ಆ್ಯಂಟಿ ಡ್ರಗ್ ಕಮಿಟಿ ರಚಿಸಿ: ಡಿಸಿ ಡಾ. ವಿಜಯಮಹಾಂತೇಶ

KannadaprabhaNewsNetwork |  
Published : Jul 10, 2025, 12:45 AM ISTUpdated : Jul 10, 2025, 12:46 AM IST
7ಎಚ್‌ವಿಆರ್2 | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಮಾದಕ ವ್ಯಸನವು ಸಮಾಜ ಮತ್ತು ಮಾನವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಮಸ್ಯೆಗಳಲ್ಲಿ ಒಂದಾಗಿದೆ.

ಹಾವೇರಿ: ಜಿಲ್ಲೆಯಲ್ಲಿ ಮಾದಕವಸ್ತು ಕಳ್ಳಸಾಗಣೆ ಮತ್ತು ಅಕ್ರಮ ವಸ್ತುಗಳ ದುರುಪಯೋಗವನ್ನು ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಸೂಚಿಸಿದರು. ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಎನ್‌ಸಿಒಆರ್‌ಡಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಮಾದಕ ವ್ಯಸನವು ಸಮಾಜ ಮತ್ತು ಮಾನವರ ಮೇಲೆ ವ್ಯತೀರಿಕ್ತ ಪರಿಣಾಮ ಬೀರುವ ಸಮಸ್ಯೆಗಳಲ್ಲಿ ಒಂದಾಗಿದೆ. ಮಾದಕವಸ್ತು ಕಳ್ಳ ಸಾಗಣಿಕೆಯನ್ನು ತಡೆಗಟ್ಟುವಿಕೆ ಹಾಗೂ ನಿಯಂತ್ರಣಕ್ಕೆ ಮುಂದಾಗಬೇಕು. ಅಧಿಕಾರಿಗಳಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಯಾವುದೇ ಭಯವಿಲ್ಲದೆ ನಿರ್ಭೀತಿಯಿಂದ ಕೆಲಸ ಮಾಡುವಂತೆ ಸಲಹೆ ನೀಡಿದರು. ಜಿಲ್ಲೆಯ ಎಲ್ಲ ಶಾಲೆ, ಕಾಲೇಜು ಹಾಗೂ ಹಾಸ್ಟೆಲ್‌ಗಳಲ್ಲಿ ಆ್ಯಂಟಿ ಡ್ರಗ್ಸ್ ಕಮಿಟಿ ರಚಿಸಿ ವಿದ್ಯಾರ್ಥಿಗಳ ಮೇಲೆ ಗಮನ ಹರಿಸಬೇಕು. ಅತಿ ಹೆಚ್ಚು ಪ್ರಮಾಣದಲ್ಲಿ ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಒಳಗಾಗುತ್ತಿರುವುದರ ಬಗ್ಗೆ ವರದಿಯಾಗುತ್ತಿವೆ. ಇದನ್ನು ಹತೋಟಿಗೆ ತರಲು ಆ್ಯಂಟಿ ಡ್ರಗ್ ಕಮಿಟಿ ರಚನೆ ಮಾಡುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸಿ ಕಮಿಟಿ ರಚಿಸಿ ಆ ಮೂಲಕ ಮಾದಕ ವ್ಯಸನಕ್ಕೆ ಒಳಗಾಗುವುದನ್ನು ತಡೆಗಟ್ಟಲು ಕ್ರಮ ವಹಿಸಬೇಕು ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಇಂದು

ಹಾವೇರಿ: ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಜು. 10ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಜರುಗಲಿದೆ. ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಹಾಗೂ ಸಮಾಜದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ