ಕನ್ನಡಪ್ರಭ ವಾರ್ತೆ ತುಮಕೂರು
ಶೀಬಿ ಅರಣ್ಯ ಪ್ರದೇಶಕ್ಕೆ ಶನಿವಾರ ಬೆಳಗ್ಗೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದ ಅವರು, ಬೆಂಗಳೂರು- ಪುಣೆ ಹೆದ್ದಾರಿಯ ಪಕ್ಕದಲ್ಲೇ ಇರುವ ಈ ಅರಣ್ಯ ಭೂಮಿಗೆ ಭಾರೀ ಮೌಲ್ಯವಿದ್ದು, ಕೆಲವರು ಇದನ್ನು ಕಬಳಿಸಲು ಮತ್ತು ಒತ್ತುವರಿ ಮಾಡಲು ಯತ್ನಿಸುತ್ತಿದ್ದಾರೆ. ಹೀಗಾಗಿ ಅರಣ್ಯ ಸಿಬ್ಬಂದಿ ಕಟ್ಟೆಚ್ಚರದಿಂದ ಇರಬೇಕು ಎಂದು ನಿರ್ದೇಶನ ನೀಡಿದರು.
ಕೆಲವರು ನ್ಯಾಯಾಲಯದಲ್ಲಿ ಭೂಮಿಯ ಮಾಲೀಕತ್ವದ ಹೋರಾಟ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್ ಡಿನೋಟಿಫಿಕೇಷನ್ ಆಗದ ಹೊರತು, ಅರಣ್ಯ ಭೂಮಿ ಅರಣ್ಯವಾಗಿಯೇ ಉಳಿಯುತ್ತದೆ ಎಂದು ಹೇಳಿದರಲ್ಲದೆ, ಡಿನೋಟಿಫಿಕೇಷನ್ ಆಗದ ಈ ಅರಣ್ಯದಲ್ಲಿನ ಅಕ್ರಮ ಮಂಜೂರಾತಿ ರದ್ದುಪಡಿಸುವಂತೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ದಾವೆ ಹೂಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಭೂ ಮಾಫಿಯಾದವರು ಬಡವರನ್ನು ಮುಂದಿಟ್ಟುಕೊಂಡು ಬೆಲೆಬಾಳುವ ಭೂಮಿ ಕಬಳಿಸಲು ಯತ್ನಿಸುತ್ತಾರೆ. ಅರಣ್ಯ ಭೂಮಿಯನ್ನು ಕಬಳಿಸಲು ಯತ್ನಿಸುವವರ ವಿರುದ್ಧ ಹಾಗೂ ಅದಕ್ಕೆ ಸಹಕಾರ ನೀಡುವ ಅಧಿಕಾರಿಗಳ ವಿರುದ್ಧವೂ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ಅವರೂ ಸಹ ಈ ಅರಣ್ಯ ಪ್ರದೇಶವನ್ನು ಸಂರಕ್ಷಿಸಲು ಬೇಲಿ ಹಾಕುವ ಬಗ್ಗೆ ಪ್ರಸ್ತಾವನೆ ನೀಡಿದ್ದು, ಈ ಅರಣ್ಯ ಪ್ರದೇಶವು ಭೂ ಮಾಫಿಯಾದ ಪಾಲಾಗದಂತೆ ಉಳಿಸಲು ಎಲ್ಲ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು.