ಪುರಾತನ ದೇಗುಲ ನಾಮಫಲಕ ಧ್ವಂಸ: ಕ್ರಮಕ್ಕೆ ಒತ್ತಾಯ

KannadaprabhaNewsNetwork |  
Published : Sep 26, 2026, 01:15 AM IST
ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ, ಮುಜರಾಯಿ ಇಲಾಖೆಗೆ ಸೇರಿದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಮುಖ್ಯದ್ವಾರದ ಬಳಿ ಅಳವಡಿಸಲಾಗಿದ್ದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕಾಂಕ್ರೀಟ್ ನಾಮಫಲಕ ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ನಡೆದಿದೆ.  | Kannada Prabha

ಸಾರಾಂಶ

former, City, Council, member, Taluk, Secretary, action, arrest, culprits responsible

-ಕಿಡಿಗೇಡಿಗಳ ಬಂಧನಕ್ಕೆ ಎಂ.ಈ ಜಗದೀಶ್ ದೂರು

(ಸಣ್‌ ಫೋಟೋ...)

ಕನ್ನಡಪ್ರಭ ವಾರ್ತೆ ಭದ್ರಾವತಿ

ಹಳೇನಗರದ ಪುರಾಣ ಪ್ರಸಿದ್ಧ, ಮುಜರಾಯಿ ಇಲಾಖೆಗೆ ಸೇರಿದ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಮುಖ್ಯದ್ವಾರದ ಬಳಿ ಅಳವಡಿಸಲಾಗಿದ್ದ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕಾಂಕ್ರೀಟ್ ನಾಮಫಲಕ ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ನಡೆದಿದ್ದು, ತಕ್ಷಣ ತಪ್ಪಿತಸ್ಥರನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ನಗರಸಭೆ ಮಾಜಿ ಸದಸ್ಯ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಕಾರ್ಯದರ್ಶಿ ಎಂ.ಈ. ಜಗದೀಶ್ ದೂರಿದ್ದಾರೆ.

ತನ್ನದೇ ಆದ ಪರಂಪರೆ ಹೊಂದಿರುವ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಸಂರಕ್ಷಣೆಗೆ ಒಂದೆಡೆ ಪ್ರಾಚ್ಯ ವಸ್ತುಗಳ ಸಂಗ್ರಹಾಲಯ ಇಲಾಖೆ ಮುಂದಾಗಿದೆ. ಮತ್ತೊಂದೆಡೆ ಕಿಡಿಗೇಡಿಗಳಿಂದ ಈ ರೀತಿಯ ಕೃತ್ಯ ನಡೆಯುತ್ತಿವೆ.

ದೇವಸ್ಥಾನಕ್ಕೆ ಪ್ರತಿದಿನ ನೂರಾರು ಮಂದಿ ಭಕ್ತರು ಆಗಮಿಸುತ್ತಾರೆ. ಕಿಡಿಗೇಡಿಗಳು ನಾಮಫಲಕ ಧ್ವಂಸಗೊಳಿಸಿರುವುದು ಭಕ್ತರ ಮನಸ್ಸಿಗೆ ನೋವುಂಟು ಮಾಡಿದೆ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

ನಾಮಫಲಕ ಧ್ವಂಸ ವಿಚಾರ ಈಗಾಗಲೇ ದೇವಸ್ಥಾನದ ವ್ಯವಸ್ಥಾಪಕ ಸಮಿತಿ ಹಾಗೂ ಅರ್ಚಕರ ಕುಟುಂಬದ ಗಮನಕ್ಕೂ ಸಹ ತರಲಾಗಿದೆ. ತಕ್ಷಣ ತಪ್ಪಿತಸ್ಥ ಕಿಡಿಗೇಡಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕ್ಷೇತ್ರದ ನಾಗರಿಕರ ಪರವಾಗಿ ಕೋರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಫೋಟೊ: ಡಿ೨೫-ಬಿಡಿವಿಟಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರಿಸರ ಸಂರಕ್ಷಿಸಿದರೆ ಮನುಷ್ಯನ ಆರೋಗ್ಯ ಸುಧಾರಣೆ: ಕೆ.ಆರ್.ಶ್ರೀನಿವಾಸ್
ಆರೋಗ್ಯಯುತ ಜೀವನಕ್ಕೆ ಕ್ರೀಡೆಗಳು ಅವಶ್ಯಕ: ಎ.ಸಿ.ಗೀತಾ