ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಶುಕ್ರವಾರ ಕಂಬಿಬಾಣೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ರಾಮ ಆರೋಗ್ಯ ತರಬೇತಿಯಲ್ಲಿ ಮಾತನಾಡಿದ ಅವರು, ಪ್ರತಿ ವ್ಯಕ್ತಿಯೂ ಆರೋಗ್ಯವಂತರಾಗಿ ಬದುಕು ಬೇಕೆನ್ನುವ ದಿಸೆಯಲ್ಲಿ ಸರ್ಕಾರ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಪಡೆ ರಚಿಸುವ ಮೂಲಕ ಆರೋಗ್ಯವಂತ ಗ್ರಾಮವನ್ನಾಗಿ ನಿರ್ಮಿಸುವ ಉದ್ದೇಶ ಹೊಂದಿದೆ. ಯಾವುದೇ ವ್ಯಕ್ತಿ ಅನಾರೋಗ್ಯ ಪೀಡಿತರಾದ ಬಗ್ಗೆ ಮಾಹಿತಿ ದೊರೆತ ಕೂಡಲೇ ಅವರನ್ನು ಚಿಕಿತ್ಸೆಗೆ ದಾಖಲಿಸುವ ಕಾರ್ಯಕ್ಕೆ ಮುಂದಾಗಲಿದ್ದಾರೆ. ಅದಕ್ಕಾಗಿಯೇ ಈ ತಂಡವು ಪ್ರತಿ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ತಂಡ ನಿಯೋಜಿಸಲಾಗಿದೆ ಎಂದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಧುಮತಿ ಮಾತನಾಡಿ, ಸರ್ಕಾರ ಗ್ರಾಮೀಣ ಪ್ರದೇಶದಲ್ಲಿರುವ ನೆಲೆಸಿರುವ ಜನತೆಗೆ ಆರೋಗ್ಯ ಸಮಸ್ಯೆಗಳು ಎದುರಾದಾ ಸರ್ಕಾರ ನಿಯೋಜಿಸಿರುವ ಗ್ರಾಮ ಪಂಚಾಯಿತಿ ಕಾರ್ಯಪಡೆ ತಂಡದ ಸದಸ್ಯರಿಗೆ ತಿಳಿಸಿದ್ದಲ್ಲಿ ಅನಾರೋಗ್ಯ ಪೀಡಿತರನ್ನು ಚಿಕಿತ್ಸೆಗಾಗಿ ಸ್ಥಳೀಯ ಆರೋಗ್ಯ ಕೇಂದ್ರಗಳಿಗೆ ಸ್ಥಳಾಂತರಿಸುವ ಕಾರ್ಯ ನಡೆಸಲಿದ್ದಾರೆ ಎಂದರು.ತಾಲೂಕು ಬಿಎಚ್‌ಇಒ ಶಾಂತಿ, ಆರೋಗ್ಯ ಇಲಾಖೆ ಮತ್ತು ಗ್ರಾಮ ಪ್ರದೇಶದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಅಗತ್ಯ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಶಿಬಿರದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧ, ಉಪಾಧ್ಯಕ್ಷ ಶಂಕರ್ ಸದಸ್ಯರಾದ ಆರ್.ಆರ್. ಮೋಹನ್, ಆಶ್ವಿನಿ ಮಧುನಾಗಪ್ಪ ಇದ್ದರು.ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಗ್ರಾಮಸ್ಥರು ಪಾಲ್ಗೊಂಡಿದ್ದರು.