ಹೈಕೋರ್ಟ್ ಪೀಠ ಸ್ಥಾಪನೆ ಸಾಧ್ಯತೆ ಪರಿಶೀಲನೆಗೆ ಸಮಿತಿ ರಚನೆ ಸ್ವಾಗತ; ರಿಚಾರ್ಡ್ ಕೋಸ್ತ ಎಂ

KannadaprabhaNewsNetwork |  
Published : Oct 01, 2026, 02:45 AM IST
ಸುರಕ್ಷಿತ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ ಮಹತ್ತರ: ಪ್ರಭಾಕರ ಪ್ರಭು | Kannada Prabha

ಸಾರಾಂಶ

ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್‌ ಬೆಂಚ್‌ ಅಥವಾ ಶಾಶ್ವತ ಪೀಠ ಸ್ಥಾಪಿಸುವ ಸಾಧ್ಯತೆಯನ್ನು ಪರಿಶೀಲಿಸಲು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಸಮಿತಿ ರಚಿಸಿರುವುದನ್ನು ವಕೀಲರ ಸಂಘ ಸ್ವಾಗತಿಸಿದೆ.

ಬಂಟ್ವಾಳ : ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್‌ ಬೆಂಚ್‌ ಅಥವಾ ಶಾಶ್ವತ ಪೀಠ ಸ್ಥಾಪಿಸುವ ಸಾಧ್ಯತೆಯನ್ನು ಪರಿಶೀಲಿಸಲು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಸಮಿತಿ ರಚಿಸಿರುವುದನ್ನು ವಕೀಲರ ಸಂಘ ಸ್ವಾಗತಿಸಿದೆ.

ಕರ್ನಾಟಕ ಹೈಕೋರ್ಟ್‌ನ ಸೆ.29ರ ಅಧಿಸೂಚನೆಯಂತೆ, ಮಂಗಳೂರು ಸೇರಿದಂತೆ ಕರಾವಳಿ ಕರ್ನಾಟಕ ಪ್ರದೇಶ, ಮೈಸೂರು, ಕೊಡಗು–ಮಡಿಕೇರಿ, ಹಾಸನ, ದಾವಣಗೆರೆ ಹಾಗೂ ಉತ್ತರ ಕನ್ನಡ ಜಿಲ್ಲಾ ಕೇಂದ್ರಗಳಲ್ಲಿ ಹೈಕೋರ್ಟ್‌ನ ಸರ್ಕ್ಯೂಟ್‌ ಬೆಂಚ್‌ ಅಥವಾ ಶಾಶ್ವತ ಪೀಠ ಸ್ಥಾಪಿಸುವ ಸಾಧ್ಯತೆಯನ್ನು ಪರಿಶೀಲಿಸಲು ಸಮಿತಿ ರಚಿಸಲಾಗಿದೆ.ಕರಾವಳಿ ಭಾಗದ ಜನರು ನ್ಯಾಯಾಂಗ ಸೇವೆಗಾಗಿ ದೂರದ ಬೆಂಗಳೂರು ಸೇರಿದಂತೆ ಇತರ ಪ್ರದೇಶಗಳಿಗೆ ತೆರಳಬೇಕಾಗುವ ಪರಿಸ್ಥಿತಿ ಇದೆ. ಮಂಗಳೂರಿನಲ್ಲಿ ಹೈಕೋರ್ಟ್‌ನ ಪೀಠ ಸ್ಥಾಪನೆಯಾದಲ್ಲಿ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದ ಜನರಿಗೆ ನ್ಯಾಯಾಂಗ ಸೇವೆ ಇನ್ನಷ್ಟು ಸುಲಭವಾಗಿ ಲಭ್ಯವಾಗುವ ಸಾಧ್ಯತೆ ಇದೆ. ವಕೀಲರು ಹಾಗೂ ಕಕ್ಷಿದಾರರಿಗೂ ಸಮಯ ಮತ್ತು ಪ್ರಯಾಣದ ಹೊರೆ ಕಡಿಮೆಯಾಗಲಿದೆ ಎಂಬ ನಿರೀಕ್ಷೆ ಇದೆ.

ಸಮಿತಿಯು ಸಂಬಂಧಪಟ್ಟ ವಕೀಲರ ಸಂಘಗಳು, ನ್ಯಾಯಾಂಗ ಕ್ಷೇತ್ರದ ಪ್ರತಿನಿಧಿಗಳು ಹಾಗೂ ಇತರ ಪಾಲುದಾರರ ಅಭಿಪ್ರಾಯಗಳನ್ನು ಪರಿಗಣಿಸಿ ವಾಸ್ತವಾಂಶಗಳ ಆಧಾರದಲ್ಲಿ ವರದಿ ಸಲ್ಲಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದ ನ್ಯಾಯಾಂಗ ವ್ಯವಸ್ಥೆಯ ಅಗತ್ಯತೆಗಳು, ಮೂಲಸೌಕರ್ಯ ಹಾಗೂ ಸಾರ್ವಜನಿಕರಿಗೆ ಆಗುವ ಅನುಕೂಲಗಳ ಕುರಿತು ಸಮಿತಿಗೆ ಸಮಗ್ರ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ವಕೀಲರ ಸಂಘವೂ ಸಹಕಾರ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠದ ಬೇಡಿಕೆ ಹಲವು ವರ್ಷಗಳಿಂದ ಚರ್ಚೆಯಲ್ಲಿದ್ದು, ಇದೀಗ ಸಾಧ್ಯತೆ ಪರಿಶೀಲನೆಗೆ ಸಮಿತಿ ರಚನೆಯಾಗಿರುವುದು ಈ ವಿಚಾರಕ್ಕೆ ಹೊಸ ಮಹತ್ವ ದೊರೆತಂತಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬತ್ತದ ಗದ್ದೆಗಳಲ್ಲಿ ಬೆಂಕಿ ರೋಗ ಮತ್ತು ಎಲೆಸುರುಳಿ ಹುಳುಗಳ ಬಾಧೆ ಹಾಗೂ ಪರಿಹಾರ
ಸಾರ್ವಜನಿಕ ಜಾಗೃತಿ ಮೂಡಿಸಿದ ಪೋಲೀಸ್ ಸಿಬ್ಬಂದಿ