ವಾರದಲ್ಲಿ ಆಂತರಿಕ ದೂರು ಸಮಿತಿ ರಚಿಸಿ ವರದಿ ನೀಡಿ

KannadaprabhaNewsNetwork |  
Published : May 19, 2025, 02:29 AM IST
ಒಂದು ವಾರದೊಳಗೆ ಆಂತರಿಕ ದೂರು ಸಮಿತಿ ರಚಿಸಿ ವರದಿ ಸಲ್ಲಿಸಿ: ಜಿಲ್ಲಾಧಿಕಾರಿ ಟಿ.ಭೂಬಾಲನ್ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಒಂದು ವಾರದೊಳಗಾಗಿ ಆಂತರಿಕ ದೂರು ಸಮಿತಿಯನ್ನು ಕಡ್ಡಾಯವಾಗಿ ರಚಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಒಂದು ವಾರದೊಳಗಾಗಿ ಆಂತರಿಕ ದೂರು ಸಮಿತಿಯನ್ನು ಕಡ್ಡಾಯವಾಗಿ ರಚಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೆಲಸದ ಸಮಯದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ತಡೆ ಕಾಯ್ದೆ (She-Box) ಕುರಿತ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸರ್ವೋಚ್ಛ ನ್ಯಾಯಾಲಯದ ತೀರ್ಪಿನನ್ವಯ ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳೆಯಗೆ ಆಗುತ್ತಿರುವ ತೊಂದರೆ, ದೌರ್ಜನ್ಯ, ಲೈಂಗಿಕ ಕಿರುಕುಳ ತಡೆಗಟ್ಟಲು ಕೇಂದ್ರ ಸರ್ಕಾದಿಂದ ಅಧಿನಿಯಮ-2013 ಜಾರಿಗೊಳಿಸಲಾಗಿದ್ದು, ಹತ್ತಕ್ಕಿಂತ ಹೆಚ್ಚು ಮಹಿಳೆಯರು ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ ಹಾಗೂ ಸಾರ್ವನಿಕ ವಲಯದ ಸಂಸ್ಥೆಗಳು, ಸರ್ಕಾರಿ, ಖಾಸಗಿ, ನಿಗಮ ಮಂಡಳಿ, ಸಾರ್ವಜನಿಕ ಉದ್ದಿಮೆ, ಕಾರ್ಖಾನೆಗಳು, ಖಾಸಗಿ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ, ಖಾಸಗಿ ಆಸ್ಪತ್ರೆ, ಸೇರಿ ಎಲ್ಲಾ ಕಚೇರಿಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಹಾಗೂ ಜಿಲ್ಲಾ ಮಟ್ಟದಲ್ಲಿಯೂ ಕೂಡ ಸ್ಥಳೀಯ ದೂರು ಸಮಿತಿ ರಚಿಸುವುದು ಕಡ್ಡಾಯವಾಗಿದೆ ಎಂದು ಹೇಳಿದರು.

ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆಗಳು, ಸಾರ್ವಜನಿಕ ಸಂಸ್ಥೆಗಳು, ಆದಷ್ಟು ಶೀಘ್ರವಾಗಿ ಸಮೀತಿಗಳನ್ನು ರಚಿಸಬೇಕು. ಸಮಿತಿ ರಚಿಸಿದ ಕುರಿತು ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರಿಗೆ ಕಚೇರಿಗಳ ಪ್ರದರ್ಶನ ಫಲಕಗಳಲ್ಲಿ ಪ್ರದರ್ಶಿಸುವಂತೆ ಅವರು ಸೂಚನೆ ನೀಡಿದರು.

ಜಿಲ್ಲೆಯ ಪ್ರತಿಯೊಂದು ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಣ್ಣು ಮಕ್ಕಳಿಗಾಗಿ ವಿಶ್ರಾಂತಿ ಕೊಠಡಿ ಕಾಯ್ದಿರಿಸುವುದು ಕಡ್ಡಾಯವಾಗಿದೆ. ಕೊಠಡಿ ಕಾಯ್ದಿರಿಸಿದ ಕುರಿತು ಮಾಹಿತಿ ಒದಗಿಸಬೇಕು. ಸಾರ್ವನಿಜಕ ವಲಯದ ಸಂಸ್ಥೆಗಳು, ಸರ್ಕಾರಿ, ಖಾಸಗಿ, ನಿಗಮ ಮಂಡಳಿ, ಸಾರ್ವಜನಿಕ ಉದ್ದಿಮೆ, ಕಾರ್ಖಾನೆಗಳು, ಖಾಸಗಿ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ, ಖಾಸಗಿ ಆಸ್ಪತ್ರೆ, ಸೇರಿ ಎಲ್ಲಾ ಕಚೇರಿಗಳು ಒಂದು ವಾರದೊಳಗೆ ಸಮಿತಿ ರಚಿಸಬೇಕು. ಸಮಿತಿ ರಚಿಸದೇ ಇರುವವರ ವಿರುದ್ದ ಕಾನೂನಿನ ರೀತಿ ಕ್ರಮ ವಹಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸರ್ಕಾರಿ ಕಚೇರಿಗಳಲ್ಲಿ ಸಮಿತಿ ರಚಿಸಿದ ಕುರಿತು ಕೆಲವು ಇಲಾಖೆಗಳ ಮಾಹಿತಿ ಬಾಕಿ ಉಳಿದ ಇಲಾಖೆಗಳು ಶೀಘ್ರವಾಗಿ ಸಮಿತಿ ರಚಿಸಿಕೊಂಡು, ಸಮಿತಿ ರಚಿಸಿದ ವರದಿಯ ವಿವರಗಳನ್ನು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಜಿಲ್ಲಾ ಮಟ್ಟದ ಅಧಿಕರಿಗಳು ಉಪಸ್ಥಿತರಿದ್ದರು.

PREV

Recommended Stories

ಭಕ್ತರ ಸಹಕಾರದಿಂದ ದೇವಸ್ಥಾನದಲ್ಲಿ ಹೊಸತನ
ಪತ್ನಿ ಮೇಲೆ ಹಲ್ಲೆಗೈದು ಅರ್ಧ ತಲೆ ಬೋಳಿಸಿದ ಪತಿ