ಅ. 6 ರಂದು ಕೆ.ಆರ್‌. ನಗರದಲ್ಲಿ ಎಚ್‌ಡಿಕೆಗೆ ನಾಗರೀಕ ಸನ್ಮಾನ

KannadaprabhaNewsNetwork |  
Published : Sep 06, 2024, 01:04 AM IST
60 | Kannada Prabha

ಸಾರಾಂಶ

ಕಾರ್ಯಕ್ರಮಕ್ಕೆ ಕ್ಷೇತ್ರದ ವ್ಯಾಪ್ತಿಯ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು

ಕನ್ನಡಪ್ರಭ ವಾರ್ತೆ ಕೆ.ಆರ್. ನಗರ

ಅ. 6 ರಂದು ಪಟ್ಟಣದ ಪುರಸಭೆ ಬಯಲು ರಂಗಮಂದಿರದಲ್ಲಿ ಮಾಜಿ ಮುಖ್ಯಮಂತ್ರಿಗಳೂ ಆದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ನಾಗರೀಕ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಹೇಳಿದರು.

ಪಟ್ಟಣದ ಶ್ರೀರಾಮ ಬಡಾವಣೆಯಲ್ಲಿರುವ ಎಚ್.ಡಿ. ದೇವೇಗೌಡ ಸಮುದಾಯ ಭವನದಲ್ಲಿ ಗುರುವಾರ ನಡೆದ ಎಚ್.ಡಿ. ಕುಮಾರಸ್ವಾಮಿ ಅಭಿನಂದನಾ ಪೂರ್ವಭಾವಿ ಮತ್ತು ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಕೆ.ಆರ್. ನಗರ ವಿಧಾನಸಭಾ ಕ್ಷೇತ್ರ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸೇರ್ಪಡೆಯಾದ ನಂತರ ಇದೇ ಮೊದಲ ಬಾರಿಗೆ ಕ್ಷೇತ್ರದ ಮತದಾರ ಬಾಂಧವರು ನಮ್ಮ ಪಕ್ಷಕ್ಕೆ ಬಹುಮತ ನೀಡಿದ್ದು, ಇದಕ್ಕಾಗಿ ಅವರಿಗೆ ನಾವು ಅಭಾರಿಯಾಗಿದ್ದೇವೆ ಎಂದರು.

ಅಂದು ನಡೆಯುವ ಸನ್ಮಾನ ಕಾರ್ಯಕ್ರಮಕ್ಕೆ ಕ್ಷೇತ್ರದ ವ್ಯಾಪ್ತಿಯ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ ಅವರು, ಬೃಹತ್ ಸಮಾವೇಶ ನಡೆಸುವ ಮೂಲಕ ನಮ್ಮ ನಾಯಕರಿಗೆ ಗೌರವ ಸಲ್ಲಿಸೋಣ ಎಂದು ತಿಳಿಸಿದರು.

ಐತಿಹಾಸಿಕವಾಗಿ ನಡೆಸಿ ದಾಖಲೆ ಬರೆಯುವ ಉದ್ದೇಶದಿಂದ ಒಂದು ತಿಂಗಳ ಮುಂಚಿತವಾಗಿ ಪೂರ್ವಭಾವಿ ಸಭೆ ಕರೆಯಲಾಗಿದ್ದು, ಇದನ್ನು ಅರಿತು ಪಕ್ಷದ ಪ್ರತಿಯೊಬ್ಬರು ಸಂಘಟನಾತ್ಮಕವಾಗಿ ಕೆಲಸ ಮಾಡಿ ಎಚ್‌ಡಿಕೆಯವರ ಅಭಿನಂದನಾ ಸಮಾರಂಭ ಯಶಸ್ವಿಯಾಗಿ ನಡೆಯಲು ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಈ ವಿಚಾರವಾಗಿ ಮುಖಂಡರು ಪದೇ ಪದೇ ಸಭೆ ಮತ್ತು ಸಮಾಲೋಚನೆ ನಡೆಸಿ ನನಗೆ ವರದಿ ನೀಡಬೇಕೆಂದು ತಾಕೀತು ಮಾಡಿದರು.

ಕಾರ್ಯಕ್ರಮದ ನಂತರ 25 ಸಾವಿರ ಮಂದಿಗೆ ಮಾಂಸಹಾರದ ಊಟದ ವ್ಯವಸ್ಥೆ ಮಾಡಲಿದ್ದು, ಇದರ ಜತೆಗೆ ಸಸ್ಯಹಾರಿಗಳಿಗೂ ಪ್ರತ್ಯೇಕವಾಗಿ ಭೋಜನ ನೀಡಲಿದ್ದು, ಸರ್ವರೂ ನಮ್ಮೊಂದಿಗೆ ಕೈ ಜೋಡಿಸಿ ಎಂದು ಮನವಿ ಮಾಡಿದರಲ್ಲದೆ, ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ನಮ್ಮವರು ಸಹಕಾರ ನೀಡಬೇಕು ಎಂದು ಕೋರಿಕೊಂಡರು.

ಕಚೇರಿ ಆರಂಭ: ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದ ನಾಗರೀಕರ ಸಮಸ್ಯೆ ಆಲಿಸಲು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕಚೇರಿ ಆರಂಭಿಸಲಿದ್ದು ಅಲ್ಲಿಗೆ ಎಲ್ಲರೂ ಬಂದು ತಮ್ಮ ಸಮಸ್ಯೆ ಹೇಳಿಕೊಳ್ಳಲು ಅನುಕೂಲವಾಗಲಿದ್ದು ನಾನು ಸಮಯ ಸಿಕ್ಕಾಗ ಅಲ್ಲಿಯೇ ಸಿಗುತ್ತೇನೆ ಎಂದರು. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಂಘಟನೆ ಮಾಡಬೇಕು, ಈ ಕೆಲಸವನ್ನು ಯಶಸ್ವಿಯಾಗಿ ಪೊರೈಸುವವರಿಗೆ ಮುಂಬರುವ ಜಿ.ಪಂ. ಮತ್ತು ತಾ.ಪಂ. ಚುನಾವಣೆಯಲ್ಲಿ ಹೆಚ್ಚಿನ ಆದ್ಯತೆ ನೀಡುವುದಾಗಿ ಪ್ರಕಟಿಸಿದರು.

ಜಿಪಂ ಮಾಜಿ ಉಪಾಧ್ಯಕ್ಷ ಎ.ಎಸ್. ಚನ್ನಬಸಪ್ಪ, ಮಾಜಿ ಸದಸ್ಯರಾದ ಅಮಿತ್ ವಿ. ದೇವರಹಟ್ಟಿ, ಎಂ.ಟಿ. ಕುಮಾರ್, ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ತಾಲೂಕು ಜೆಡಿಎಸ್ ಅಧ್ಯಕ್ಷ ಹಂಪಾಪುರಕುಮಾರ್, ಸಾಲಿಗ್ರಾಮ ತಾಲೂಕು ಅಧ್ಯಕ್ಷ ರಾಜಣ್ಣ, ಯುವ ಜೆಡಿಎಸ್ ಅಧ್ಯಕ್ಷ ಕರ್ತಾಳುಮಧು, ಮಾಜಿ ಅಧ್ಯಕ್ಷ ಎಚ್.ಆರ್. ಮಧುಚಂದ್ರ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಮಿರ್ಲೆ ಅಣ್ಣೇಗೌಡ, ಮೈಮುಲ್ ನಿರ್ದೇಶಕ ಎ.ಟಿ. ಸೋಮಶೇಖರ್, ತಾಲೂಕು ಜೆಡಿಎಸ್ ವಕ್ತಾರ ಕೆ.ಎಲ್. ರಮೇಶ್, ಜಿಲ್ಲಾ ಜೆಡಿಎಸ್ ಮುಖಂಡ ಎಚ್.ಕೆ. ಮಧುಚಂದ್ರ, ಗ್ರಾಮಾಂತರ ಉಪಾಧ್ಯಕ್ಷ ಕಗ್ಗರೆಕುಚೇಲ, ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ದಾಕ್ಷಾಯಿಣಿ, ತಾಲೂಕು ಅಧ್ಯಕ್ಷೆ ರಾಜಲಕ್ಷ್ಮಿ, ನಗರ ಜೆಡಿಎಸ್ ಅಧ್ಯಕ್ಷ ಸಂತೋಷ್ ಗೌಡ, ನಗರ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ರುದ್ರೇಶ್, ಪುರಸಭೆ ಸದಸ್ಯರಾದ ಉಮೇಶ್, ಕೆ.ಪಿ. ಪ್ರಭುಶಂಕರ್, ಕೆ.ಎಲ್. ಜಗದೀಶ್, ಸರೋಜ ಮಹದೇವ್, ಜೆಡಿಎಸ್ ಮುಖಂಡ ಹನಸೋಗೆ ನಾಗರಾಜು, ಅನೀಫ್‌ ಗೌಡ, ಮಂಜು, ಹೊಸಹಳ್ಳಿ ಪುಟ್ಟರಾಜು, ಬಾಲಾಜಿ ಗಣೇಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜಯನಗರ ಪಾಲಿಕೆ ಬಜಾರ್‌ ಮಳಿಗೆಗಳ ಇ-ಹರಾಜು ಮೂಲಕ ವಿತರಿಸಿ: ಮಹೇಶ್ವರ್ ರಾವ್ ಸೂಚನೆ
ರಸ್ತೆ ಅಪಘಾತ ಸೈಕಲ್‌ ಸವಾರ ಸಾವು