದೆ. ಕೇರಳದಲ್ಲಿ ವೈಜ್ಞಾನಿಕ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಿದ ಪರಿಣಾಮ ಸುಮಾರು 5 ಸಾವಿರ ಚದರ ಕಿ.ಮೀ. ಪ್ರದೇಶ ವನ್ನು ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಯಿಂದ ಹೊರಗಿಡಲು ಸಾಧ್ಯವಾಗಿದೆ. ಅದೇ ಮಾದರಿಯಲ್ಲಿ ಕರ್ನಾಟಕ ದಲ್ಲೂ ತಜ್ಞರ ಸಮಿತಿ ಮೂಲಕ ವೈಜ್ಞಾನಿಕ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಬೇಕು. ಇದರಿಂದ ರಾಜ್ಯದ ಸಂಸದರು ಪಕ್ಷಾತೀತವಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ಸಾಧ್ಯವಾಗಲಿದೆ ಎಂದರು.ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಶಾಸಕರಾದ ಜಿ.ಎಚ್.ಶ್ರೀನಿವಾಸ್, ಎಚ್.ಡಿ.ತಮ್ಮಯ್ಯ, ಕೆ.ಎಸ್. ಆನಂದ್, ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಆರತಿ ಕೃಷ್ಣ, ಎಚ್.ಪಿ.ಮಂಜೇಗೌಡ, ಡಾ.ಕೆ.ಪಿ. ಅಂಶುಮಂತ್, ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಮತ್ತಿತರರು ಇದ್ದರು... ಬಾಕ್ಸ್......ಉನ್ನತ ಮಟ್ಟದ ಸಮಿತಿ ರಚಿಸಿ
ವರದಿ ತಯಾರಿಸಲು ಅರ್ಹರಾದ ತಜ್ಞರನ್ನೇ ನಿಯೋಜಿಸಬೇಕು. ಕಾಡು ಹಾಗೂ ನಾಡನ್ನು ಪ್ರತ್ಯೇಕವಾಗಿ ವರ್ಗೀಕರಿಸ ಬೇಕು. ಅದನ್ನು ಬಿಟ್ಟು ಕೇವಲ ಪರಿಸರಕ್ಕೆ ಸಂಬಂಧಿಸಿದ ವರದಿ ನೀಡಿದರೂ ಜನರಿಗೆ ಸಮಸ್ಯೆಯಾಗಲಿದೆ. ವೈಜ್ಞಾನಿಕ ವರದಿ ಕೇಂದ್ರಕ್ಕೆ ಸಲ್ಲಿಕೆಯಾದಲ್ಲಿ ರಾಜ್ಯದಿಂದ ಆಯ್ಕೆಯಾದ ಸಂಸದರು ಈ ಬಗ್ಗೆ ಸಂಸತ್ ನಲ್ಲಿ ಪಕ್ಷಾತೀತವಾಗಿ ಧ್ವನಿ ಎತ್ತುವುದಾಗಿ ತಿಳಿಸಿದರು....ಬಾಕ್ಸ್.....
ಕಸ್ತೂರಿ ರಂಗನ್ ವರದಿ ಯಥಾವತ್ ಜಾರಿಯಾದಲ್ಲಿ ಮಲೆನಾಡಿನ ಜನರ ಬದುಕು ದುಸ್ತರವಾಗಲಿದೆ. ಒಂದು ವೇಳೆ ಇಂಥ ಸ್ಥಿತಿ ಬಂದಿದ್ದೆ ಆದಲ್ಲಿ ತಾವು ಅಧಿಕಾರ ತ್ಯಾಗಕ್ಕೂ ಸಿದ್ಧರಿರುವುದಾಗಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ತಿಳಿಸಿದರು.